Homeಕರ್ನಾಟಕಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ತಿಳಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ ವಿಚಾರಣೆ ಮುಂದೂಡಿತು.

ಆರ್‌ಎಸ್‌ಎಸ್‌ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ‌ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಸರ್ಕಾರಕ್ಕೆ‌ ನಿರ್ದೇಶಿಸುವಂತೆ ಕೋರಿ ಆರ್‌ಎಸ್‌ಎಸ್‌ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಥಸಂಚಲಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ಇದೇ 28ರಂದು ಆಯೋಜಕರೊಂದಿಗೆ ಸಭೆ ನಡೆಸಬೇಕು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿತು.

ಶಾಂತಿ ಸಭೆಯನ್ನು ಎಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಶನಿವಾರ ಅರ್ಜಿದಾರರಿಗೆ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇದನ್ನು ಹೆಚ್ಚು ಎಳೆಯದಿರುವುದು ಒಳಿತು ಎಂದು ಮೌಖಿಕವಾಗಿ ತಿಳಿಸಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಕೋರ್ಟ್‌ನಲ್ಲಿ ನಡೆದ ವಾದ –ವಿವಾದ

ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ: ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಸರ್ಕಾರದ ಪರ ವಕೀಲ ಎಜಿ (ಅಡ್ವೊಕೇಟ್ ಜನರಲ್) ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಎಜಿ ಶಶಿಕಿರಣ್ ಶೆಟ್ಟಿ: ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ, ಬಾಕಿಯಿರಿಸಿದ್ದೇವೆ.

ಹೈಕೋರ್ಟ್: ಹಾಗಿದ್ದರೆ ಯಾವಾಗ ತೀರ್ಮಾನ ಕೈಗೊಳ್ಳುತ್ತೀರಿ?

ಎಜಿ ಶಶಿಕಿರಣ್ ಶೆಟ್ಟಿ: ಶಾಂತಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಎರಡು ವಾರಗಳ ಬಳಿಕ ವಿಚಾರಣೆ ನಡೆಸಬೇಕೆಂದು ಮನವಿ.

ಹೈಕೋರ್ಟ್: ನಿಮ್ಮ ಆಡಳಿತ ಸಾಮರ್ಥ್ಯ ಸಾಬೀತಿಗೆ ಇದು ಸಕಾಲ. ಎಲ್ಲರಿಗೂ ಸಮಾಧಾನಕರವಾಗುವಂತೆ ಸಮಸ್ಯೆ ಬಗೆಹರಿಸಿ

ಹೈಕೋರ್ಟ್: ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ ವರದಿಯಲ್ಲಿ ಸ್ಪಷ್ಟತೆಯಿಲ್ಲ

ಎಜಿ ಶಶಿಕಿರಣ್ ಶೆಟ್ಟಿ: 8 ಬೇರೆ ಸಂಘಟನೆಗಳೂ ಪಥಸಂಚಲನಕ್ಕೆ ಅನುಮತಿ ಕೋರಿದ್ದರೂ ಪರಿಗಣಿಸಿಲ್ಲ. ಪಥಸಂಚಲನದ ಬಗ್ಗೆ ಒಂದೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ 2 ವಾರಗಳಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ.

ಆರ್‌ಎಸ್‌ಎಸ್‌ ಪರ ವಕೀಲ: ನವೆಂಬರ್ 2ರಂದು ಪಥಸಂಚಲನಕ್ಕೆ ನಾವು ಒಪ್ಪಿದ್ದೆವು. ಈಗ ಪಥಸಂಚಲನಕ್ಕೆ ಅಡ್ಡಿ ಸೃಷ್ಟಿಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕೇಂದ್ರದ ಪಡೆ ನಿಯೋಜಿಸಲಿ. ಪಥಸಂಚಲನ ನಡೆಸುವುದು ಮೂಲಭೂತ ಹಕ್ಕಾಗಿದೆ.

ಹೈಕೋರ್ಟ್: ಶಾಂತಿ ಸಮಿತಿ ಸಭೆ ಯಾವತ್ತು ಕರೆಯುತ್ತೀರಿ? ಅ.28ರಂದು ಶಾಂತಿ ಸಭೆ ನಡೆಸಿ ಅ.30ರಂದು ವರದಿ ಸಲ್ಲಿಸಿ

ಆರ್‌ಎಸ್‌ಎಸ್‌ ಪರ ವಕೀಲ: ನಾಳೆ ಶಾಂತಿ ಸಭೆ ಕರೆಯಲು ಅನುಮತಿಸಬೇಕು.

ಎಜಿ ಶಶಿಕಿರಣ್ ಶೆಟ್ಟಿ: ಸಭೆ ಯಾವಾಗ ಕರೆಯಬೇಕೆಂದು ಅರ್ಜಿದಾರರು ಆದೇಶಿಸುವಂತಿಲ್ಲ. ಚಿತ್ತಾಪುರದಲ್ಲಿ ಪ್ರತಿದಿನ ಏನೆಲ್ಲಾ ಆಗುತ್ತಿದೆ ಎಂಬುದನ್ನು ದಿನಂಪ್ರತಿ ಮಾಧ್ಯಮಗಳಲ್ಲಿ ನೋಡುತಿದ್ದೇವೆ. ಎಲ್ಲವನ್ನೂ ಪರಿಹರಿಸಲಾಗುವುದು. ಅರ್ಜಿದಾರರು ಸಹಕಾರ ನೀಡಬೇಕು.

ಆರ್‌ಎಸ್‌ಎಸ್‌ ಪರ ವಕೀಲ: ನಾವು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದೇವೆ.

ಹೈಕೋರ್ಟ್: ಸಂಘಟನೆಗಳೊಂದಿಗೆ ಅ.28 ರಂದು ಶಾಂತಿ ಸಭೆ ನಡೆಸಬೇಕು. ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಸಭೆಯ ನಿರ್ಧಾರವನ್ನು ಅ.30 ರಂದು ತಿಳಿಸಿ

ಹೈಕೋರ್ಟ್ ಸಭೆಯ ಸಮಯವನ್ನು ಒಂದು ದಿನದಲ್ಲಿ ಅರ್ಜಿದಾರರಿಗೆ ತಿಳಿಸಿ. ವಿಚಾರವನ್ನು ಹೆಚ್ಚು ಅಲಂಬಿಸಬೇಡಿ. ಬೇಗ ಸಮಸ್ಯೆ ಬಗೆಹರಿಯುವುದು ಎಲ್ಲರಿಗೂ ಒಳ್ಳೆಯದು ಎಂದು ಹೇಳಿ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿತು.

ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ.

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ : ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...