Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

ರಷ್ಯಾ-ಉಕ್ರೇನ್ ಸಂಘರ್ಷ: ತಲಾ 1 ಸಾವಿರ ಯುದ್ಧ ಕೈದಿಗಳ ವಿನಿಮಯ

- Advertisement -
- Advertisement -

ಪರಸ್ಪರ ಸಂಘರ್ಷದಲ್ಲಿ ತೊಡಗಿರುವ ರಷ್ಯಾ ಮತ್ತು ಉಕ್ರೇನ್ ರಾಷ್ಟ್ರಗಳು ತಲಾ 1000 ಯುದ್ದ ಕೈದಿಗಳ ವಿನಿಮಯ ಪ್ರಕ್ರಿಯೆಯನ್ನು ಭಾನುವಾರ (ಮೇ.25) ಪೂರ್ಣಗೊಳಿಸಿವೆ. ಈ ವಿಚಾರವನ್ನು ರಷ್ಯಾದ ರಕ್ಷಣಾ ಸಚಿವಾಲಯ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಚಿತಪಡಿಸಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆಯುತ್ತಿರುವ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಯುದ್ಧ ಕೈದಿಗಳನ್ನು ವಿನಿಮಯ ಮಾಡಿಕೊಂಡಿರುವುದು ಇದೇ ಮೊದಲ ಬಾರಿಯಾಗಿದೆ.

ಮೂರು ದಿನಗಳ ಕೈದಿಗಳ ವಿನಿಮಯ ಪ್ರಕ್ರಿಯೆಯು ಶುಕ್ರವಾರ (ಮೇ.23) ಪ್ರಾರಂಭಗೊಂಡಿತ್ತು. ಬಳಿಕ ಹಂತ ಹಂತವಾಗಿ ಯುದ್ದ ಕೈದಿಗಳ ವಿನಿಮಯ ನಡೆದಿದೆ. ಭಾನುವಾರ, ಎರಡೂ ಕಡೆಯವರು 303 ಕೈದಿಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.

“ಇಂದು, ನಮ್ಮ ಸಶಸ್ತ್ರ ಪಡೆಗಳು, ರಾಷ್ಟ್ರೀಯ ಗಾರ್ಡ್, ರಾಜ್ಯ ಗಡಿ ಕಾವಲು ಸೇವೆ ಮತ್ತು ರಾಜ್ಯ ವಿಶೇಷ ಸಾರಿಗೆ ಸೇವೆಯ ಯೋಧರು ಮನೆಗೆ ಮರಳುತ್ತಿದ್ದಾರೆ” ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಟೆಲಿಗ್ರಾಮ್ ಅಪ್ಲಿಕೇಶನ್‌ನಲ್ಲಿ ಬರೆದುಕೊಂಡಿದ್ದಾರೆ.

ಮೇ 16ರಂದು ಉಭಯ ರಾಷ್ಟ್ರಗಳ ನಡುವೆ ನಡೆದ ಮೊದಲ ನೇರ ಮಾತುಕತೆಯಲ್ಲಿ ಕದನ ವಿರಾಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಆದರೆ, ಯುದ್ಧ ಕೈದಿಗಳ ವಿನಿಮಯಕ್ಕೆ ಒಪ್ಪಿಗೆ ಸೂಚಿಸಲಾಗಿತ್ತು. ಅದರಂತೆ ಕೈದಿಗಳ ಹಸ್ತಾಂತರ ನಡೆದಿದೆ.

ಉಕ್ರೇನ್, ಅಮೆರಿಕ ಮತ್ತು ಇತರ ಪಾಶ್ಚಿಮಾತ್ಯ ದೇಶಗಳು ಶಾಂತಿ ಮಾತುಕತೆಗೆ ಅವಕಾಶ ನೀಡುವ ಸಲುವಾಗಿ ಪೂರ್ವಭಾವಿ ಷರತ್ತುಗಳಿಲ್ಲದೆ 30 ದಿನಗಳ ಕಾಲ ದಾಳಿಯನ್ನು ನಿಲ್ಲಿಸುವಂತೆ ರಷ್ಯಾವನ್ನು ಒತ್ತಾಯಿಸಿವೆ.

