Homeಕರ್ನಾಟಕRSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

RSS ಪಥಸಂಚಲನವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ: ಪ್ರಿಯಾಂಕ್ ಖರ್ಗೆ

- Advertisement -
- Advertisement -

ಕಲಬುರಗಿ: RSS ಪಥಸಂಚಲನೆ ವಿಚಾರವನ್ನು ಪ್ರತಿಷ್ಠೆಯನ್ನಾಗಿ ತೆಗೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.  

ಕಲಬುರಗಿಯ ಐವಾನ್ – ಇ- ಶಾಹಿ ಅತಿಥಿಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದೇ ದಿನದಂದು, ಅಲ್ಲೇ ಪಥಸಂಚಲಮಾಡುತ್ತೇವೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ, ತಾವೂ ಸಹ ಅಲ್ಲೇ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್‌ನಲ್ಲಿದೆ. ಈ ವಿಷಯದಲ್ಲಿ ನ್ಯಾಯಾಲಯ ನೀಡುವ ಆದೇಶವನ್ನು ಎಲ್ಲರೂ ಪಾಲಿಸಬೇಕಾಗುತ್ತದೆ’ ಎಂದಿದ್ದಾರೆ. 

RSS ನವರು ಕಲಬುರಗಿ ಸೇರಿದಂತೆ ಎಲ್ಲ ಕಡೆ ಮಾಹಿತಿ ನೀಡಿದ್ದಾರೆ ಹೊರತು ಅನುಮತಿ ಕೇಳಿಲ್ಲ. ಇವರು ಕೇಳಿದ ತಕ್ಷಣ ಭದ್ರತೆ ಕೊಡಲು ಪೊಲೀಸರಿಗೇನು ಕೆಲಸ ಇಲ್ಲವಾ? ಚಿತ್ತಾಪುರದಲ್ಲಿ ಅನುಮತಿ ನಿರಾಕರಿಸಿದ್ದರಿಂದ ಹೈಕೋರ್ಟ್‌ಗೆ ಹೋದರು. ಇತರರು ಕೂಡಾ ನಮಗೂ ಅನುಮತಿ ಕೊಡಿ ಎಂದರು. ನೋಂದಣಿಯಾಗದ ಒಂದು ಸಂಸ್ಥೆಯ ಕಾರ್ಯಕರ್ತರು ಕೈಯಲ್ಲಿ ದೊಣ್ಣೆ ಹಿಡಿದು ಪಥಸಂಚಲನ ಮಾಡಿದರೆ, ಸಾರ್ವಜನಿಕರಿಗೆ ಭೀತಿ ಆಗುವುದಿಲ್ಲವಾ? ಏನಾದರೂ ಹೆಚ್ಚು‌ಕಮ್ಮಿಯಾದರೆ ಯಾರು ಜವಾಬ್ದಾರರು?’ ಎಂದು ಪ್ರಶ್ನಿಸಿದರು.

‘ಲಾಠಿ ಹಿಡಿಯುವ ವಿಚಾರದಲ್ಲಿ‌ ಎಲ್ಲಾ ಕಡೆ ಏನೂ ತಕರಾರು ಇಲ್ಲ. ಚಿತ್ತಾಪುರದಲ್ಲಿ ಮಾತ್ರವೇ ಯಾಕೆ?’ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಚಿತ್ತಾಪುರದಲ್ಲಿ ಕಾನೂನು ಇದೆ. ಹಾಗೆ ಎಲ್ಲ‌ ಕಡೆಯೂ ಇದೆ. ಆದರೆ‌ ಚಿತ್ತಾಪುರ ಯುವಕರ ಭವಿಷ್ಯತ್ತಿನ ಪ್ರಶ್ನೆ ಬಂದಾಗ ಕಾನೂನು ಪ್ರಕಾರ ಕ್ರಮ ಜರುಗಿಸಲಾಗಿದೆ. ಈಗ ವಿಚಾರ ಹೈಕೋರ್ಟ್‌ನಲ್ಲಿದೆ. ನ್ಯಾಯಾಲಯ ಲಾಠಿ‌ ಹಿಡಿದು ಪಥಸಂಚಲನ ನಡೆಸಲು ಅನುಮತಿ ನೀಡಿದರೆ‌ ನಮ್ಮದೇನು ಅಭ್ಯಂತರವಿಲ್ಲ’ ಎಂದು ಉತ್ತರಿಸಿದ್ದಾರೆ.

