Homeಅಂತರಾಷ್ಟ್ರೀಯಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ.

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್ ನೆಲ ತಲುಪಿದ್ದು ಮಿಲಿಟರಿ ಕಾರ್ಯಾಚರಣೆ ಆರಂಭಿಸಿವೆ. ಉಕ್ರೇನ್ NATOಗೆ ಸದಸ್ಯ ರಾಷ್ಟ್ರವಾಗಲು ಮುಂದಾಗಿರುವುದನ್ನು ವಿರೋಧಿಸಿ ಮತ್ತು ಉಕ್ರೇನ್‌ ದೇಶದ ಪೂರ್ವದಲ್ಲಿನ ಡಾನ್‌ಬಾಸ್ ಎಂದು ಕರೆಯಲ್ಪಡುವ ಪ್ರದೇಶದಲ್ಲಿನ ರಷ್ಯಾ ಬೆಂಬಲಿತ ಪ್ರತ್ಯೇಕತಾವಾದಿಗಳನ್ನು ರಕ್ಷಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಯುದ್ದ ಅನಿವಾರ್ಯ ಎಂದಿದ್ದಾರೆ. ಈ ಕುರಿತು ಬೇರೆ ಬೇರೆ ರಾಷ್ಟ್ರಗಳ ಮುಖಂಡರು ಹೇಳಿದ್ದು ಇಲ್ಲಿದೆ.

ರಷ್ಯಾ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದೆ – ಇಂಗ್ಲೆಂಡ್

ಉಕ್ರೇನ್‌ನಲ್ಲಿನ ಭೀಕರ ಘಟನೆಗಳಿಂದ ದಿಗ್ಭ್ರಮೆಗೊಂಡಿದ್ದೇನೆ ಮತ್ತು ಮುಂದಿನ ಹಂತಗಳನ್ನು ಚರ್ಚಿಸಲು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಾತನಾಡಿದ್ದೇನೆ. ರಷ್ಯಾ ಅಧ್ಯಕ್ಷ ಪುಟಿನ್ ಉಕ್ರೇನ್ ಮೇಲೆ ಈ ಅಪ್ರಚೋದಿತ ದಾಳಿಯನ್ನು ನಡೆಸುವ ಮೂಲಕ ರಕ್ತಪಾತ ಮತ್ತು ವಿನಾಶದ ಮಾರ್ಗವನ್ನು ಆರಿಸಿಕೊಂಡಿದ್ದಾರೆ. ಇಂಗ್ಲೆಂಡ್ ಮತ್ತು ನಮ್ಮ ಮಿತ್ರರಾಷ್ಟ್ರಗಳು ಈ ಕುರಿತು ನಿರ್ಣಾಯಕವಾಗಿ ಪ್ರತಿಕ್ರಿಯಿಸುತ್ತವೆ”. – ಬೋರಿಸ್ ಜಾನ್ಸನ್, ಇಂಗ್ಲೆಂಡ್ ಪ್ರಧಾನಿ.

ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ- ಜಪಾನ್

“ಉಕ್ರೇನ್ ಮೇಲಿನ ರಷ್ಯಾದ ದಾಳಿಯು ಅಂತರರಾಷ್ಟ್ರೀಯ ಸಂಬಂಧದ ಅಡಿಪಾಯವನ್ನು ಅಲುಗಾಡಿಸುತ್ತದೆ. ನಾವು ರಷ್ಯಾವನ್ನು ಬಲವಾಗಿ ಖಂಡಿಸುತ್ತೇವೆ. ಇಂತಹ ಯಥಾಸ್ಥಿತಿಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅನುಮತಿಸುವುದಿಲ್ಲ. ಇದನ್ನು ತಡೆಯಲು ಅಮೆರಿಕ ಸೇರಿದಂತೆ ಅಂತರರಾಷ್ಟ್ರೀಯ ಸಮುದಾಯದೊಂದಿಗೆ ಸೇರಿ ಪ್ರಯತ್ನಗಳನ್ನು ಸಂಘಟಿಸುತ್ತೇವೆ ಮತ್ತು ಇದನ್ನು ತ್ವರಿತವಾಗಿ ನಿಭಾಯಿಸುತ್ತೇವೆ” – ಫ್ಯೂಮಿಯೊ ಕಿಶಿಡಾ, ಜಪಾನ್ ಪ್ರಧಾನಿ.

