Homeಮುಖಪುಟಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ : 2025ರಿಂದ ಉಚಿತ ವಿತರಣೆ ಸಾಧ್ಯತೆ ; ವರದಿ

ಕ್ಯಾನ್ಸರ್ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ : 2025ರಿಂದ ಉಚಿತ ವಿತರಣೆ ಸಾಧ್ಯತೆ ; ವರದಿ

- Advertisement -
- Advertisement -

ರಷ್ಯಾ ಸರ್ಕಾರವು ತನ್ನದೇ ಆದ ಕ್ಯಾನ್ಸರ್ ಲಸಿಕೆಯನ್ನು ಅಭಿವೃದ್ಧಿಪಡಿಸಿರುವುದಾಗಿ ಹೇಳಿಕೊಂಡಿದ್ದು, 2025ರ ಆರಂಭದಲ್ಲಿ ಅದನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

“ಕ್ಯಾನ್ಸರ್ ವಿರುದ್ಧ ರಷ್ಯಾ ತನ್ನದೇ ಆದ mRNA ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಅದನ್ನು ರೋಗಿಗಳಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ರಷ್ಯಾದ ಆರೋಗ್ಯ ಸಚಿವಾಲಯದ ವಿಕಿರಣಶಾಸ್ತ್ರ ವೈದ್ಯಕೀಯ ಸಂಶೋಧನಾ ಕೇಂದ್ರದ ಜನರಲ್ ಡೈರೆಕ್ಟರ್ ಆಂಡ್ರೆ ಕಪ್ರಿನ್ ರೇಡಿಯೊ ರೊಸ್ಸಿಯಾಗೆ ತಿಳಿಸಿದ್ದಾರೆ” ಎಂದು ರಷ್ಯಾದ ಸುದ್ದಿ ಸಂಸ್ಥೆ TASS ವರದಿ ಮಾಡಿದೆ.

“ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಅದು ಕ್ಯಾನ್ಸರ್‌ ಗೆಡ್ಡೆಯ (ಟ್ಯೂಮರ್) ಬೆಳವಣಿಗೆ ಮತ್ತು ಸಂಭಾವ್ಯ ಮೆಟಾಸ್ಟೇಸ್‌ಗಳನ್ನು ನಿಗ್ರಹಿಸಿರುವುದನ್ನು ತೋರಿಸಿದೆ ಎಂದು” ಗಮಾಲೆಯ ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿಯ ನಿರ್ದೇಶಕ ಅಲೆಕ್ಸಾಂಡರ್ ಗಿಂಟ್ಸ್‌ಬರ್ಗ್ ತಿಳಿಸಿರುವುದಾಗಿ TASS ವಿವರಿಸಿದೆ.

ಈ ವರ್ಷದ ಆರಂಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು,”ನಾವು ಕ್ಯಾನ್ಸರ್ ಲಸಿಕೆಗಳು ಮತ್ತು ಹೊಸ ಪೀಳಿಗೆಯ ಇಮ್ಯುನೊಮಾಡ್ಯುಲೇಟರಿ ಔಷಧಿಗಳ ಸೃಷ್ಟಿಗೆ ಬಹಳ ಹತ್ತಿರವಾಗಿದ್ದೇವೆ” ಎಂದು ಹೇಳಿದ್ದರು.

mRNA ಲಸಿಕೆ ಪ್ರತಿರಕ್ಷಣಾ ಪ್ರತಿಕ್ರಿಯೆಯನ್ನು ಉತ್ಪಾದಿಸಲು ಮೆಸೆಂಜರ್ RNA (mRNA) ಎಂಬ ಅಣುವಿನ ನಕಲನ್ನು ಬಳಸುತ್ತದೆ. ಈಗ, ರಷ್ಯಾದ ವಿಜ್ಞಾನಿಗಳು ಕ್ಯಾನ್ಸರ್ ವಿರುದ್ಧ mRNA ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ರಷ್ಯಾದ ಎಲ್ಲಾ ಕ್ಯಾನ್ಸರ್ ರೋಗಿಗಳಿಗೆ ಉಚಿತವಾಗಿ ವಿತರಿಸಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಅಂಬೇಡ್ಕರ್‌ಗೆ ಅವಮಾನ | ಅಮಿತ್ ಶಾ ವಿರುದ್ಧ ಟಿಎಂಸಿಯಿಂದ ಹಕ್ಕುಚ್ಯುತಿ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...