Homeಎಕಾನಮಿಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು...

ಮೊದಲು ಭಾರತೀಯ ಉದ್ಯಮದ ಹಿತಾಸಕ್ತಿ ಕಾಪಾಡಿ: ಆರ್‌ಎಸ್‌ಎಸ್ ತಾಕೀತು…

- Advertisement -
- Advertisement -

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಮತ್ತು ಅಭಿವೃದ್ಧಿ ಪಾತಾಳಕ್ಕೆ ಕುಸಿಯುತ್ತಿದೆ. ವ್ಯಾಪಾರ ಹಾಗೂ ಉದ್ಯಮ ನೆಲಕಚ್ಚಿದ್ದು, ಆರ್ಥಿಕ ಅಭಿವೃದ್ಧಿಗಾಗಿ ಹರಸಾಹಸ ಮಾಡಲಾಗ್ತಿದೆ. ಈ ಮಧ್ಯೆ ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಸಭೆ (RCEP) ನಡೆಯಲಿದೆ. ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ಥಿಕ ಸಭೆಗೂ ಮೊದಲು ಭಾರತದ ಮಂತ್ರಿಗಳು, ಭಾರತೀಯ ಉದ್ಯಮದ ಹಿತಾಸಕ್ತಿಗಳನ್ನು ಕಾಪಾಡಬೇಕು ಎಂದು ಆರ್‌ಎಸ್‌ಎಸ್ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದೆ.

ಬ್ಯಾಂಕಾಕ್ ನಲ್ಲಿ ಅಕ್ಟೋಬರ್ 10 ರಿಂದ 12ರವರೆಗೆ ಆರ್‌ಸಿಇಪಿ ಸಭೆ ನಡೆಯಲಿದೆ. ಈಗಾಗಲೇ ಆರ್ಥಿಕ ತಜ್ಞರು ಮತ್ತು ಮಂತ್ರಿಗಳು ಸಭೆಯಲ್ಲಿ ಭಾಗಿಯಾಗಲು ತಯಾರಾಗಿದ್ದಾರೆ. ಆರ್ಥಿಕತೆ ವಿಚಾರದಲ್ಲಿ ಹಾಗೂ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳುವ ಮೊದಲು ಸೂಕ್ತವಾಗಿ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆರ್‌ಎಸ್‌ಎಸ್ ಒತ್ತಾಯಿಸಿದೆ.

ಇದನ್ನೂ ಓದಿ: ಆರ್ಥಿಕ ಕುಸಿತದ ಸರಳ ಚಿತ್ರಣ: ಸಮಸ್ಯೆ ಹೂಡಿಕೆಯದ್ದಲ್ಲ, ಬೇಡಿಕೆಯದ್ದು

ಆರ್‌ಸಿಇಪಿ ಅಡಿಯಲ್ಲಿ 10 ಏಷಿಯನ್ ರಾಷ್ಟ್ರಗಳು ಒಪ್ಪಂದ ಮಾಡಿಕೊಂಡಿವೆ. ಬ್ರುನೇ, ಕಾಂಬೋಡಿಯಾ, ಇಂಡೋನೇಷಿಯಾ, ಲಾವೋಸ್, ಮಲೇಷಿಯಾ, ಮಯನ್ಮಾರ್, ಪಿಲಿಪ್ಪೈನ್ಸ್, ಸಿಂಗಾಪೂರ್, ಥೈಲ್ಯಾಂಡ್ ಮತ್ತು ವಿಯೆಟ್ನಾಂ ಸದಸ್ಯ ರಾಷ್ಟ್ರಗಳಾಗಿವೆ. ಇದರ ಜತೆಗೆ ಆರು ದೇಶಗಳು ಮುಕ್ತ ವ್ಯಾಪಾರ ಒಪ್ಪಂದದ ಅಡಿಯಲ್ಲಿ ಬರುತ್ತವೆ. ಅವುಗಳೆಂದರೆ ಚೀನಾ, ಭಾರತ, ಜಪಾನ್, ಕೋರಿಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್.

