Homeಕರ್ನಾಟಕRSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

RSS ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಎಚ್.ಡಿ. ಕುಮಾರಸ್ವಾಮಿ ತಿರುಗೇಟು

- Advertisement -
- Advertisement -

ಆರ್‌ಎಸ್‌ಎಸ್‌ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳಲು ಸಂಘದ ಶಾಖೆಗೆ ಬನ್ನಿ ಎಂದಿದ್ದ ಸಿ.ಟಿ.ರವಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, “ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ” ಎಂದು ವ್ಯಂಗ್ಯವಾಡಿದ್ದಾರೆ.

“ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ..?” ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಸಿಬ್ಬಂದಿಯ ಹೆಂಡತಿ, ಮಕ್ಕಳ ಆತ್ಮಹತ್ಯೆ: ಕೊಲೆಗಡುಕ ಸರ್ಕಾರ ಎಂದ ಎಚ್‌.ಡಿ.ಕುಮಾರಸ್ವಾಮಿ

“ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ʼಆಪರೇಷನ್ ಕಮಲʼದಂಥ ʼಅನೈತಿಕʼ, ʼನಿರ್ಲಜ್ಜʼ, ʼನೀಚʼ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು. ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದಾರೆ. ಇವತ್ತಿನ ಪ್ರಜಾವಾಣಿ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ..? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ..? ” ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ.

“ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ. ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ” ಎಂದು ಸಿ.ಟಿ.ರವಿಗೆ ತಿರುಗೇಟು ನೀಡಿದ್ದಾರೆ.


ಇದನ್ನೂ ಓದಿ: ಪಕ್ಷ ಬಿಟ್ಟು ಹೋಗುವವರು ಪಕ್ಷದ ಬಗ್ಗೆ ಲಘುವಾಗಿ ಮಾತನಾಡಬಾರದು: ಹೆಚ್.ಡಿ.ಕುಮಾರಸ್ವಾಮಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...