Homeಮುಖಪುಟಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಕರ್ನಾಟಕದ ಬಿಜೆಪಿ ಸ್ಪಷ್ಟವಾಗಿ ಎರಡು ಗುಂಪುಗಳಾಗಿ ಒಡೆದುಹೋಗಿದೆ. ಬಿ.ಎಸ್ ಯಡಿಯೂರಪ್ಪನವರ ಪದಚ್ಯುತಿಗೆ ಕೆಲವು RSS ಸಮೀಪವರ್ತಿ ನಾಯಕರು ನಡೆಸುತ್ತಿರುವ ಪ್ರಯತ್ನಿಸುತ್ತಿದ್ದಾರೆ. ಅದಕ್ಕೆ ಕೆಜೆಹಳ್ಳಿ-ಡಿಜೆಹಳ್ಳಿ ಪ್ರಕರಣವನ್ನು ಯಥೇಚ್ಚವಾಗಿ ಬಳಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಕಾವಲಭೈರಸಂದ್ರ ಗಲಭೆಯ ತನಿಖೆಯ ಹಾದಿ ತಪ್ಪಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಯೋಜಿತ ರೀತಿಯಲ್ಲಿ ಮಾಡುತ್ತಿದೆ. ದಿನಕ್ಕೊಬ್ಬ ಸಚಿವರು,ಶಾಸಕರು ಭೇಟಿ ನೀಡಿ, ಗಲಭೆಗೆ ಎಸ್ ಡಿಪಿಐ, ಕಾಂಗ್ರೆಸ್, ಭಯೋತ್ಪಾದಕರು ಕಾರಣ ಎಂದು ನೀಡುತ್ತಿರುವ ತರಹೇವಾರಿ ಹೇಳಿಕೆಗಳೇ ಇದಕ್ಕೆ ಸಾಕ್ಷಿ ಎಂದಿದ್ದಾರೆ.

ಗಲಭೆಯ ಹಿಂದಿನ ಅಪರಾಧಿಗಳನ್ನು ಪತ್ತೆ ಹಚ್ಚುವುದಕ್ಕಿಂತ ಹೆಚ್ಚು ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಿಲುಕಿಸುವುದು ಹೇಗೆ? ಇದನ್ನು ಕೋಮುಗಲಭೆ ಎಂದು ಬಣ್ಣಿಸಿ ರಾಜಕೀಯ ಲಾಭ ಗಳಿಸುವುದು ಹೇಗೆ? ಎನ್ನುವ ಬಗ್ಗೆ ಬಿಜೆಪಿ ನಾಯಕರು ತಲೆಕೆಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಅತ್ಯಧಿಕ ಮತಗಳಿಸಿ ಆಯ್ಕೆಯಾಗಿರುವ ನಮ್ಮದೇ ಪಕ್ಷದ ಶಾಸಕರು ಮತ್ತು ನಮ್ಮ ಪಕ್ಷದ ಕಾರ್ಪೋರೇಟರ್‌ಗಳು ಇರುವಾಗ ಕಾವಲಭೈರಸಂದ್ರ ಗಲಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇರುವ ಆಸಕ್ತಿಯಾದರು ಏನು? ಅಲ್ಲಿ ಚುನಾವಣೆಯಲ್ಲಿ ಎದುರಿಸಲಾಗದ ರಾಜಕೀಯ ಪಕ್ಷಗಳೇ ಪ್ರಕರಣದ ರಾಜಕೀಯ ಲಾಭ ಪಡೆಯಲು ಹೊರಟಿರುವುದು ಸ್ಪಷ್ಟ ಎಂದು ಅವರು ತಿಳಿಸಿದ್ದಾರೆ.

ಕಾವಲಭೈರಸಂದ್ರ ಗಲಭೆಯ ನಿಜವಾದ ತನಿಖೆ ಬಿಜೆಪಿ ಸರ್ಕಾರದ ಗುಪ್ತಚರ ಇಲಾಖೆಯ ವೈಫಲ್ಯದಿಂದ ಶುರುವಾಗಬೇಕು. ಸರ್ಕಾರದ ಪ್ರಕಾರ ಇದು ಪೂರ್ವಯೋಜಿತ ಕೃತ್ಯವಾಗಿದ್ದರೆ ಅದು ಯಾಕೆ ಪೊಲೀಸರ ಗಮನಕ್ಕೆ ಬಂದಿಲ್ಲ? ಪ್ರಚೋದನಕಾರಿ ಪೋಸ್ಟ್ ಹಾಕಿರುವ ನವೀನ್ ವಿರುದ್ಧ ಪ್ರಕರಣ ದಾಖಲಿಸಲು ವಿಳಂಬಕ್ಕೆ ಯಾರು ಕಾರಣ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಎಸ್‌ಡಿಪಿಐ ನಾಯಕರು ತಪ್ಪು ಮಾಡಿದ್ದರೆ ಅವರನ್ನು ಶಿಕ್ಷಿಸಿ, ಆ ಸಂಘಟನೆ ತಪ್ಪು ಮಾಡಿದ್ದರೆ ಅದರ ವಿರುದ್ಧ ಕ್ರಮಕೈಗೊಳ್ಳಿ. ಮುಸ್ಲಿಮ್ ಮತಗಳನ್ನು ಒಡೆಯಲು ಎಸ್‌ಡಿಪಿಐ ಅನ್ನು ಯೋಜಿತ ರೀತಿಯಲ್ಲಿ ಬಳಸಿಕೊಳ್ಳುತ್ತಾ ಬಂದಿರುವ ಬಿಜೆಪಿಗೆ ಅದನ್ನು ನಿಷೇಧಿಸುವ ಧೈರ್ಯ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ವಿಕಿಪೀಡಿಯಾದಲ್ಲಿ ಕನ್ನಡಿಗರು ಅತಿ ಹೆಚ್ಚು ಹುಡುಕಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...