Homeಕರ್ನಾಟಕಆರ್‌ಎಸ್‌ಎಸ್‌ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ

ಆರ್‌ಎಸ್‌ಎಸ್‌ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಂಘ ಪರಿವಾರ ಮತ್ತು ಆರ್‌ಎಸ್‌ಎಸ್‌ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ, ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.

ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಅವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಹೇಳಿದರು.

ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅವರೇ ಸಾಟಿ. ಇಲ್ಲಿ ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದು ಹೇಳಿದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಕೊಟ್ಟರು ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ. ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದು ಹೇಳಿದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ. ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಆರ್‌ಎಸ್‌ಎಸ್ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪಂಚಾಯಿತಿ ಅಧಿಕಾರಿ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...