ನವೆಂಬರ್ ತಿಂಗಳಲ್ಲಿ ಒಪ್ಪಂದ ಮುಕ್ತಾಯಗೊಳ್ಳಲಿದ್ದು ಈಗಾಗಲೇ 16 ಸದಸ್ಯರನ್ನು ಒಳಗೊಂಡಿರುವ ಟ್ರೇಡ್ ಬ್ಲಾಕ್ ಸಭೆಯಲ್ಲಿ ಭಾಗವಹಿಸಲು ಸದಸ್ಯ ರಾಷ್ಟ್ರಗಳು ಉತ್ಸುಕವಾಗಿದೆ. ಭಾರತಕ್ಕೆ ಸೀಮಿತ ಅವಕಾಶವಿದೆ. ಹೀಗಾಗಿ ಭಾರತಕ್ಕೆ ಅವಕಾಶ ಕೈತಪ್ಪಿ ಹೋಗದಂತೆ ಶ್ರಮಿಸಲಾಗುತ್ತಿದೆ. ಅದಾಗ್ಯೂ ಒಪ್ಪಂದಕ್ಕೆ ಮುಂದಿನ ವರ್ಷವೇ ಸಹಿ ಬೀಳುವ ನಿರೀಕ್ಷೆಯಿದೆ.

ಆರ್ಥಿಕತೆಯ ಕುರಿತ ಭೇಟಿ ವಿಚಾರವಾಗಿ ಸೋಮವಾರದಿಂದಲೇ ಚರ್ಚೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ, ಪ್ರಮುಖ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೈಗಾರಿಕೆ ಮತ್ತು ಉದ್ಯಮ ವಲಯ ಸಚಿವ ಪಿಯೂಷ್ ಗೋಯಲ್, ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ. ಮುಂದಿನ ಸಭೆ ಗೃಹ ಸಚಿವಾಲಯದಲ್ಲಿ ನಡೆಯಲಿದೆ.

ಇನ್ನು ಬಿಜೆಪಿ ನಾಯಕರೂ ಸಹ ಆರ್ಥಿಕತೆಯ ವಿಚಾರವಾಗಿ ಸಭೆ ನಡೆಸಿದ್ದಾರೆ. ಅಮಿತ್ ಶಾ, ಪಿಯೂಷ್ ಗೋಯಲ್, ಬಿಜೆಪಿಯ ಬಿ.ಎಲ್. ಸಂತೋಷ್ ಹಾಗೂ ಆರ್‌ಎಸ್‌ಎಸ್ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಕುಸಿಯುತ್ತಿರುವ ಆರ್ಥಿಕತೆ ಮತ್ತು ಉದ್ಯಮ ವಲಯದ ಸಮಸ್ಯೆಗಳ ಕುರಿತು ಗೋಪಾಲ್ ಅಗರ್ವಾಲ್, ವಿಜಯ್ ಚೌತೇವಾಲ್ ಮತ್ತು ಮಧ್ಯಸ್ಥಿಕೆದಾರರು ಮಾತುಕತೆ ನಡೆಸಿದರು. ಚೀನಾ ಮತ್ತು ಭಾರತದ ನಡುವೆ ನಡೆಯಲಿರುವ ಆರ್ಥಿಕ ಒಪ್ಪಂದ, ದೇಶೀಯ ಉತ್ಪಾದಕರ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಅಸಮತೋಲನದ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃಷಿ ವ್ಯಾಪಾರ, ಮುಕ್ತ ವ್ಯಾಪಾರ ಒಪ್ಪಂದ, ಭಾರತದಿಂದ ರಫ್ತಾಗುವ ವಸ್ತುಗಳ ಮೇಲೆ ಕಡಿಮೆ ತೆರಿಗೆ ವಿಧಿಸುವುದು, ನಿತ್ಯ ರಫ್ತಾಗುವ ವಸ್ತುಗಳ ಮೇಲೆ ವಿಧಿಸುವ ತೆರಿಗೆ, ವ್ಯಾಪಾರ ಸೇವಾ ವಲಯದಲ್ಲಿ ವಿಧಿಸುತ್ತಿರುವ ತೆರಿಗೆ ವಿಚಾರವಾಗಿ ಚೀನಾ, ಭಾರತದೊಂದಿಗೆ ಚರ್ಚಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಆರ್ಥಿಕ ಕುಸಿತ ತಡೆದು ಉದ್ಯೋಗ ಸೃಷ್ಟಿಗಾಗಿ ‘ಯುವಜನರ ಪ್ರಣಾಳಿಕೆ’ಯನ್ನು ಜಾರಿ ಮಾಡಲು ಒತ್ತಾಯ..