ರಷ್ಯಾದ ಮೇಲೆ ಆರ್ಥಿಕ ನಿರ್ಬಂಧ ವಿಧಿಸುತ್ತೇವೆ – ಆಸ್ಟ್ರೇಲಿಯಾ

“ರಷ್ಯಾ ಯುದ್ಧವನ್ನು ಆಯ್ಕೆ ಮಾಡಿದೆ. ಇಂತಹ ಕ್ರೂರ ಆಕ್ರಮಣ ಮತ್ತು ಏಕಪಕ್ಷೀಯ ಪ್ರತಿಕೂಲ ಕ್ರಮಗಳನ್ನು ನಾವು ಖಂಡಿಸುತ್ತೇವೆ. ಕೂಡಲೇ ರಷ್ಯಾ ತನ್ನ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತೇನೆ. ಈ ಅತಿರೇಕದ ಕೃತ್ಯಗಳಿಗೆ ರಷ್ಯಾದ ಅಧಿಕಾರಿಗಳು ಮತ್ತು ಘಟಕಗಳನ್ನು ನಾವು ಹೊಣೆಗಾರರನ್ನು ಗುರುತಿಸುತ್ತೇವೆ ಮತ್ತು ಆಸ್ಟ್ರೇಲಿಯಾವು ರಷ್ಯಾ ವಿರುದ್ಧ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ವಿಧಿಸುತ್ತದೆ” – ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್

ಫ್ರಾನ್ಸ್ ಖಂಡಿಸುತ್ತದೆ

“ಉಕ್ರೇನ್ ವಿರುದ್ಧ ಯುದ್ಧ ಮಾಡುವ ರಷ್ಯಾದ ನಿರ್ಧಾರವನ್ನು ಫ್ರಾನ್ಸ್ ದೃಢವಾಗಿ ಖಂಡಿಸುತ್ತದೆ. ರಷ್ಯಾ ತನ್ನ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ತಕ್ಷಣವೇ ಕೊನೆಗೊಳಿಸಬೇಕು.- ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಉಕ್ರೇನ್ ಜನರೊಂದಿಗೆ ನಿಲ್ಲುತ್ತೆನೆ- ಅಮೆರಿಕ

ರಷ್ಯಾದ ಮಿಲಿಟರಿ ಪಡೆಗಳಿಂದ ಅಪ್ರಚೋದಿತ ಮತ್ತು ನ್ಯಾಯಸಮ್ಮತವಲ್ಲದ ದಾಳಿಯಿಂದ ಬಳಲುತ್ತಿರುವ ಉಕ್ರೇನ್ ಜನರೊಂದಿಗೆ ನಿಲ್ಲುತ್ತೇನೆ. ಈ ದಾಳಿಯು ತರುವ ಸಾವು ಮತ್ತು ವಿನಾಶಕ್ಕೆ ರಷ್ಯಾ ಮಾತ್ರ ಕಾರಣವಾಗಿದೆ ಮತ್ತು ಪ್ರಪಂಚವು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ. ಇದಕ್ಕೆ ಅಮೆರಿಕ ಮತ್ತು ಅದರ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ಒಗ್ಗಟ್ಟಿನಿಂದ ಮತ್ತು ನಿರ್ಣಾಯಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ”. ಜೋ ಬೈಡನ್, ಅಮೆರಿಕ ಅಧ್ಯಕ್ಷ

ಅನ್ಯಾಯ ಮತ್ತು ಅಸಮರ್ಥನೀಯ- ಇಟಲಿ

ಉಕ್ರೇನ್ ಮೇಲಿನ ರಷ್ಯಾದ ದಾಳಿಯ ಅನ್ಯಾಯ ಮತ್ತು ಅಸಮರ್ಥನೀಯ. ಇಟಲಿ ಸರ್ಕಾರವು ಉಕ್ರೇನ್ ಮೇಲೆ ರಷ್ಯಾದ ದಾಳಿಯನ್ನು ಖಂಡಿಸುತ್ತದೆ. ಈ ನಾಟಕೀಯ ಕ್ಷಣದಲ್ಲಿ ಇಟಲಿ ಉಕ್ರೇನಿಯನ್ ಜನರು ಮತ್ತು ಸಂಸ್ಥೆಗಳಿಗೆ ಬೆಂಬಲ ನೀಡುತ್ತದೆ. ನಾವು ಯುರೋಪಿಯನ್ ಮತ್ತು ನ್ಯಾಟೋ ಮಿತ್ರರಾಷ್ಟ್ರಗಳೊಂದಿಗೆ ತಕ್ಷಣವೇ ಪ್ರತಿಕ್ರಿಯಿಸಲು, ಏಕತೆ ಮತ್ತು ನಿರ್ಣಯದೊಂದಿಗೆ ಕೆಲಸ ಮಾಡುತ್ತಿದ್ದೇವೆ” ಇಟಾಲಿಯನ್ ಪ್ರಧಾನಿ ಮಾರಿಯೋ ಡ್ರಾಘಿ

ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ- ಪಾಕ್ ಪ್ರಧಾನಿ ಇಮ್ರಾನ್ ಖಾನ್

ಎರಡು ದಶಕಗಳ ನಂತರ ಪಾಕ್ ಪ್ರಧಾನಿಯೊಬ್ಬರು ರಷ್ಯಾಗೆ ಭೇಟಿ ನೀಡಿದ್ದಾರೆ. ಆ ಸಮಯದಲ್ಲಿ ರಷ್ಯಾ ಉಕ್ರೇನ್ ಮೇಲೆ ಯುದ್ಧ ಘೋಷಿಸಿದೆ. ಈ ಸಂದರ್ಭದಲ್ಲಿ ಮೊದಲ ಬಾರಿಗೆ ಭೇಟಿ ನೀಡಿದ ಪಾಕ್ ಪಿಎಂ ಇಮ್ರಾನ್ ಖಾನ್ “ಎಂತಹ ಸಂಭ್ರಮದ ಕ್ಷಣದಲ್ಲಿ ನಾನಿಲ್ಲಿಗೆ ಬಂದಿದ್ದೇನೆ” ಎಂದು ರಷ್ಯಾ ಅಧಿಕಾರಿಗಳಿಗೆ ಹೇಳುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.

ಭಾರತದ ನಿಲುವು ಏನು?

ರಷ್ಯಾದ ಯುದ್ಧದ ನಿರ್ಧಾರವನ್ನು ಕಟುವಾಗಿ ಟೀಕಿಸದ ಕೆಲವೇ ದೇಶಗಳಲ್ಲಿ ಭಾರತವೂ ಒಂದು. ಯುಎನ್ ತುರ್ತು ಸಭೆಯಲ್ಲಿ ಭಾರತವು ಎರಡು ಯುರೋಪಿಯನ್ ರಾಷ್ಟ್ರಗಳ ನಡುವಿನ ಉದ್ವಿಗ್ನತೆಯ ಬಗ್ಗೆ ಮಾತ್ರ ಪ್ರಸ್ತಾಪಿಸಿದೆ ಮತ್ತು ಎರಡು ರಾಷ್ಟ್ರಗಳು ಅತ್ಯಂತ ಸಂಯಮ  ಕಾಯ್ದುಕೊಳ್ಳುವಂತೆ ಕರೆ ನೀಡಿದೆ. ಇದೇ ಸಂದರ್ಭದಲ್ಲಿ ರಷ್ಯಾ ಮತ್ತು ಭಾರತದ ನಡುವಿನ ಪಾಲುದಾರಿಕೆ ಸಂಬಂಧ ಮುಂದುವರಿಯುತ್ತದೆ ಎಂದು ರಷ್ಯಾದ ರಾಯಭಾರಿ ಕಚೇರಿಯ ಉಸ್ತುವಾರಿ ರೋಮನ್ ಬಾಬುಶ್ಕಿನ್ ಹೇಳಿದ್ದಾರೆ.

“ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಭಾರತವು ತಟಸ್ಥ ನಿಲುವನ್ನು ಹೊಂದಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ರಷ್ಯಾ ಮತ್ತು ಭಾರತವು ಪರಸ್ಪರ ದೊಡ್ಡ ಯೋಜನೆಗಳನ್ನು ಹೊಂದಿದ್ದೇವೆ. ನಮ್ಮ ಪಾಲುದಾರಿಕೆಯು ಈಗ ಯಾವ ಮಟ್ಟದ್ದಲ್ಲಿದೆಯೋ, ಮುಂದೆಯೂ ಹಾಗೆಯೇ ಇರುತ್ತದೆ ಎಂದು ನಾವು ಭಾವಿಸುತ್ತೇವೆ. ಉಕ್ರೇನ್ ಜೊತೆಗಿನ ಬಿಕ್ಕಟ್ಟು ರಕ್ಷಣಾ ಕ್ಷೇತ್ರಗಳನ್ನು ಒಳಗೊಂಡಂತೆ ಭಾರತ-ರಷ್ಯಾ ಸಂಬಂಧಗಳ ಮೇಲೆ ಪರಿಣಾಮ ಬೀರುವುದಿಲ್ಲ. ಮುಂದಿನ ತಿಂಗಳು ಗುಜರಾತ್‌ನಲ್ಲಿ ನಡೆಯಲಿರುವ ಡೆಫ್ ಎಕ್ಸ್ಪೋದಲ್ಲಿ ರಷ್ಯಾದ ಭಾಗವಹಿಸುತ್ತದೆ” ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ರಷ್ಯಾದಿಂದ ಉಕ್ರೇನ್ ಮೇಲೆ ದಾಳಿ ಸಂದರ್ಭದಲ್ಲಿ ರಷ್ಯಾಗೆ ಪಾಕ್ ಪಿಎಂ ಇಮ್ರಾನ್ ಖಾನ್ ಭೇಟಿ: ಅಮೆರಿಕ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...