Homeಮುಖಪುಟಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

- Advertisement -
- Advertisement -

ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಹಾಯ ಮಾಡುವ ಉದ್ದೇಶದಿಂದ ಆರೆಸ್ಸೆಸ್‌ ದೇಶಾದ್ಯಂತ ಸರಣಿ ಬಾಂಬ್ ಸ್ಪೋಟ ನಡೆಸಿದೆ ಎಂದು ಆರ್‌ಎಸ್‌ಎಸ್ ಪದಾಧಿಕಾರಿಯೊಬ್ಬರು ನಾಂದೇಡ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಬಹಿರಂಗಪಡಿಸಿದ್ದಾರೆ. ತಾನು RSS ಕಾರ್ಯಕರ್ತ ಎಂದು ಹೇಳಿಕೊಂಡಿರುವ ಯಶವಂತ್‌ ಶಿಂಧೆ, “ಆರ್‌ಎಸ್‌ಎಸ್‌ ಮತ್ತು ಅದಕ್ಕೆ ಸಂಬಂಧಿಸಿದ ಸಂಘಟನೆಗಳೇ ದೇಶಾದ್ಯಂತ ಸರಣಿ ಬಾಂಬ್‌ ಸ್ಫೋಟ ನಡೆಸಿದ್ದು, ಬಾಂಬ್‌ ಸ್ಫೋಟಕ್ಕೆ ತರಬೇತಿ ನೀಡುತ್ತಿರುವ ಶಿಬಿರಗಳಲ್ಲಿ ತಾನೂ ಹಾಜರಿದ್ದೆ” ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ, ಶಿಂಧೆ ಹಲವಾರು ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ಪದಾಧಿಕಾರಿಗಳನ್ನು ಹೆಸರಿಸಿದ್ದಾರೆ. ಸಂಘಟನೆಯಿಂದ ಹೋರಾಟಗಾರರನ್ನು ಆಯ್ಕೆ ಮಾಡುವವರೆಗೆ ಹಾಗೂ ಯೋಜನೆಯನ್ನು ಕಾರ್ಯಗತಗೊಳಿಸುವವರೆ ಈ ಪದಾಧಿಕಾರಿಗಳು ಬಾಂಬ್ ಸ್ಫೋಟ ಯೋಜನೆಯ ಹಲವು ಹಂತಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ಹಿಂದುತ್ವದಲ್ಲಿ ಕಟ್ಟಾ ನಂಬಿಕೆಯುಳ್ಳವನೆಂದು ಹೇಳಿಕೊಳ್ಳುವ ಮತ್ತು ಭಯೋತ್ಪಾದಕ ಪ್ರವೃತ್ತಿಯಿಲ್ಲದ ಹಿಂದೂ ಧರ್ಮವನ್ನು ಶ್ರೇಷ್ಠವೆಂದು ಪರಿಗಣಿಸುವ ಶಿಂಧೆ, ಆರ್‌ಎಸ್‌ಎಸ್ ಮತ್ತು ವಿಎಚ್‌ಪಿ ನಡೆಸಿರುವ ಸ್ಫೋಟಗಳ ಮಾಸ್ಟರ್ ಮೈಂಡ್ ಆಗಿರುವ ಮೂವರನ್ನು ಹೆಸರಿಸಿದ್ದಾರೆ.

ಇದನ್ನೂ ಓದಿ: ಗುಜರಾತ್‌: NEP ಮೂಲಕ 1ನೇ ತರಗತಿಯಿಂದಲೇ ಸಂಸ್ಕೃತ ಕಡ್ಡಾಯಕ್ಕೆ ಪ್ರಯತ್ನಿಸುತ್ತಿರುವ ಆರೆಸ್ಸೆಸ್‌‌

ಇಂದ್ರೇಶ್ ಕುಮಾರ್, ಹಿಮಾಂಶು ಪಾನ್ಸೆ, ಮಿಲಿಂದ್ ಪರಾಂಡೆ, ರಾಕೇಶ್ ಧಾವಡೆ ಮತ್ತು ರವಿ ದೇವ್ (ಮಿಥುನ್ ಚಕ್ರವರ್ತಿ) ಈ ಪ್ರಕರಣದ ಪ್ರಮುಖ ಸಂಚುಕೋರರು ಎಂದು ಅಫಿಡವಿಟ್‌ನಲ್ಲಿ ಹೆಸರಿಸಲಾಗಿದೆ. ಮಿಲಿಂದ್ ಪರಾಂಡೆ ಮತ್ತು ರಾಕೇಶ್ ಧಾವಡ್ ತರಬೇತಿ ಶಿಬಿರಗಳನ್ನು ಆಯೋಜಿಸಿದರೆ, ರವಿ ದೇವ್ ಬಾಂಬ್ ತಯಾರಿಕೆಯಲ್ಲಿ ತರಬೇತಿ ನೀಡಿದ್ದಾನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆರೆಸ್ಸೆಸ್‌‌ನಂತೆ ಪಿಎಫ್‌‌ಐ ಕೂಡಾ ದೈಹಿಕ ಶಿಕ್ಷಣದ ನೆಪದಲ್ಲಿ ಯುವಕರ ಬ್ರೈನ್ ವಾಶ್‌ ಮಾಡುತ್ತಿದೆ: ಬಿಹಾರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ

