Homeಮುಖಪುಟಮಣಿಪುರದಲ್ಲಿನ ಹಿಂಸಾಚಾರಕ್ಕೆ ಹಿಂದಿನ ಸರ್ಕಾರಗಳ ಆಳ್ವಿಕೆ ಕಾರಣ: ಶೋಭಾ ಕರಂದ್ಲಾಜೆ

ಮಣಿಪುರದಲ್ಲಿನ ಹಿಂಸಾಚಾರಕ್ಕೆ ಹಿಂದಿನ ಸರ್ಕಾರಗಳ ಆಳ್ವಿಕೆ ಕಾರಣ: ಶೋಭಾ ಕರಂದ್ಲಾಜೆ

- Advertisement -
- Advertisement -

ಮಣಿಪುರದ ಅತ್ಯಾಚಾರ, ಕೊಲೆಯ ವೈರಲ್ ವಿಡಿಯೋ ಇಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ಆದರೆ ಅಲ್ಲಿನ ಹಿಂಸಾಚಾರಕ್ಕೆ ಹಿಂದೆ ಆಳಿದ ಸರ್ಕಾರಗಳೇ ಕಾರಣ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರಗೊಂದಿಗೆ ಮಾತನಾಡಿದ ಅವರು, “ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿಯೂ ಇಬ್ಬರನ್ನು ಬೆತ್ತಲೆಗೊಳಿಸಿದ ಪ್ರಕರಣ ನಡೆದಿದೆ. ಇದನ್ನು ಇಟ್ಟುಕೊಂಡು ಮೋದಿ ಸರ್ಕಾರವನ್ನು ದೂರುವುದು ಸರಿಯಲ್ಲ” ಎಂದಿದ್ದಾರೆ.

ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷ ನಡಿಯುತ್ತಿದೆ. ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದ ಇದೆಲ್ಲ ನಡೆಯುತ್ತಿದೆ. ಬೇರೆ ದೇಶದ ನುಸುಳುಕೋರರು ದೊಡ್ಡ ಪ್ರಮಾಣದಲ್ಲಿ ಈಶಾನ್ಯ ಭಾಗದಲ್ಲಿ ಜಮಾ ಆಗಿದ್ದಾರೆ. ನುಸುಳುಕೋರರನ್ನು ಹೊರ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಿದೆ. ಹಾಗಾಗಿ ಸಹಜವಾಗಿ ಹಿಂಸಾಚಾರ ಉಂಟಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈಶಾನ್ಯದ ಎಲ್ಲ ರಾಜ್ಯಗಳನ್ನು 60 ವರ್ಷ ಆಳಿದ ಹಿಂದಿನ ಯುಪಿಎ ಸರ್ಕಾರ ಮತ್ತು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಈಶಾನ್ಯ ರಾಜ್ಯಗಳ ಜನರು ತಾವು ಭಾರತೀಯರು ಎಂದು ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ಈಶಾನ್ಯದ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಎನ್ನುತ್ತಾರೆ. ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಹ ನಡೆಯುತ್ತಿವೆ. ಮೊದಲ ಬಾರಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅವರು ನೋಡುತ್ತಿದ್ದಾರೆ ಎಂದು ಹೇಳಿದರು.

ಈಶಾನ್ಯ ರಾಜ್ಯಗಳಲ್ಲಿ ಶಾಂತಿ ನೆಲೆಸಬೇಕು. ಭಾರತದ ಒಂದು ಭಾಗ ಆಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ಅವರಿಗೆ ಸಿಗಬೇಕು. ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡೋದು ಬಿಟ್ಟು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಹೊರಗೆ ಚರ್ಚೆ ಮಾಡುತ್ತಿವೆ. ಯಾವುದೇ ಉತ್ತರಕ್ಕೂ ಭಾರತ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮತೀಯ ಗೂಂಡಾಗಿರಿ: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...