Homeಮುಖಪುಟಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್‌

- Advertisement -
- Advertisement -

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ.ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ (ಅ.1) ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಮಂತ್ರಿ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದಿದೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು ಎಂದು ಹೇಳಿದೆ.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮೋದಿ, 1925ರಲ್ಲಿ ಸ್ಥಾಪನೆಯಾದಾಗಿನಿಂದ ರಾಷ್ಟ್ರ ನಿರ್ಮಾಣಕ್ಕೆ ಸಂಘ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಮೋದಿ, ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವು “ತ್ಯಾಗ, ನಿಸ್ವಾರ್ಥ ಸೇವೆ, ರಾಷ್ಟ್ರ ನಿರ್ಮಾಣ ಮತ್ತು ಶಿಸ್ತಿನ ಅಸಾಧಾರಣ ಉದಾಹರಣೆಯಾಗಿದೆ” ಎಂದು ಕೊಂಡಾಡಿದ್ದಾರೆ.

“ಸಂಘದ ಶತಮಾನೋತ್ಸವ ವರ್ಷದಂತಹ ಅದ್ಬುತ ಸಂದರ್ಭವನ್ನು ವೀಕ್ಷಿಸುವ ಅವಕಾಶ ನಮಗೆ ದೊರೆತಿರುವುದು ನಮ್ಮ ಪೀಳಿಗೆಯ ಸ್ವಯಂಸೇವಕರ ಅದೃಷ್ಟ” ಎಂದು ಮೋದಿ ಹೇಳಿದ್ದಾರೆ.

ಆರ್‌ಎಸ್‌ಎಸ್‌ ಸಮಾಜದ ವಿವಿಧ ವರ್ಗಗಳೊಂದಿಗೆ ಕೆಲಸ ಮಾಡಿದೆ. ಆದರೆ, ಅದರ ವಿವಿಧ ವಿಭಾಗಗಳ ನಡುವೆ ಯಾವುದೇ ಸಂಘರ್ಷ ಉಂಟಾಗಿಲ್ಲ. ಏಕೆಂದರೆ, ಅವರೆಲ್ಲರೂ ‘ರಾಷ್ಟ್ರ ಮೊದಲು’ ಎಂಬ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ಆರ್‌ಎಸ್‌ಎಸ್ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿತ್ತು. ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ ಆಶ್ರಯ ನೀಡಿತ್ತು ಎಂದು ಹೇಳಿಕೊಂಡಿದ್ದಾರೆ.

1942ರಲ್ಲಿ ಮಹಾರಾಷ್ಟ್ರದ ಚಿಮೂರ್‌ನಲ್ಲಿ ನಡೆದ ಆಂದೋಲನದ ಸಂದರ್ಭದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಬ್ರಿಟಿಷರ ಕೈಯಲ್ಲಿ ನರಳಿದ್ದರು. ಸ್ವಾತಂತ್ರ್ಯದ ನಂತರ, ಆರ್‌ಎಸ್‌ಎಸ್ ಹೈದರಾಬಾದ್‌ನ ನಿಜಾಮರ ಕೈಯಲ್ಲಿ ನರಳಿತ್ತು. ಗೋವಾ, ದಾದ್ರಾ ಮತ್ತು ನಗರ ಹವೇಲಿಯ ಸ್ವಾತಂತ್ರ್ಯದ ಸಮಯದಲ್ಲಿ ಆರ್‌ಎಸ್‌ಎಸ್ ಕೂಡ ತ್ಯಾಗ ಮಾಡಿತ್ತು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯದ ನಂತರವೂ ಆರ್‌ಎಸ್‌ಎಸ್ ಅನ್ನು ಹತ್ತಿಕ್ಕಲು ಪ್ರಯತ್ನಗಳು ನಡೆದಿವೆ. ಅದು ಮುಖ್ಯವಾಹಿನಿಗೆ ಬರದಂತೆ ತಡೆಯಲು ಲೆಕ್ಕವಿಲ್ಲದಷ್ಟು ಪಿತೂರಿಗಳನ್ನು ರೂಪಿಸಲಾಗಿದೆ. ನಿಷೇಧಗಳು ಮತ್ತು ಪಿತೂರಿಗಳನ್ನು ಎದುರಿಸುತ್ತಿದ್ದರೂ ಕೂಡ, ಆರ್‌ಎಸ್‌ಎಸ್ ಯಾರ ವಿರುದ್ಧವೂ ಎಂದಿಗೂ ಕಹಿಯಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯಾನಂತರ ಮಹಾತ್ಮ ಗಾಂಧಿಯವರ ಹತ್ಯೆ ಬಳಿಕ, 1975 ರಿಂದ 1977 ರವರೆಗಿನ ತುರ್ತು ಪರಿಸ್ಥಿತಿಯ ಸಮಯದಲ್ಲಿ ಮತ್ತು 1992ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಹೀಗೆ ಆರ್‌ಎಸ್‌ಎಸ್ ಅನ್ನು ಮೂರು ಬಾರಿ ನಿಷೇಧಿಸಲಾಗಿತ್ತು.

ಆರ್‌ಎಸ್‌ಎಸ್‌ನ ಶತಮಾನೋತ್ಸವದ ನೆನಪಿಗೆ ಮೋದಿ ಅಂಚೆ ಚೀಟಿ ಮತ್ತು ನಾಣ್ಯ ಬಿಡುಗಡೆ ಮಾಡಿದ್ದಾರೆ.

ಆರೆಸ್ಸೆಸ್ ದೇಶವನ್ನು ವಿಭಜಿಸುತ್ತಿದೆ: ಕಾಂಗ್ರೆಸ್

ಮೋದಿಯ ಭಾಷಣಕ್ಕೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್, ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ’ ಎಂದು ಹೇಳಿದೆ. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅದರ ನಾಯಕರು ಜೈಲಿಗೆ ಹೋಗಿದ್ದರು ಎಂಬ ಹೇಳಿಕೆ ಸುಳ್ಳು ಎಂದಿದೆ.

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ ಎಂದು ಕಾಂಗ್ರೆಸ್ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ.

“1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಬಿಹಾರ | ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟ: ಗಂಭೀರ ಪ್ರಶ್ನೆಯೆತ್ತಿದ ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...