Homeಕರ್ನಾಟಕಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್‌

ಸರ್ಕಾರಿ ಕೋಟಾದಡಿ ಎಂಬಿಬಿಎಸ್‌ ಪೂರೈಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್‌

- Advertisement -
- Advertisement -

ಸರ್ಕಾರಿ ಕೋಟಾದಡಿ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆದ (2022 ಜುಲೈ 22ಕ್ಕೆ ಅನ್ವಯವಾಗುವಂತೆ) ಎಂಬಿಬಿಎಸ್‌ ವಿದ್ಯಾರ್ಥಿಗಳು ಪದವಿಯ ಬಳಿಕ ಕಡ್ಡಾಯ ಗ್ರಾಮೀಣ ಸೇವೆ ಅಥವಾ ಬಾಂಡ್‌ಗಳ ಅನುಷ್ಠಾನದ ಕಠಿಣ ಷರತ್ತಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ನೀಡಿದೆ.

ಬೆಂಗಳೂರಿನ ಡಾ. ಶರಣ್ಯಾ ಮೋಹನ್‌ ಸೇರಿದಂತೆ ರಾಜಸ್ಥಾನ, ಹರಿಯಾಣ, ಕೇರಳ, ಗುಜರಾತ್‌, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಚೆನ್ನೈನ ವಿವಿಧ ಭಾಗಗಳ ಒಟ್ಟು 447 ವೈದ್ಯರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಲೇವಾರಿ ಮಾಡಿದೆ.

“ಜಗತ್ತಿನ ಯಾವುದೇ ಭಾಗದಲ್ಲಿ ಕಡ್ಡಾಯವಾಗಿ ಗ್ರಾಮೀಣ ಸೇವೆ ಮಾಡುವುದು ವೈದ್ಯಕೀಯ ವೃತ್ತಿಯಲ್ಲಿ ಹೊಸದೇನಲ್ಲ. ಹೆಸರು ಬದಲಾಗಬಹುದು, ವಿಚಾರ ಒಂದೇ. ವೈದ್ಯರು ಸಮುದಾಯ/ಗ್ರಾಮೀಣ ಸೇವೆ ಮಾಡುವುದಕ್ಕೆ ಸಂಬಂಧಿಸಿದಂತೆ ವಿಶ್ವ ಆರೋಗ್ಯ ಸಂಸ್ಥೆಯು ಒಪ್ಪಂದಕ್ಕೆ ಸಹಿ ಹಾಕಿರುವ ದೇಶಗಳಿಗೆ ಹಲವು ಶಿಫಾರಸ್ಸುಗಳನ್ನು ಮಾಡಿದೆ” ಎಂದು ನ್ಯಾಯಾಲಯ ತಿಳಿಸಿದೆ.

“ವೈದ್ಯರನ್ನು ತಲುಪಲು ಸಾಧ್ಯವಾಗದ ಸ್ಥಳಗಳಲ್ಲಿ ವಾಸಿಸುವ ಆದಿವಾಸಿಗಳು, ಬಡವರಿಗೆ ಉತ್ತಮ ಆರೋಗ್ಯ ಸೇವೆ ಕಲ್ಪಿಸುವ ಉದ್ದೇಶದಿಂದ ಗ್ರಾಮೀಣ ಸೇವೆ ಕಡ್ಡಾಯಗೊಳಿಸಲಾಗಿದೆ. ವಿದ್ಯಾರ್ಥಿಗಳು ಸಾರ್ವಜನಿಕ ಆರೋಗ್ಯ ಯೋಜನೆಯ ಭಾಗವಾಗಬೇಕು. ವೈದ್ಯಕೀಯ ಪದವೀಧರರು ಸ್ವಯಂಪ್ರೇರಿತವಾಗಿ ಗ್ರಾಮೀಣ ಪ್ರದೇಶದಲ್ಲಿ ಸೇವೆ ನೀಡಲು ತಮ್ಮನ್ನು ತೊಡಗಿಸಕೊಳ್ಳುತ್ತಾರೆ ಎಂಬ ಕನಸು ಒಂದು ದಿನ ಸಾಕಾರವಾಗಬಹುದು. ಈ ಕನಸು ಆದಷ್ಟು ಬೇಗ ಸಾಕಾರಗೊಳ್ಳುವ ಮೂಲಕ ಸಮಸಮಾಜ ನಿರ್ಮಾಣವಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

“2012ರ ಜುಲೈ 17ರ ಅಧಿಸೂಚನೆಯಲ್ಲಿ ತಿದ್ದುಪಡಿ ನಿಯಮಗಳು ಅಧಿಕೃತ ಗೆಜೆಟ್‌ನಲ್ಲಿ ಪ್ರಕಟವಾದಾಗಿನಿಂದ ಜಾರಿಗೆ ಬರಲಿವೆ ಎಂದು ಹೇಳಲಾಗಿದೆ. ನಿಯಮಗಳು ರೂಪಿಸಿದ ಹತ್ತು ವರ್ಷಗಳ ಬಳಿಕ ಅಂದರೆ 2022ರ ಜುಲೈ 22ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಹತ್ತು ವರ್ಷಗಳಿಂದ ಗಾಢ ನಿದ್ರೆಯಲ್ಲಿತ್ತು ಎಂದೆನಿಸುತ್ತದೆ” ಎಂದು ನ್ಯಾಯಾಲಯ ಕುಟುಕಿದೆ.

ತಿದ್ದುಪಡಿ ನಿಯಮಗಳನ್ನು 2022ರ ಜುಲೈ 27ಕ್ಕೆ ಗೆಜೆಟ್‌ನಲ್ಲಿ ಪ್ರಕಟಿಸಿರುವುದರಿಂದ, ಅದಕ್ಕೂ ಮುಂಚಿನ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯವಾಗದು ಎಂದು ಪೀಠ ಸ್ಪಷ್ಟಪಡಿಸಿದೆ. ಈ ಮೂಲಕ ನ್ಯಾಯಾಲಯದ ಮೆಟ್ಟಿಲೇರಿದ್ದ ಗೆಜೆಟ್‌ ಪ್ರಕಟಣೆಯ ಪೂರ್ವದ 447 ವಿದ್ಯಾರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಯ ನಿಯಮಾವಳಿ ಅನ್ವಯಿಸುವುದಿಲ್ಲ ಎಂದು ತಿಳಿಸಿದ್ದು, ಅವರಿಗೆ ಪರಿಹಾರ ಕಲ್ಪಿಸಿದೆ.

ಇದನ್ನೂ ಓದಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಪ್ರಕರಣ: ಮೂವರು ಉನ್ನತಾಧಿಕಾರಿಗಳ ವಿರುದ್ದ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...