Homeಮುಖಪುಟಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! - ರಾಹುಲ್ ಗಾಂಧಿ

ಪ್ರಧಾನಿ ವಿರುದ್ಧ ದನಿಯೆತ್ತಿದರೆ ಮೋಹನ್ ಭಾಗವತ್ ಕೂಡಾ ಭಯೋತ್ಪಾದಕರೇ! – ರಾಹುಲ್ ಗಾಂಧಿ

"ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ"

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಭಾರತದಲ್ಲಿ ಪ್ರಜಾಪ್ರಭುತ್ವವಿಲ್ಲ. ಪ್ರಧಾನ ಮಂತ್ರಿಯ ವಿರುದ್ಧ ಎದ್ದುನಿಲ್ಲುವವರಿಗೆ ಭಯೋತ್ಪಾದಕರು ಎಂದು ಹಣೆಪಟ್ಟಿ ಕಟ್ಟಲಾಗುತ್ತದೆ. ಅದು RSS‌ ಮುಖ್ಯಸ್ಥರಾದ ಮೋಹನ್ ಭಾಗವತ್ ಆದರೂ ಸರಿಯೆ” ಎಂದು ಹೇಳಿದ್ದಾರೆ.

“ಪ್ರಧಾನಿ ಮೋದಿ ಕ್ರೋನಿ ಕ್ಯಾಪಿಟಲಿಸ್ಟ್‌ಗಳಿಗಾಗಿ ಹಣ ಸಂಪಾದಿಸುತ್ತಿದ್ದಾರೆ. ಅವರ ವಿರುದ್ಧ ದನಿಯೆತ್ತಲು ಪ್ರಯತ್ನಿಸುವ ರೈತರು, ಕಾರ್ಮಿಕರು ಅಥವಾ ಮೋಹನ್ ಭಾಗವತ್ ಆವರೇ ಆಗಿದ್ದರೂ ಸಹ ಅವರನ್ನೂ ಭಯೋತ್ಪಾದಕರು ಎಂದು ಕರೆಯಲಾಗುತ್ತದೆ” ಎಂದು ಹೇಳಿದ್ದಾರೆ.

“ಭಾರತದಲ್ಲಿ ಯಾವುದೇ ಪ್ರಜಾಪ್ರಭುತ್ವ ಇಲ್ಲ. ನಿಮ್ಮಲ್ಲಿ ಕೆಲವರಿಗೆ ಅದು ಇದೆ ಎನಿಸಿದರೆ, ಅದು ನಿಮ್ಮ ಕಲ್ಪನೆಯಷ್ಟೆ”

ಇದನ್ನೂ ಓದಿ: ಬಹುತ್ವದ ದೇಶದಲ್ಲಿ ಸಂಧಾನ-ಚೌಕಾಶಿಗೆ ಕದ ಮುಚ್ಚುತ್ತಿರುವ ಪ್ರಭುತ್ವಗಳು

ಕೃಷಿ ಕಾನೂನುಗಳ ವಿರುದ್ಧ ದೆಹಲಿಯಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆಗಳನ್ನು ಕೊನೆಗೊಳಿಸುವ ಸಲುವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯಪ್ರವೇಸಿಸುವಂತೆ ಒತ್ತಾಯಿಸಲು ಕಾಂಗ್ರೆಸ್ ಕಾರ್ಯಕರ್ತರ ನಿಯೋಗವನ್ನು ಕರೆದುಕೊಂಡು ರಾಹುಲ್ ಗಾಂಧಿ ಹೊರಟಿದ್ದರು. ಈ ಸಂದರ್ಭದಲ್ಲಿ ಮೆರವಣಿಗೆ ಹೊರಟಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ತಡೆದು ಹಲವು ಮುಖಂಡರೂ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡರು.

ರಾಷ್ಟ್ರಪತಿಗಳ ಭೇಟಿಯ ನಂತರ ಮಾತನಾಡಿದ ರಾಹುಲ್ ಗಾಂಧಿ, “ಈ ಕಾನೂನುಗಳು ಲಕ್ಷಾಂತರ ರೈತರ ಜೀವನೋಪಾಯವನ್ನು ಕಸಿದುಕೊಳ್ಳುತ್ತವೆ. ಜೊತೆಗೆ ನಾಲ್ಕು ಅಥವಾ ಐದು ಉದ್ಯಮಿಗಳಿಗೆ ಅನುಕೂಲಕರವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ” ಎಂದು ಹೇಳಿದರು.

ಕಾಂಗ್ರೆಸ್‌ನ ಮೂವರು ಮುಖಂಡರಿಗೆ ಮಾತ್ರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡುವ ಅವಕಾಶ ದೊರಕಿತ್ತು. ಈ ವೇಳೆ ಕೃಷಿ ಕಾನೂನು ರದ್ದುಗೊಳಿಸುವಂತೆ ಆಗ್ರಹಿಸಿ ಎರಡು ಕೋಟಿ ಹಸ್ತಾಕ್ಷರವಿರುವ ಮನವಿ ಪತ್ರವನ್ನು ರಾಷ್ಟ್ರಪತಿಗೆ ಸಲ್ಲಿಸಿರುವ ರಾಹುಲ್ ಗಾಂಧಿ, ಈ ಕೃಷಿ ಕಾಯ್ದೆಗಳು ರೈತ ವಿರೋಧಿ ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಗೌರಿ ಕಾರ್ನರ್: ನಮ್ಮನ್ನೆಲ್ಲ ತಿದ್ದಿ ಗೆಳೆಯರಂತೆ ನೋಡಿಕೊಳ್ಳುತ್ತಿದ್ದರು…

“ಯುವಕರು ಮತ್ತು ಈ ದೇಶದ ಎಲ್ಲಾ ಜನರು ತಿಳಿದುಕೊಳ್ಳಬೇಕಾದ ಅಂಶವೆಂದರೆ, ಪ್ರಧಾನ ಮಂತ್ರಿ ಅಸಮರ್ಥ ವ್ಯಕ್ತಿ. ಅವರಿಗೆ ಏನೂ ತಿಳಿದಿಲ್ಲ. ಅವರು ಕ್ರೋನಿ ಬಂಡವಾಳಶಾಹಿಗಳಿಗೆ ಮಾತ್ರ ಕಿವಿಗೊಡುತ್ತಾರೆ. ಅವರು ಏನು ಹೇಳಿದರೂ ಅದನ್ನೇ ಮಾಡುತ್ತಾರೆ” ಎಂದು ಕಿಡಿ ಕಾರಿದರು.

ಈ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ರೈತರು ಮನೆಗೆ ಹಿಂದಿರುಗುವುದಿಲ್ಲ ಎಂದು ನಾನು ಪ್ರಧಾನಿಗೆ ಹೇಳಲು ಬಯಸುತ್ತೇನೆ. ಸರ್ಕಾರವು ಸಂಸತ್ತಿನ ಜಂಟಿ ಅಧಿವೇಶನವನ್ನು ಕರೆದು ಈ ಕಾಯ್ದೆಗಳನ್ನು ಹಿಂಪಡೆಯಬೇಕು. ವಿರೋಧ ಪಕ್ಷವು ರೈತರಿಗೆ ಸಾಥ್ ನೀಡಲಿದೆ ಎಂದು ಹೇಳಿದರು.


ಇದನ್ನೂ ಓದಿ: ಹರಿಯಾಣ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ರೈತರ ಮೇಲೆ ದಾಖಲಾಯ್ತು ಗಲಭೆ, ಕೊಲೆಯತ್ನದ ಕೇಸ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...