HomeಮುಖಪುಟRSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

RSS ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧದ ಅರ್ಜಿ ವಜಾಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮಹಾತ್ಮ ಗಾಂಧಿಯವರ ಹತ್ಯೆಗೆ ಆರ್‌ಎಸ್‌ಎಸ್ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದು, ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಪರಿಗಣಿಸಿ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಆರ್‌ಎಸ್‌ಎಸ್ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ಕುಂಟೆ ಅವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 2014 ರ ಭಾಷಣದ ಲೇಖನಪ್ರತಿಯನ್ನು ಈ ಪ್ರಕರಣದಲ್ಲಿ  ಸಾಕ್ಷಿಯಾಗಿ ತೆಗೆದುಕೊಳ್ಳಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೆಪ್ಟೆಂಬರ್ 2018ರಲ್ಲಿ ತಿರಸ್ಕರಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿ ರಾಜೇಶ್ ಕುಂಟೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ, ನ್ಯಾಯಮೂರ್ತಿ ರೇವತಿ ಮೊಹಿತೆ ಡೆರೆ ಅವರಿದ್ದ ಏಕಸದಸ್ಯ ಪೀಠವು ಮನವಿಯನ್ನು ತಿರಸ್ಕರಿಸಿ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದಿದೆ.

ಅರ್ಜಿದಾರರ ಪರ ವಕೀಲ ನಿತೀನ್ ಪ್ರಧಾನ್ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ 2018 ರ ಆದೇಶವನ್ನು ಪ್ರಶ್ನಿಸಿದ್ದರು. ಜೂನ್ 2018 ರಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಆದರೆ ಸೆಪ್ಟೆಂಬರ್ 2018 ರಲ್ಲಿ ಭಿವಾಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ರಾಹುಲ್ ಗಾಂಧಿ ಅವರ ಮಾರ್ಚ್ 6, 2014ರ ಭಾಷಣದ ಪ್ರತಿಯನ್ನು ಸಾಕ್ಷಿಯಾಗಿ ಒಪ್ಪಿಕೊಳ್ಳಲು ನಿರಾಕರಿಸಿತ್ತು.

ಇದನ್ನೂ ಓದಿ: ಜನರ ದನಿ ಅಡಗಿಸಲು ಪೆಗಾಸಸ್ ಆಯುಧ ಬಳಸಲಾಗುತ್ತಿದೆ : ರಾಹುಲ್ ಗಾಂಧಿ

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ 2014 ರ ಮಾರ್ಚ್ 6 ರಂದು ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಂದಿನ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾತ್ಮ ಗಾಂಧಿ ಹತ್ಯೆಯ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಆರೋಪಿಸಿದ್ದರು.

“ಕಾಂಗ್ರೆಸ್ ನಾಯಕ ತಮ್ಮ ಭಾಷಣದ ಮೂಲಕ ಸಂಘದ ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ” ಎಂದು ಆರೋಪಿಸಿ, ರಾಜೇಶ್ ಕುಂಟೆ ಭಿವಾಂಡಿ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಮಾರ್ಚ್ 2015 ರಲ್ಲಿ, ಬಾಂಬೆ ಹೈಕೋರ್ಟ್ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿದ್ದ ರಾಹುಲ್ ಗಾಂಧಿಯವರ ಮನವಿಯನ್ನು ವಜಾಗೊಳಿಸಿ, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಲು ವಿಶೇಷ ರಜೆ ಅರ್ಜಿಯನ್ನು ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಲು ತಿಳಿಸಿದ್ದರು.

ಆದರೆ, ಸುಪ್ರೀಂಕೋರ್ಟ್‌ನಲ್ಲಿ ಮನವಿ ಹಿಂತೆಗೆದುಕೊಂಡಿದ್ದ ರಾಹುಲ್ ಗಾಂಧಿ, ವಿಚಾರಣೆಯನ್ನು ಎದುರಿಸಲು ಸಿದ್ಧ ಎಂದು ತಿಳಿಸಿದ್ದರು. ಜೊತೆಗೆ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದರು.

ಈ ವರ್ಷ ಫೆಬ್ರವರಿಯಲ್ಲಿ, ಕೊರೊನಾ ನಿರ್ಬಂಧಗಳಿಂದಾಗಿ ಪ್ರಯಾಣಿಸಲು ಸಾಧ್ಯವಾಗದ ಕಾರಣ ನ್ಯಾಯಾಲಯಕ್ಕೆ ಹಾಜರಾಗುವುದರಿಂದ ವಿನಾಯಿತಿ ನೀಡಬೇಕು ಎಂದು ರಾಹುಲ್ ಗಾಂಧಿಯ ವಕೀಲರು ಮನವಿ ಸಲ್ಲಿಸಿದ್ದರು. ವಿನಾಯಿತಿ ನೀಡಿದ್ದ ನ್ಯಾಯಾಲಯ ವಿಚಾರಣೆಯನ್ನು ಮುಂದೂಡಿತ್ತು.


ಇದನ್ನೂ ಓದಿ: ಧರ್ಮವನ್ನು ಲಾಭಕ್ಕಾಗಿ ಬಳಸುವ ಬಿಜೆಪಿ-RSS ನಕಲಿ ಹಿಂದೂಗಳು- ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಹಾಗೆ ಇಲಕ್ಷನ ಭಾಷಣದಲ್ಲಿ ಮೋದಿಯವೀರುದ್ದ Cheating case book ಮಾಡಬೆಕಿತ್ತಲವಾ ?

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...