Homeಕರ್ನಾಟಕಆರೆಸ್ಸೆಸ್‌ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ: ಸಿಎಂ ಬಸವರಾಜ ಬೊಮ್ಮಾಯಿ

ಆರೆಸ್ಸೆಸ್‌ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ: ಸಿಎಂ ಬಸವರಾಜ ಬೊಮ್ಮಾಯಿ

- Advertisement -
- Advertisement -

ಆರೆಸ್ಸೆಸ್‌ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆಯಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೆಸ್ಸೆಸ್‌‌ ನಿಷೇಧ ಮಾಡಿ ಎಂದು ಹೇಳುವುದೇ ದುರ್ದೈವದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಪಿಎಫ್‌ಐ ಜೊತೆಗೆ ಆರೆಸ್ಸೆಸ್‌‌ ಅನ್ನು ಕೂಡಾ ನಿಷೇಧ ಮಾಡಿ ಎಂದು ಆಗ್ರಹಿಸಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ,“ಪಿಎಫ್‌ಐ ಯಾಕೆ ನಿಷೇಧಿಸಿದ್ದೀರಿ ಎಂದು ಕೇಳಲು ಕಾಂಗ್ರೆಸ್‌ಗೆ ಯಾವ ಆಧಾರಗಳಿಲ್ಲ. ಯಾಕೆಂದರೆ ಅವರೇ ಪಿಎಫ್‌ಐ ಪ್ರಕರಣಗಳನ್ನು ಹಿಂಪಡೆದಿದ್ದರು. ಈಗ ಅದನ್ನು ಮರೆಮಾಚಲು ಆರೆಸ್ಸೆಸ್‌ ನಿಷೇಧಿಸಲು ಹೇಳುತ್ತಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಆರೆಸ್ಸೆಸ್‌ ಅನ್ನು ಯಾಕೆ ನಿಷೇಧಿಸಬೇಕೆಂದು ಹೇಳುವುದಿಲ್ಲ. ದೀನದಲಿರು, ಅನಾಥರಿಗೆ ಹಲವಾರು ಸಂಸ್ಥೆಗಳನ್ನು ಕಟ್ಟಿದ್ದಾರೆ. ಪ್ರವಾಹ ಮುಂತಾದ ಸಂಕಷ್ಟದ ಸಂದರ್ಭದಲ್ಲಿ ಮುಂದೆ ನಿಂತು ಕೆಲಸ ಮಾಡುತ್ತಾರೆ. ಆರೆಸ್ಸೆಸ್‌ ದೇಶಪ್ರೇಮದ ಜಾಗೃತಿ ಮೂಡಿಸುತ್ತಿರುವ ಸಂಘಟನೆ. ಸಿದ್ದರಾಮಯ್ಯ ಅವರು ಈ ಮಟ್ಟಕ್ಕೆ ಇಳಿಯಬಾರದಿತ್ತು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ಗೆಲುವಿಗೆ ಆರೆಸ್ಸೆಸ್‌‌ ಭಾರತದಾದ್ಯಂತ ಬಾಂಬ್ ಸ್ಫೋಟ ನಡೆಸಿದೆ: ಕಾರ್ಯಕರ್ತನ ಸ್ಪೋಟಕ ಹೇಳಿಕೆ

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಏರ್ಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, “ಅದು ಅವರ ಪಕ್ಷದ ಆಂತರಿಕ ವಿಚಾರ. ಈ ಬಗ್ಗೆ ನನ್ನ ವ್ಯಾಖ್ಯಾನ ಇಲ್ಲ. ಪ್ರಥಮ ಬಾರಿಗೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿರುವುದರಿಂದ ಹೀಗಾಗುತ್ತಿರಬಹುದು” ಎಂದು ವ್ಯಂಗ್ಯವಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿಯತ್ತ ಬಾಣದ ಸನ್ನೆ: ವಿವಾದ ಸೃಷ್ಟಿಸಿದ ಹೈದರಾಬಾದ್ ಬಿಜೆಪಿ ಅಭ್ಯರ್ಥಿ

0
ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡಿದ ವಿಡಿಯೋವೊಂದು ವೈರಲ್ ಆಗಿದ್ದು, ಆಕ್ರೋಶ ವ್ಯಕ್ತವಾಗಿದೆ. ಕಳೆದ ಬುಧವಾರ ನಡೆದ ರಾಮನವಮಿಯ ಮೆರವಣಿಗೆ ಸಂದರ್ಭದಲ್ಲಿ ಹೈದರಾಬಾದ್‌ನ...