ವ್ಯಾಪಾರ ಕೊರತೆಯು ಏಷಿಯನ್ ರಾಷ್ಟ್ರಗಳನ್ನು ಅಲ್ಲೋಲಕಲ್ಲೋಲ ಮಾಡಿದೆ. ಕೋರಿಯಾ, ಜಪಾನ್ ರಾಷ್ಟ್ರಗಳ ಮಧ್ಯಸ್ಥಿಕೆದಾರರು ಸಹ ಚಿಂತೆಗೀಡಾಗಿದ್ದಾರೆ. 2011ರ ಹಣಕಾಸು ವರ್ಷದಲ್ಲಿ 15 ಬಿಲಿಯನ್ ನಿಂದ 2017ರ ಹಣಕಾಸು ವರ್ಷದವರೆಗೆ 21 ಬಿಲಿಯನ್ ನಷ್ಟು ವ್ಯಾಪಾರ ಕೊರತೆಯ ಮಟ್ಟ ಏರಿಕೆ ಕಂಡಿದೆ. ರಾಸಾಯನಿಕಗಳು, ರಬ್ಬರ್, ಖನಿಜ, ಚರ್ಮ ಸೇರಿದಂತೆ 21 ಕ್ಷೇತ್ರಗಳಲ್ಲಿ ಅಸಮತೋಲನ ಹೆಚ್ಚಿದ್ದು, ಪರಿಸ್ಥಿತಿ ಹದಗೆಟ್ಟಿದೆ. ರತ್ನ, ಆಭರಣ, ಲೋಹ ಮತ್ತು ವೈದ್ಯಕೀಯ ಉಪಕರಣಗಳ ಮಧ್ಯೆಯೂ ಅಸಮತೋಲನವಿದೆ ಎಂದು ಮೂಲಗಳು ತಿಳಿಸಿವೆ.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮಾತನಾಡಿದ್ದು, ದೇಶದ ಹಿತಾಸಕ್ತಿಗೆ ಅನುಗುಣವಾಗಿ, ಆರ್ಥಿಕತೆಯ ರಕ್ಷಣೆ ಮತ್ತು ದೇಶದ ನಿಯಮಗಳಿಗನುಸಾರವಾಗಿ ವ್ಯಾಪಾರ ಒಪ್ಪಂದಗಳಿಗೆ ಸಹಿ ಹಾಕುವಂತೆ ಕರೆ ನೀಡಿದ್ದಾರೆ. ಇನ್ನು ಭಾರತದೊಂದಿಗೆ ಚೀನಾದ ವ್ಯಾಪಾರ 2001 ರ ಹಣಕಾಸು ವರ್ಷದಲ್ಲಿ 0.6 ಬಿಲಿಯನ್ ಡಾಲರ್‌ ಆಗಿತ್ತು. 2017ರ ಹಣಕಾಸು ವರ್ಷದಲ್ಲಿ 52 ಬಿಲಿಯನ್ ತಲುಪಿದೆ. ಹೀಗಾಗಿ ಭಾರತದ ಒಟ್ಟು ವ್ಯಾಪಾರ ಕೊರತೆಯ ಅರ್ಧದಷ್ಟು ಭಾಗವನ್ನು ಚೀನಾ ಹೊಂದಿದೆ. ಕೃಷಿಕರು ಮತ್ತು ದೇಶೀಯ ಉತ್ಪಾದಕರಿಗೆ ತೊಂದರೆಯಾಗದಂತೆ ಒಪ್ಪಂದ ರೂಪಿಸಬೇಕು ಎಂಬುದನ್ನು ಬಿಜೆಪಿ ಸಭೆಯಲ್ಲಿ ನಿರ್ಣಯಿಸಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಕೆಲ ರಾಷ್ಟ್ರಗಳು ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕಿವೆ. ಆದರೆ ಭಾರತದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಣಯಗಳು ಭಾರಿ ಪರಿಣಾಮ ಬೀರಲಿವೆ. ದೇಶೀಯ ಉತ್ಪಾದನೆ ಹೆಚ್ಚಿಸಲು ಮತ್ತು ಕೃಷಿಗೆ ಹೆಚ್ಚಿನ ಆದ್ಯತೆ ನೀಡುವತ್ತಲೂ ಗಮನಹರಿಸುವಂತೆ ಆಲೋಚಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...