Homeಚಳವಳಿಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

ಆರ್‌ಟಿಐ ಕಾಯ್ದೆ ದುರ್ಬಲಗೊಳಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ

- Advertisement -
- Advertisement -

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) 2005 ರನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಕೃತ್ಯಗಳ ವಿರುದ್ಧ ದೇಶದಾದ್ಯಂತ ನಾಗರಿಕರ ಹಕ್ಕುಗಳ ಸಂಘಟನೆಗಳು ಮತ್ತು ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನ್ಯಾಷನಲ್ ಕ್ಯಾಂಪೇನ್ ಫಾರ್ ಪೀಪಲ್ಸ್ ರೈಟ್ ಟು ಇನ್ಫರ್ಮೇಷನ್ (ಎನ್‌ಸಿಪಿಆರ್‌ಐ) ಸೇರಿದಂತೆ 30ಕ್ಕೂ ಅಧಿಕ ಸಂಘಟನೆಗಳು ಮಾರ್ಚ್ 21, 2025ರ ಶುಕ್ರವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ, ಆರ್‌ಟಿಐ ಕಾಯ್ದೆಯನ್ನು ರಕ್ಷಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಆರ್‌ಟಿಐ ಕಾಯ್ದೆ

2023ರಲ್ಲಿ ಆರ್‌ಟಿಐ ಕಾಯ್ದೆಗೆ ತರಲಾದ ತಿದ್ದುಪಡಿಯು ಇನ್ನೂ ಜಾರಿಗೆ ಬಂದಿಲ್ಲವಾದರೂ, ಇದು ಸರ್ಕಾರಿ ಸಂಸ್ಥೆಗಳು ನೀಡಬೇಕಾದ ಮಾಹಿತಿಯ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ ಎಂದು ಹೋರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8(1)(j) ಅಡಿಯಲ್ಲಿ, ವೈಯಕ್ತಿಕ ಮಾಹಿತಿಗೆ ಸಂಬಂಧಿಸಿದ ಅರ್ಜಿಗಳನ್ನು ಸರ್ಕಾರಿ ಸಂಸ್ಥೆಗಳು ತಿರಸ್ಕರಿಸಬಹುದು ಎಂದು ತಿಳಿಸಲಾಗಿದೆ. “ಈ ನಿಯಮವು ಮಾಹಿತಿ ನೀಡದಿರಲು ಸರ್ಕಾರಕ್ಕೆ ಸುಲಭ ದಾರಿಯಾಗಲಿದೆ” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕ ನಿಖಿಲ್ ದೇ ಹೇಳಿದ್ದಾರೆ. ಕೇಂದ್ರ ಸರ್ಕಾರವು ಈ ಆತಂಕಗಳಿಗೆ ಸಮರ್ಪಕ ಉತ್ತರ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಸರ್ಕಾರಿ ಅಧಿಕಾರಿಗಳ ಪ್ರಕಾರ, ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ವೈಯಕ್ತಿಕ ಗೌಪ್ಯತೆ ಮೂಲಭೂತ ಹಕ್ಕಾಗಿದ್ದು, ಇದು ಆರ್‌ಟಿಐ ಕಾಯ್ದೆಯೊಂದಿಗೆ ಸಂಘರ್ಷಕ್ಕೊಳಗಾಗಿದೆ. ಆದರೆ, ಹೋರಾಟಗಾರರು ಈ ವಾದವನ್ನು ಒಪ್ಪದೆ, “ಕಾಯ್ದೆಯಲ್ಲಿ ವೈಯಕ್ತಿಕ ಮಾಹಿತಿಗೆ ಈಗಾಗಲೇ ರಕ್ಷಣೆ ಇದ್ದು, ಯಾವಾಗ ಬಹಿರಂಗಪಡಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ಮಾರ್ಗಸೂಚಿ ಇದೆ” ಎಂದು ಮಾಜಿ ಕೇಂದ್ರ ಮಾಹಿತಿ ಆಯುಕ್ತ ಎಂ.ಎಂ. ಅನ್ಸಾರಿ ತಿಳಿಸಿದ್ದಾರೆ.

ಚುನಾಯಿತ ಪ್ರತಿನಿಧಿಗಳ ಶೈಕ್ಷಣಿಕ ದಾಖಲೆಗಳು ಮತ್ತು ಪ್ರಮುಖ ನೀತಿ ನಿರ್ಧಾರಗಳ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ) ಆದೇಶಿಸಿದ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

2023ರಲ್ಲಿ ಜಾರಿಗೊಂಡ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (ಡಿಪಿಡಿಪಿ) ಕಾಯ್ದೆಯ ಮೂಲಕ ಈ ತಿದ್ದುಪಡಿಯನ್ನು ಸಂಸತ್ತು ಅಂಗೀಕರಿಸಿತು. ಈ ಕಾಯ್ದೆಯು ವೈಯಕ್ತಿಕ ಮಾಹಿತಿಯ ಬಹಿರಂಗಪಡಿಸುವಿಕೆಯ ಮೇಲೆ ಸಂಪೂರ್ಣ ನಿಷೇಧ ಹೇರಿದೆ. ಆದರೆ, ಡಿಪಿಡಿಪಿ ಕಾಯ್ದೆಗೆ ಸಂಬಂಧಿಸಿದ ಉಪ-ಕಾನೂನು ಜಾರಿಯಾಗದ ಕಾರಣ, ಈ ತಿದ್ದುಪಡಿ ಇನ್ನೂ ಜಾರಿಗೆ ಬಂದಿಲ್ಲ.

“2025ರ ಡಿಪಿಡಿಪಿ ನಿಯಮಗಳಲ್ಲಿ ಈ ತಿದ್ದುಪಡಿಯನ್ನು ಜಾರಿಗೊಳಿಸದಂತೆ ತಡೆಯಬೇಕು ಮತ್ತು ಸಂಸತ್ತು ಇದನ್ನು ರದ್ದುಗೊಳಿಸಬೇಕು” ಎಂದು ಎನ್‌ಸಿಪಿಆರ್‌ಐ ಸಹ-ಸಂಚಾಲಕಿ ಅಂಜಲಿ ಭಾರದ್ವಾಜ್ ಒತ್ತಾಯಿಸಿದ್ದಾರೆ.

ಈ ತಿದ್ದುಪಡಿಯಿಂದ ಸಾಮಾಜಿಕ ಲೆಕ್ಕಪರಿಶೋಧನೆ ಕಾರ್ಯಗಳು ತೊಂದರೆಗೊಳಗಾಗಲಿವೆ ಎಂದು ಹೋರಾಟರಾರರು ಎಚ್ಚರಿಸಿದ್ದಾರೆ. ಉದಾಹರಣೆಗೆ, ಪಡಿತರ ವಿತರಣೆಯ ದಾಖಲೆಗಳನ್ನು ಪರಿಶೀಲಿಸಿ ಮನೆ ಮನೆಗೆ ಭೇಟಿ ನೀಡುವ ತಪಾಸಣೆಗಳು ಸಾಧ್ಯವಾಗದೇ ಹೋಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. “ಆರ್‌ಟಿಐ ಕಾಯ್ದೆಯ ರಕ್ಷಣೆ ಎಂದರೆ ಪ್ರಜಾಪ್ರಭುತ್ವದ ರಕ್ಷಣೆ ಎಂದರ್ಥ” ಎಂದು ಕಾರ್ಯಕರ್ತರು ಒತ್ತಿ ಹೇಳಿದ್ದಾರೆ. ಆರ್‌ಟಿಐ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...