HomeಮುಖಪುಟRSS ಸದಸ್ಯರು 21ನೇ ಶತಮಾನದ ಕೌರವರು ಹೇಳಿಕೆಗೆ ರಾಹುಲ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್ ದಾಖಲು

RSS ಸದಸ್ಯರು 21ನೇ ಶತಮಾನದ ಕೌರವರು ಹೇಳಿಕೆಗೆ ರಾಹುಲ್ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್ ದಾಖಲು

- Advertisement -
- Advertisement -

ಅನರ್ಹ ಸಂಸದ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಈ ವರ್ಷದ ಜನವರಿಯಲ್ಲಿ ಅವರ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವಿರುದ್ಧ ಅವರು ಹೇಳಿಕೆಯೊಂದನ್ನು ನೀಡಿದ್ದರು. ಆ ಹೇಳಿಕೆ ವಿರುದ್ದಾ ಇದೀಗ ಪ್ರಕರಣ ದಾಖಲಾಗಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ಕಮಲ್ ಭದೌರಿಯಾ ಅವರ ದೂರಿನ ಮೇರೆಗೆ ವಕೀಲ ಅರುಣ್ ಭದೌರಿಯಾ ಅವರು ಉತ್ತರಾಖಂಡದ ಹರಿದ್ವಾರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜನವರಿ 9, 2023ರಂದು ಹರಿಯಾಣದ ಅಂಬಾಲಾದಲ್ಲಿ ಭಾರತ್ ಜೋಡೋ ಯಾತ್ರೆಯ ನಂತರ ಸ್ಟ್ರೀಟ್ ಕಾರ್ನರ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಅವರು, ”ಆರ್‌ಎಸ್‌ಎಸ್ ಸದಸ್ಯರು 21 ನೇ ಶತಮಾನದ ಕೌರವರು” ಎಂದು ಹೇಳಿದ್ದರು.

”ಕೌರವರು ಯಾರು? ನಾನು ಮೊದಲು ನಿಮಗೆ 21 ನೇ ಶತಮಾನದ ಕೌರವರ ಬಗ್ಗೆ ಹೇಳುತ್ತೇನೆ ಕೇಳಿ, ಅವರು ಖಾಕಿ ಹಾಫ್ ಪ್ಯಾಂಟ್ ಧರಿಸುತ್ತಾರೆ, ಕೈಯಲ್ಲಿ ಲಾಠಿ ಹಿಡಿದು ಮತ್ತು ಶಾಖಾಗಳನ್ನು ನಡೆಸುತ್ತಾರೆ. ಭಾರತದ ಇಬ್ಬರು, ಮೂವರು ಕೋಟ್ಯಾಧಿಪತಿಗಳು ಕೌರವರ ಜೊತೆ ನಿಂತಿದ್ದಾರೆ” ಎಂದು RSS ಗುರಿಯಾಗಿಸಿಕೊಂಡು ರಾಹುಲ್ ಹೇಳಿದ್ದರು.

ಏಪ್ರಿಲ್ 12ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯು ನಡೆಯಲಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಒಂದು ರಾಜಕೀಯ ತಿರುವಾಗಬಹುದು ಹೇಗೆ?

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ”ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಸರ್‌ನೇಮ್ ಏಕಿರುತ್ತದೆ?” ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯಲ್ಲಿ ಕಳೆದ ತಿಂಗಳಷ್ಟೇ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಸರ್‌ನೇಮ್ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

‘ರಾಹುಲ್‌ ಅವರು ಕೋಲಾರದಲ್ಲಿ ನಡೆದಿದ್ದ ರ‍್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ನಿಂದಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದರು.

ಈನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಸೂರತ್ ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ಘೋಷಿಸಿತು.

ಸೂರತ್ ನ್ಯಾಯಾಲಯ ತೀರ್ಪು ನೀಡಿದ ಮರುದಿನವೇ ರಾಹುಲ್ ಗಾಂಧಿ ಅವರನ್ನು ಸಂಸತ್ತ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...