Homeಮುಖಪುಟಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

ಆರ್‌ಟಿಐ ಕಾಯ್ದೆ ತಿದ್ದುಪಡಿಗೆ ವಿರೋಧ ಪಕ್ಷಗಳ ಆಕ್ಷೇಪ, ತಕ್ಷಣ ರದ್ದುಗೊಳಿಸುವಂತೆ ಆಗ್ರಹ

- Advertisement -
- Advertisement -

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆ (ಡಿಪಿಡಿಪಿ)ಯ ಸೆಕ್ಷನ್ 44 (3) ಅನ್ನು ರದ್ದುಗೊಳಿಸುವಂತೆ ಇಂಡಿಯಾ ಮೈತ್ರಿಕೂಟ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದು, ಇದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯನ್ನು ನಾಶಪಡಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆರ್‌ಟಿಐ ಕಾಯ್ದೆ

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇಂಡಿಯಾ ಮೈತ್ರಿ ಪಕ್ಷಗಳ 120 ಕ್ಕೂ ಹೆಚ್ಚು ಸಂಸದರು ಈ ಸೆಕ್ಷನ್ ಅನ್ನು ರದ್ದುಗೊಳಿಸಲು ಜಂಟಿ ಜ್ಞಾಪಕ ಪತ್ರಕ್ಕೆ ಸಹಿ ಹಾಕಿದ್ದಾರೆ ಮತ್ತು ಅದನ್ನು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಎಂಎಂ ಅಬ್ದುಲ್ಲಾ (ಡಿಎಂಕೆ), ಪ್ರಿಯಾಂಕಾ ಚತುರ್ವೇದಿ (ಶಿವಸೇನೆ-ಯುಬಿಟಿ), ಜಾನ್ ಬ್ರಿಟ್ಟಾಸ್, (ಸಿಪಿಐ-ಎಂ), ಜಾವೇದ್ ಅಲಿ ಖಾನ್, (ಎಸ್‌ಪಿ) ಮತ್ತು ನವಲ್ ಕಿಶೋರ್ (ಆರ್‌ಜೆಡಿ) ಭಾಗವಹಿಸಿದ್ದರು.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಅನ್ನು ನಾಗರಿಕ ಹಕ್ಕುಗಳ ಹೋರಾಟಗಾರರು ವಿರೋಧಿಸಿದ್ದು, ಇದು 2005 ರ ಆರ್‌ಟಿಐ ಕಾಯ್ದೆಯ ಸೆಕ್ಷನ್ 8 (1) (ಜೆ) ಅನ್ನು ಬದಲಾಯಿಸಲು ಪ್ರಯತ್ನಿಸುತ್ತದೆ ಎಂದು ಗೊಗೊಯ್ ಹೇಳಿದ್ದಾರೆ.

ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯು ಯಾವುದೇ ಸಾರ್ವಜನಿಕ ಚಟುವಟಿಕೆ ಅಥವಾ ಹಿತಾಸಕ್ತಿಗೆ ಸಂಬಂಧಿಸದಿದ್ದರೆ ಅಥವಾ ಗೌಪ್ಯ ಮಾಹಿತಿ  ಆಗಿದ್ದರೆ ಅದನ್ನು ತಡೆಹಿಡಿಯಲು ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅವಕಾಶ ನೀಡುತ್ತದೆ. ಅದಾಗ್ಯೂ, ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ರಾಜ್ಯ ಸಾರ್ವಜನಿಕ ಮಾಹಿತಿ ಅಧಿಕಾರಿ ಅಥವಾ ಮೇಲ್ಮನವಿ ಪ್ರಾಧಿಕಾರವು ಈ ಮಾಹಿತಿಯು ಜನರ ಒಳಿತಿಗೆ ಉಪಯೋಗವಾಗುತ್ತದೆ ಎಂದು ನಿರ್ಧರಿಸಿ, ಅದನ್ನು ಸಾರ್ವಜನಿಕವಾಗುವಂತೆ ಮಾಡಬಹುದಾಗಿದೆ.

ಡಿಪಿಡಿಪಿ ಕಾಯ್ದೆಯ ಸೆಕ್ಷನ್ 44 (3) ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(ಜೆ) ಅನ್ನು ತಿದ್ದುಪಡಿ ಮಾಡುತ್ತದೆ. ಇದು ಸರ್ಕಾರಿ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿ ಅಥವಾ ಯಾವುದೇ ಇತರ ವಿನಾಯಿತಿಗಳನ್ನು ಪರಿಗಣಿಸದೆ “ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಮಾಹಿತಿಯನ್ನು” ತಡೆಹಿಡಿಯಲು ಅನುಮತಿ ನೀಡುತ್ತದೆ. ಹಾಗಾಗಿ ಸರ್ಕಾರಿ ಅಧಿಕಾರಿಗಳು ಅಥವಾ ರಾಜಕಾರಣಿಗಳ ಮಾಹಿತಿಯು ‘ವೈಯಕ್ತಿಕ ಮಾಹಿತಿ’ ಎಂಬ ಕಾರಣ ನೀಡಿ ಇನ್ನು ಮುಂದಕ್ಕೆ ಮಾಹಿತಿ ಕೇಳುವವರಿಗೆ ಲಭ್ಯವಾಗದಂತೆ ಮಾಡುವ ಅಪಾಯವಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

1 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಬಿಜೆಪಿ ಸಂಸದೆ ಕಂಗನಾ; ಎಚ್‌ಪಿಎಸ್‌ಇಬಿಎಲ್‌ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...