ಈ ಎಲ್ಲ ಬೆಳವಣಿಗೆ ನಂತರ ತಮ್ಮನ್ನು ಟಾರ್ಗೆಟ್ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, ‘ಮಾಡಲಿ ಬಿಡಿ. ಪ್ರಶ್ನೆ ಎತ್ತಿದ್ದು ನಾನೇ ತಾನೆ. ಬೇರೆಯವರ ಐಡಿಯಾಲಜಿ ಬಗ್ಗೆ ನಾನು ಹೇಳುವುದಿಲ್ಲ. ನನ್ನ ಐಡಿಯಾಲಜಿ, ಸಿಎಂ ಅವರ ಐಡಿಯಾಲಜಿ, ಖರ್ಗೆ ಸಾಹೇಬರ  ಐಡಿಯಾಲಜಿ, ರಾಹುಲ್ ಗಾಂಧಿಯವರ ಐಡಿಯಾಲಜಿ ಸರಿ‌ ಇದೆಯಲ್ಲ, ಅಷ್ಟು ಸಾಕು’ ಎಂದರು.

‘ಸೇಡಂ‌ನಲ್ಲಿ ಕಾನೂನು ಉಲ್ಲಂಘನೆ ಮಾಡಿ ಪಥ ಸಂಚಲನ ಮಾಡಿದ್ದಾರೆ. ಅದನ್ನು ಕೋರ್ಟ್ ಗಮನಕ್ಕೆ ತರಲಾಗುವುದು’ ಎಂದ ಸಚಿವರು, ‘ಎಲ್ಲವೂ ಪರಿಗಣನೆ ಆಗುತ್ತದೆ. ಅಂದಿನ ಶಾಂತಿ ಸಭೆಯಲ್ಲಿ ಆರ್‌ಎಸ್‌ಎಸ್ ಬದಲು ಬಿಜೆಪಿಯವರಿಗೇನು ಕೆಲಸ? ಅಶೋಕ ಪಾಟೀಲ ಯಾಕೆ ಅಂದಿನ ಶಾಂತಿ ಸಭೆಗೆ ಹೋಗಿಲ್ಲ? ಅವರ ಬದಲು ಬಿಜೆಪಿಯವರು ಯಾಕೆ ಹೋಗಿದ್ದರು? ಅವರು ಶಾಂತಿ ಸಭೆಗೆ ಬಂದಿದ್ದರೋ ಅಥವಾ ಶಾಂತಿ ಭಂಗ ಉಂಟು ಮಾಡಲು ಬಂದಿದ್ದರೋ?’ ಎಂದು ಪ್ರಶ್ನಿಸಿದರು.

‘ಆರ್‌ಎಸ್‌ಎಸ್ ನೋಂದಣಿ ಪತ್ರದ ವಿಚಾರ ಕುರಿತಂತೆ ಹೈಕೋರ್ಟ್‌ನಲ್ಲಿ ಸರಿಯಾದ ಸಮಯದಲ್ಲಿ ಪ್ರಶ್ನೆ ಮಾಡಲಾಗುವುದು. ಈಗ ಪಥಸಂಚಲನದ ವಿಚಾರ ಮಾತ್ರ ಬಂದಿದೆ. ಅನುಮತಿ‌ ಸಿಕ್ಕರೆ ನೋಂದಣಿ ವಿಚಾರದಲ್ಲಿಯೂ ಕಾನೂನು ಪ್ರಕಾರ ನೋಡಿಕೊಳ್ಳಲಾಗುವುದು’ ಎಂದು ಸಚಿವ ಪ್ರಿಯಾಂಕ್‌ ಹೇಳಿದರು.

‘ಸಾರ್ವಜನಿಕ ಸ್ಥಳಗಳ ಬಳಕೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದ ನಂತರ, ಆರ್‌ಎಸ್‌ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ನಾನು ಇದನ್ನು ಪ್ರಚಾರಕ್ಕೆ ಮಾಡುತ್ತಿದ್ದೇನೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌. ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ. ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಬಂಧಿಸಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್‌ಎಸ್‌ಎಸ್ ಇದೆ ಅಂದಿದ್ದಾನೆ. ಬಂಧಿತ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು? ಅವರಿಗೂ ಶಿಕ್ಷೆಯಾಗಬೇಕಲ್ಲವೇ?’ ಎಂದು ಪ್ರಶ್ನಿಸಿದರು.

‘ಬೇರೆ ಬೇರೆ ಕಡೆ ನಡೆದ ಪಥಸಂಚಲನದಲ್ಲಿ ಭಾಗಿಯಾದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಸರ್ವೀಸ್ ರೂಲ್ಸ್ ಪ್ರಕಾರ ಕ್ರಮ ಜರುಗಿಸಲಾಗುವುದು. ಕೇಂದ್ರ ಸರ್ಕಾರದ‌ ಆದೇಶ ರಾಜ್ಯ ಸರ್ಕಾರದ ನೌಕರರಿಗೂ ಅನ್ವಯವಾಗುತ್ತದೆ ಎಂದು‌ ಭಾವಿಸಿದ್ದಾರೆ. ಅದು ಹಾಗೆ ಆಗುವುದಿಲ್ಲ’ ಎಂದು ಎಚ್ಚರಿಸಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...