ಎರಡನೆಯ ಮಹಾಯುದ್ಧದ ನಂತರದ ಯುರೋಪಿನ ಅತ್ಯಂತ ಮಾರಕ ಸಂಘರ್ಷದಲ್ಲಿ ಎರಡೂ ಕಡೆಯ ಲಕ್ಷಾಂತರ ಸೈನಿಕರು ಗಾಯಗೊಂಡಿದ್ದಾರೆ ಅಥವಾ ಸಾವನ್ನಪ್ಪಿದ್ದಾರೆ ಎಂದು ನಂಬಲಾಗಿದೆ. ಎರಡೂ ಕಡೆಯವರು ಇದುವರೆಗೆ ನಿಖರವಾದ ಸಾವುನೋವುಗಳ ಅಂಕಿ ಅಂಶಗಳನ್ನು ಪ್ರಕಟಿಸಿಲ್ಲ.

ರಷ್ಯಾ ಪಡೆಗಳು ಉಕ್ರೇನಿಯನ್ ನಗರಗಳಿಗೆ ಮುತ್ತಿಗೆ ಹಾಕಿ ಬಾಂಬ್ ದಾಳಿ ನಡೆಸಿದ್ದರಿಂದ ಹತ್ತಾರು ಸಾವಿರ ಉಕ್ರೇನಿಯನ್ ನಾಗರಿಕರು ಕೂಡ ಸಾವನ್ನಪ್ಪಿದ್ದಾರೆ.

ಕೈದಿಗಳ ವಿನಿಮಯ ಪೂರ್ಣಗೊಂಡ ನಂತರ, ದೀರ್ಘಾವಧಿಯ ಶಾಂತಿ ಒಪ್ಪಂದಕ್ಕಾಗಿ ಕರಡು ಪ್ರಸ್ತಾವನೆಯನ್ನು ಉಕ್ರೇನ್‌ಗೆ ಸಲ್ಲಿಸಲು ರಷ್ಯಾ ಸಿದ್ಧವಾಗಲಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಶುಕ್ರವಾರ ಹೇಳಿದ್ದಾರೆ.

ರಷ್ಯಾದ ಪಡೆಗಳು ರಾಜಧಾನಿ ಕೈವ್ ಸೇರಿದಂತೆ ಉಕ್ರೇನಿಯನ್ ನಗರಗಳ ಮೇಲೆ ಶನಿವಾರ (ಮೇ.24) ರಾತ್ರಿಯಿಡೀ 367 ಡ್ರೋನ್‌ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿದ್ದು, ಇದುವರೆಗಿನ ಸಂಘರ್ಷದ ಅತಿದೊಡ್ಡ ವೈಮಾನಿಕ ದಾಳಿಯಾಗಿದೆ. ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ ಎಂದು ಭಾನುವಾರ ಮಾಧ್ಯಮಗಳು ವರದಿ ಮಾಡಿವೆ.

ತಮ್ಮ ವಾಯು ರಕ್ಷಣಾ ಘಟಕಗಳು ನಾಲ್ಕು ಗಂಟೆಗಳ ಅವಧಿಯಲ್ಲಿ 95 ಉಕ್ರೇನಿಯನ್ ಡ್ರೋನ್‌ಗಳನ್ನು ತಡೆಹಿಡಿದಿವೆ ಅಥವಾ ನಾಶಪಡಿಸಿವೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ. ಮಾಸ್ಕೋ ನಗರವನ್ನು ಗುರಿಯಾಗಿಸಿದ್ದ 12 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ಮೇಯರ್ ಸೆರ್ಗೆಯ್ ಸೊಬ್ಯಾನಿನ್ ಭಾನುವಾರ ಹೇಳಿದ್ದಾರೆ.

ಇಸ್ರೇಲ್ ಕ್ಷಿಪಣಿ ದಾಳಿಗೆ ಗಾಝಾದ ಅತೀ ಕಿರಿಯ ಮಾಧ್ಯಮ ಕಾರ್ಯಕರ್ತೆ ಯಕೀನ್ ಹಮ್ಮದ್ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...