Homeಮುಖಪುಟ'ಆರ್‌ಎಸ್‌ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ’: ಪ್ರಿಯಾಂಕ್ ಖರ್ಗೆ ಆರೋಪ

‘ಆರ್‌ಎಸ್‌ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ’: ಪ್ರಿಯಾಂಕ್ ಖರ್ಗೆ ಆರೋಪ

- Advertisement -
- Advertisement -

ಬೆಂಗಳೂರು: ‘ಇತಿಹಾಸವು ಆರ್‌ಎಸ್‌ಎಸ್ ದೇಶಕ್ಕೆ ಬಗೆದ ದ್ರೋಹದ ಉದಾಹರಣೆಗಳಿಂದ ತುಂಬಿಕೊಂಡಿದೆ. ಇಡೀ ಬಿಜೆಪಿ ವ್ಯವಸ್ಥೆ ಎಷ್ಟೇ ಪ್ರಯತ್ನಿಸಿದ್ದರೂ ಆರ್‌ಎಸ್‌ಎಸ್‌ನ ಸಂವಿಧಾನ ವಿರೋಧಿ ಚರಿತ್ರೆಯನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. 

ನವೆಂಬರ್ 10, ಸೋಮವಾರ ಈ ಸಂಬಂಧ ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ‘1948ರ ಫೆಬ್ರುವರಿ 24ರಂದು ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಹೇಗೆ ಅವಮಾನಿಸಿತ್ತು ಎಂಬುದನ್ನು ತೋರಿಸುವ ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್‌ನ ಕಾರ್ಯದರ್ಶಿಗೆ ಬರೆದ ಪತ್ರ ಇಲ್ಲಿದೆ’ ಎಂದು ದಾಖಲೆ ಹಂಚಿಕೊಂಡಿದ್ದಾರೆ.

ಇದರೊಂದಿಗೆ ‘ಆರ್‌ಎಸ್‌ಎಸ್ ನಮ್ಮ ರಾಷ್ಟ್ರಧ್ವಜಕ್ಕೆ ಅಗೌರವ ತೋರಿ 100 ವರ್ಷ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷ, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷ, ದೇಶ ವಿರೋಧಿತ್ವಕ್ಕೆ 100 ವರ್ಷಗಳು’ ಎಂದು ಅವರು ಟೀಕಿಸಿದ್ದಾರೆ.

ಬಿಜೆಪಿ ನಾಯಕರು ಹಾಗೂ ಸ್ವಯಂಸೇವಕರು ನಿಜವಾದ ಆರ್‌ಎಸ್‌ಎಸ್ ಇತಿಹಾಸವನ್ನು ತಿಳಿದುಕೊಳ್ಳುವ ಸಮಯ ಇದು ಎಂದು ಹೇಳಿದ್ದಾರೆ.  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. He doesn’t have work for Development activities because of State Govt Bankrupt so he is doing all these non usable allegations to divert public attention and NEws channels towards non require matter

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...