ಶಿಂಧೆ ತಾನು ತಮ್ಮ ನಾಯಕರ ಪರವಾಗಿಲ್ಲ ಎಂದು ಹೇಳಿದ್ದು, ಅವರ ಮಾಡುವ ಘೋರ ಅಪರಾಧಗಳ ಭಾಗವಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ತನಗೆ ಉತ್ತಮ ಸಂಪರ್ಕ ಹೊಂದಿರುವವರನ್ನು ಬಾಂಬ್ ಸ್ಫೋಟಗಳನ್ನು ನಡೆಸದಂತೆ ಮನಪರಿವರ್ತನೆ ಮಾಡಿದ್ದೇನೆ, ಇದರಿಂದಾಗಿ ಅನೇಕ ಅಮಾಯಕ ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಪ್ರಾಣ ಉಳಿಸಲಾಗಿದೆ ಎಂದು ಅವರು ಅಫಿಡವಿಟ್‌ನಲ್ಲಿ ಹೇಳಿದ್ದಾರೆ.

“ದೇಶದಾದ್ಯಂತ ಸ್ಫೋಟಗಳನ್ನು ಮಾಡುವ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಯ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗದ ಕಾರಣ ಬಿಜೆಪಿಗೆ ರಾಜಕೀಯವಾಗಿ ಲಾಭವಾಗಲಿಲ್ಲ. ಪರಿಣಾಮವಾಗಿ, 2004 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಕ್ಕಿತು” ಎಂದು ಅವರು ಹೇಳಿದ್ದಾರೆ.

“ಇದರ ನಂತರ ಮಿಲಿಂದ್ ಪರಾಂಡೆ ಅವರಂತಹ ಪ್ರಮುಖ ಸಂಚುಕೋರರು, ಭಯಭೀತರಾಗಿ ಭೂಗತರಾದರು. ಆದರೆ ಅವರು ರಹಸ್ಯವಾಗಿ ಷಡ್ಯಂತ್ರಗಳನ್ನು ಹೆಣೆಯುವುದನ್ನು ಮುಂದುವರೆಸಿದರು. ಅವರು ಭೂಗತರಾಗಿ ದೇಶಾದ್ಯಂತ ಅನೇಕ ಬಾಂಬ್ ಸ್ಫೋಟಗಳನ್ನು ನಡೆಸಿದರು. ಪಕ್ಷಪಾತಿ ಪೋಲಿಸರು ಮತ್ತು ಏಕಪಕ್ಷೀಯ ಮಾಧ್ಯಮಗಳ ಸಹಾಯದಿಂದ ಇವುಗಳನ್ನು ಮುಸ್ಲಿಮರ ಮೇಲೆ ಆರೋಪಿಸಲಾಯಿತು. ಅದು ಅವರಿಗೆ 2014 ರ ಲೋಕಸಭೆ ಚುನಾವಣೆಯಲ್ಲಿ ಸಹಾಯ ಮಾಡಿತು” ಎಂದು ಅಫಿಡವಿಟ್‌ ಹೇಳಿದೆ.

ಇದನ್ನೂ ಓದಿ: ಮಾತು ಮರೆತ ಭಾರತ; ಊನಾ ಫೈಲ್: ಆರೆಸ್ಸೆಸ್-ಬಿಜೆಪಿಯ ದನದ ರಾಜಕಾರಣ ಮತ್ತು ದಲಿತರು

“2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರವನ್ನು ವಶಪಡಿಸಿಕೊಂಡು ನರೇಂದ್ರ ಮೋದಿ ಪ್ರಧಾನಿಯಾದರು. ಇದು ವಿಶ್ವ ಹಿಂದೂ ಪರಿಷತ್ ಮತ್ತು ಆರ್‌ಎಸ್‌ಎಸ್‌ಗೆ ಸೇರಿದ ಎಲ್ಲಾ ಭೂಗತ ವಿಧ್ವಂಸಕ ಶಕ್ತಿಗಳ ಹಠಾತ್ ಸಕ್ರಿಯಗೊಳಿಸುವಿಕೆಗೆ ಕಾರಣವಾಯಿತು. 2006ರ ನಾಂದೇಡ್ ಸ್ಫೋಟ ಪ್ರಕರಣದಲ್ಲಿ ಉಲ್ಲೇಖಿಸಿರುವ ಮೂವರು ಪ್ರಮುಖ ಸಂಚುಕೋರರನ್ನು ಕಾನೂನಿನ ಮುಂದೆ ತರಬೇಕು” ಎಂದು ಅವರು ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...