Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...