HomeಮುಖಪುಟParliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

- Advertisement -
- Advertisement -

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ.

ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು ‘ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ’ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಆಡಳಿತ ಪಕ್ಷದ ಸದಸ್ಯರು ಆಡ್ಡಿಪಡಿಸಿದ್ದರಿಂದ ಸದನದಲ್ಲಿ ಗದ್ದಲ ಉಂಟಾಯಿತು.

ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷ ಮತ್ತು ಅದರಿಂದ ಭಾರತದ ಇಂಧನ ಭದ್ರತೆಯ ಮೇಲೆ ಉಂಟಾಗುತ್ತಿರುವ ಪರಿಣಾಮಗಳ ಕುರಿತು ನಿಯಮ 176ರ ಅಡಿಯಲ್ಲಿ ‘ಅಲ್ಪಾವಧಿ ಚರ್ಚೆ’ಗೆ ಅವಕಾಶ ಕೋರಿ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಯ ಅಧ್ಯಕ್ಷರಿಗೆ ನೋಟಿಸ್ ನೀಡಿದ್ದರು.

ಪಶ್ಚಿಮ ಏಷ್ಯಾದಲ್ಲಿನ ಅಸ್ಥಿರತೆಯಿಂದಾಗಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಭಾರತವು ತನ್ನ ಒಟ್ಟು ಕಚ್ಚಾ ತೈಲದ ಸುಮಾರು 55% ರಷ್ಟನ್ನು ಈ ಪ್ರದೇಶದಿಂದಲೇ ಆಮದು ಮಾಡಿಕೊಳ್ಳುತ್ತಿದೆ ಎಂದು ಖರ್ಗೆ ತಮ್ಮ ನೋಟಿಸ್‌ನಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯ ಬಗ್ಗೆಯೂ ಚರ್ಚೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದರು.

ಕಲಾಪ ಆರಂಭಗೊಳ್ಳುತ್ತಿದ್ದಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಶ್ಚಿಮ ಏಷ್ಯಾದ ಸ್ಥಿತಿಗತಿ ಕುರಿತು ಹೇಳಿಕೆ ನೀಡಲು ಮುಂದಾದಾರು. ಈ ವೇಳೆ ವಿರೋಧ ಪಕ್ಷದ ನಾಯಕರಿಗೆ ಮೊದಲು ಮಾತನಾಡಲು ಅವಕಾಶ ನೀಡಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದವು. ಇದರಿಂದಾಗಿ ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು.

ಗದ್ದಲದ ನಡುವೆಯೇ, ಪದೇ ಪದೇ ವಿನಂತಿಸಿದ ನಂತರ ಸಭಾಧ್ಯಕ್ಷರು ನಿಯಮ 176ರ ಅಡಿಯಲ್ಲಿ (ಅಲ್ಪಾವಧಿ ಚರ್ಚೆ) ವಿಷಯವನ್ನು ಪ್ರಸ್ತಾಪಿಸಲು ಖರ್ಗೆ ಅವರಿಗೆ ಅವಕಾಶ ಮಾಡಿಕೊಟ್ಟರು. 

ಅಂತಿಮವಾಗಿ, ಖರ್ಗೆ ಪಶ್ಚಿಮ ಏಷ್ಯಾ ಸಂಘರ್ಷ ಮತ್ತು ಭಾರತದ ಇಂಧನ ಭದ್ರತೆಯ ಮೇಲಾಗುವ ಪರಿಣಾಮಗಳ ಕುರಿತು ಮಾತನಾಡಿದರು.

ಆದಾಗ್ಯೂ, ಖರ್ಗೆ ಮಾತನಾಡುತ್ತಿದ್ದಾಗ ಆಡಳಿತ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮತ್ತು ಸಭಾಧ್ಯಕ್ಷರು ಭಾಷಣ ಮುಕ್ತಾಯಗೊಳಿಸಲು ಸೂಚಿಸಿದ್ದರಿಂದ ಸದನದಲ್ಲಿ ಮತ್ತೆ ಗದ್ದಲ ಮುಂದುವರಿಯಿತು.

ಈ ನಡುವೆ ವಿರೋಧ ಪಕ್ಷಗಳ ಸದಸ್ಯರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿ ನೀಡಿದ್ದ ನೋಟಿಸ್‌ಗಳನ್ನು ಸಭಾಧ್ಯಕ್ಷರು ತಿರಸ್ಕರಿಸಿದರು.

ಪಶ್ಚಿಮ ಏಷ್ಯಾದ ಉದ್ವಿಗ್ನತೆಯಿಂದ ಭಾರತಕ್ಕಾಗುವ ಪರಿಣಾಮಗಳ ಬಗ್ಗೆ ಚರ್ಚಿಸಲು ಕಾಂಗ್ರೆಸ್‌ನ ರಣದೀಪ್ ಸಿಂಗ್ ಸುರ್ಜೇವಾಲಾ ನೋಟಿಸ್ ನೀಡಿದ್ದರು.

ಇಂಧನ ಭದ್ರತೆ, ಆರ್ಥಿಕತೆ ಮತ್ತು ಅನಿವಾಸಿ ಭಾರತೀಯರ ರಕ್ಷಣೆಯ ಬಗ್ಗೆ ಚರ್ಚಿಸಲು ಕೋರಿ ಎಎಪಿಯ ಸಂಜಯ್ ಸಿಂಗ್ ನೋಟಿಸ್ ಸಲ್ಲಿಸಿದ್ದರು.

ಮತದಾರರ ಹಕ್ಕು ಕಸಿದುಕೊಳ್ಳುವಿಕೆ ಕುರಿತು ಚರ್ಚಿಸಲು ಟಿಎಂಸಿಯ ನದಿಮುಲ್ ಹಕ್ ಮತ್ತು ಸಾಕೇತ್ ಗೋಖಲೆ ನಿಯಮ 267ರ ಅಡಿ ನೋಟಿಸ್ ನೀಡಿದ್ದರು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚಿಸಲು ಸಿಪಿಐನ ಪಿ. ಸಂತೋಷ್ ನೋಟಿಸ್ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಸಭಾಧ್ಯಕ್ಷರು ಈ ಎಲ್ಲಾ 267ರ ಅಡಿಯ ನೋಟಿಸ್‌ಗಳನ್ನು ತಿರಸ್ಕರಿಸಿದರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತ್ರ ನಿಯಮ 176ರ ಅಡಿಯಲ್ಲಿ ಅಲ್ಪಾವಧಿ ಚರ್ಚೆಗೆ ಅವಕಾಶ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....