ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ-ಕುಮಾರಸ್ವಾಮಿ ಆರೋಪ

ರಾಮಮಂದಿರಕ್ಕೆ ದೇಣಿಗೆ ನೀಡದವರ ಮನೆಗಳನ್ನು RSS ‌ನ ಜನರು ಗುರುತು ಮಾಡುತ್ತಿರುವ ಬಗ್ಗೆ ಬಹಳ ದಿನಗಳಿಂದ ಆರೋಪಗಳು ಕೇಳಿ ಬಂದಿತ್ತು. ಇದೀಗ ಜೆಡಿಎಸ್ ನಾಯಕ ಮಾಜಿ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆಗಳನ್ನು RSS ‌‌ನವರು ಗುರುತು ಮಾಡುತ್ತಿದ್ದಾರೆ” ಎಂಬ ಅಘಾತಕಾರಿ ಮಾಹಿತಿಯನ್ನು ಹೊಗೆಡವಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು. ಯಾತಕ್ಕೆ ಹೀಗೆ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಹಿಟ್ಲರ್ ಕಾಲದಲ್ಲಿ ನಾಜಿ-ಯಹೂದಿಗಳಿಗೆ ಗಲಾಟೆ ನಡೆದು ಲಕ್ಷಾಂತರ ಜನರ ಮಾರಣ ಹೋಮ ನಡೆಯಿತು. ದೇಶದಲ್ಲಿ ನಡೆಯುತ್ತಿರುವ ಈ ಬೆಳವಣಿಗೆ ಎಲ್ಲಿ ತಲುಪುತ್ತದೆ ಗೊತ್ತಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯೆ ತಿರಸ್ಕರಿಸಿದ ನಾವು ಯಕಶ್ಚಿತ್‌ ಮಂತ್ರಿ ಸ್ಥಾನಕ್ಕೆ ಆಸೆ ಪಡಲ್ಲ: ಕುಮಾರಸ್ವಾಮಿ

ಜರ್ಮನಿಯಲ್ಲಿ ನಾಜಿ ಹುಟ್ಟಿದ ಕಾಲದಲ್ಲೇ RSS ಹುಟ್ಟಿದೆ ಎಂದು ಇತಿಹಾಸಜ್ಞರು ಹೇಳುತ್ತಾರೆ. RSS ಕೂಡ ಆ ನೀತಿಗಳನ್ನೇ ಜಾರಿ ಮಾಡಿದರೆ ಮುಂದೇನಾಗುತ್ತದೆಂಬ ಆತಂಕವಿದೆ. ದೇಶದಲ್ಲಿ ಮೂಲಭೂತ ಹಕ್ಕನ್ನೆ ಕಸಿಯಲಾಗುತ್ತಿದೆ. ಸ್ವತಂತ್ರವಾಗಿ ಭಾವನೆಗಳನ್ನು ಹಂಚಿಕೊಳ್ಳಲು ಸಾಧ್ಯವಿಲ್ಲದ ಸ್ಥಿತಿ ಇದೆ. ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ.

ಯಾರೊಬ್ಬರೂ ತಮ್ಮ ಭಾವನೆಗಳನ್ನು ಹೇಳಿಕೊಳ್ಳಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದಿನ ದಿನಗಳಲ್ಲಿ ಮಾಧ್ಯಮಗಳು ಸರ್ಕಾರದ ಭಾವನೆಗಳನ್ನು ಎತ್ತಿಹಿಡಿದರೆ ಯಾರಿಗೆ ಏನಾಗುತ್ತದೆಯೋ ಗೊತ್ತಿಲ್ಲ. ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಏನಾಗಬಹುದು? ವಾತಾವರಣವನ್ನು ನೋಡಿದಾಗ ದೇಶದಲ್ಲಿ ಏನು ಬೇಕಾದರೂ ಆಗಬಹುದು ಎಂಬುದಂತೂ ನಿಚ್ಚಳವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು ಕೃಷಿ ಕಾಯ್ದೆಗೆ ಅವಕಾಶ ನೀಡುವುದು ಉಚಿತ: ಮೋದಿ ಪರ ಕುಮಾರಸ್ವಾಮಿ ಬ್ಯಾಟಿಂಗ್

1 COMMENT

  1. ಅವಕಾಶ ಸಿಕ್ಕ ಕೂಡಲೇ ಮನುವಾದಿಗಳೊಂದಿಗೆ ಮದುಚಂದ್ರ ಆಚರಿಸುವುದು, ಅವಕಾಶ ಇಲ್ಲದಿದ್ದರೆ ಗೋಳಾಡುವುದು; ಕುಮಾರಸ್ವಾಮಿಯವರ ಈ ಎಡಬಿಡಂಗಿತನದಿಂದಾಗಿ, ಒಂದು ಉತ್ತಮ ಪ್ರಾದೇಶಿಕ ಪಕ್ಷವಾಗಬಹುದಾಗಿದ್ದ ಜೆ.ಡಿ.ಎಸ್. ಇಂದು ಅವನತಿಯ ಅಂಚಿಗೆ ಬಂದು ನಿಂತಿದೆ.

LEAVE A REPLY

Please enter your comment!
Please enter your name here