Homeಮುಖಪುಟಕೇಂದ್ರ ಸಚಿವಾಲಯಗಳನ್ನು ಆರೆಸ್ಸೆಸ್ ನಡೆಸುತ್ತಿದೆ: ರಾಹುಲ್ ಗಾಂಧಿ

ಕೇಂದ್ರ ಸಚಿವಾಲಯಗಳನ್ನು ಆರೆಸ್ಸೆಸ್ ನಡೆಸುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ದೇಶದ ಎಲ್ಲಾ ಸಂಸ್ಥೆಗಳಲ್ಲಿ ಆರೆಸ್ಸೆಸ್ ತನ್ನ ಕಾರ್ಯಕರ್ತರನ್ನು ನೇಮಿಸಿದೆ ಮತ್ತು ಸಂಸ್ಥೆಗಳನ್ನು ಆರೆಸ್ಸೆಸ್ ಸ್ವಾದೀನಪಡಿಸಿಕೊಂಡಿದೆ, ಸಚಿವಾಲಯಗಳನ್ನು ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ನಂತರ ಮೊದಲ ಬಾರಿಗೆ ಲಡಾಖ್‌ಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದೇಶದ ಪ್ರತಿಯೊಂದು ಸಂಸ್ಥೆಗಳಲ್ಲಿ ತನ್ನದೇ ಆದ ಜನರನ್ನು ನೇಮಿಸುತ್ತದೆ ಎಂದು ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಪೋಷಕರಾಗಿರುವ ಆರೆಸ್ಸೆಸ್ ಎಲ್ಲವನ್ನೂ ನಡೆಸುತ್ತಿದೆ. ಆರ್‌ಎಸ್‌ಎಸ್ ಪ್ರತಿ ಸಂಸ್ಥೆಯಲ್ಲಿ ತನ್ನದೇ ಆದ ಜನರನ್ನು ಇರಿಸುತ್ತಿದೆ ಎಂದು ರಾಹುಲ್ ಗಾಂಧಿ ಲಡಾಖ್‌ನಲ್ಲಿ ಹೇಳಿದ್ದಾರೆ.

ಈ ಕುರಿತು ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ, ನೀವು ಕೇಂದ್ರ ಸರ್ಕಾರದ ಯಾವುದೇ ಸಚಿವರನ್ನು ಕೇಳಿದರೂ, ಅವರು ನಿಜವಾಗಿ ತಮ್ಮ ಸಚಿವಾಲಯಗಳನ್ನು ನಡೆಸುತ್ತಿಲ್ಲ ಎಂದು ನಿಮಗೆ ಹೇಳುತ್ತಾರೆ. ಆರೆಸ್ಸೆಸ್ ನಿಂದ ನಿಯೋಜಿತವಾಗಿರುವವರು ವಾಸ್ತವವಾಗಿ ಈ ಸಚಿವಾಲಯಗಳನ್ನು ನಡೆಸುತ್ತಿದ್ದಾರೆ ಮತ್ತು ಎಲ್ಲವನ್ನೂ  ಸೂಚಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅದೇ ದಿನ, ಲೇಹ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಮಾತನಾಡಿ,  ಭಾರತಕ್ಕೆ 1947 ರಲ್ಲಿ ಸ್ವಾತಂತ್ರ್ಯ ಸಿಕ್ಕಿತು. ನೀವು ಸಂವಿಧಾನವನ್ನು ಕಾರ್ಯರೂಪಕ್ಕೆ ತರುವ ವಿಧಾನವೆಂದರೆ ಸಂವಿಧಾನದ ದೃಷ್ಟಿಕೋನವನ್ನು ಬೆಂಬಲಿಸುವ ಸಂಸ್ಥೆಗಳನ್ನು ಸ್ಥಾಪಿಸುವುದು. ಬಿಜೆಪಿ ಮತ್ತು ಆರ್‌ಎಸ್‌ಎಸ್ ತಮ್ಮದೇ ಆದ ಜನರನ್ನು ಸಾಂಸ್ಥಿಕ ರಚನೆಯ ಪ್ರಮುಖ ಸ್ಥಾನಗಳಲ್ಲಿ ಇರಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ರಾಜಸ್ಥಾನ: ಮರ ಕಡಿದ ಶಂಕೆಯ ಮೇಲೆ ಮುಸ್ಲಿಂ ಯುವಕನಿಗೆ ಥಳಿಸಿ ಹತ್ಯೆ; ಅರಣ್ಯಾಧಿಕಾರಿಗಳು ಸೇರಿ 10 ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...