Homeಅಂತರಾಷ್ಟ್ರೀಯಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧ - ವ್ಲಾದಿಮಿರ್ ಪುಟಿನ್

ಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧ – ವ್ಲಾದಿಮಿರ್ ಪುಟಿನ್

- Advertisement -
- Advertisement -

ಇರಾನ್ ವಿರುದ್ಧದ ಆಕ್ರಮಣವು ಆಧಾರರಹಿತವಾಗಿದೆ ಎಂದು ಮಾಸ್ಕೋದಲ್ಲಿ ನಡೆದ ಮಾತುಕತೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರಿಗೆ ತಿಳಿಸಿದ್ದಾರೆ ಎಂದು ಅಲ್‌ಜಝೀರಾ ಸೋಮವಾರ ವರದಿ ಮಾಡಿದೆ. ಇರಾನ್ ಮತ್ತು ರಷ್ಯಾದ ಮಾತುಕತೆಯ ಆರಂಭದಲ್ಲಿ ಪುಟಿನ್ ಈ ಹೇಳಿಕೆ ನೀಡಿದ್ದು, ಇರಾನ್ ಜನರಿಗೆ ಸಹಾಯ ಮಾಡಲು ರಷ್ಯಾ ಸಿದ್ಧವಾಗಿದೆ ಎಂದು ತಿಳಿದ್ದಾರೆ.

ಈ ಮಧ್ಯೆ, ಇರಾನ್ ಮೇಲಿನ ಅಮೆರಿಕದ ದಾಳಿಯನ್ನು ಖಂಡಿಸಿದ್ದಕ್ಕಾಗಿ ಅರಾಘ್ಚಿ ಅವರು ಪುಟಿನ್ ಅವರಿಗೆ ಧನ್ಯವಾದ ಅರ್ಪಿಸಿದ್ದು, ರಷ್ಯಾವು “ಇತಿಹಾಸದ ಸರಿಯಾದ ಭಾಗ”ದಲ್ಲಿ ನಿಂತಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಾಲಿನೈ ಮತ್ತು ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರ ಶುಭಾಶಯಗಳನ್ನು ಪುಟಿನ್ ಅವರಿಗೆ ತಿಳಿಸಲು ಕೇಳಿಕೊಂಡರು ಎಂದು ಅರಾಘ್ಚಿ ಅವರು ಹೇಳಿದ್ದಾರೆ.

ಇರಾನಿನ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ದಾಳಿ ನಡೆಸಿದ ಒಂದು ದಿನದ ನಂತರ ಇಸ್ರೇಲ್ ಮತ್ತು ಇರಾನ್ ನಡುವೆ ಭಾರೀ ವಾಯುದಾಳಿಗಳು ನಡೆದಿವೆ ಎಂದು ಅಲ್‌ಜಝೀರಾ ವರದಿ ಮಾಡಿದೆ. ಇರಾನ್‌ನ ರಾಜಧಾನಿ ಟೆಹ್ರಾನ್‌ನಲ್ಲಿ ಸ್ಫೋಟಗಳು ಸಂಭವಿಸಿದೆ ಎಂದು ವರದಿಯಾಗಿದೆ. ಇಸ್ರೇಲ್ ಸೇನೆಯು ಇರಾನ್‌ನ ಸರ್ಕಾರಿ ಮತ್ತು ಮಿಲಿಟರಿ ತಾಣಗಳ ಮೇಲೆ ದಾಳಿಗಳನ್ನು ಘೋಷಿಸುತ್ತಿದ್ದಂತೆ; ಇರಾನ್ ಕೂಡ ಇಸ್ರೇಲ್‌ಗೆ ಕ್ಷಿಪಣಿಗಳು ಮತ್ತು ಡ್ರೋನ್‌ಗಳ ಸುರಿಮಳೆಗಳನ್ನು ಕಳುಹಿಸುತ್ತಿದೆ, ಹಲವಾರು ನಗರಗಳಲ್ಲಿ ಸ್ಫೋಟಗಳ ಸದ್ದು ಕೇಳಿಬರುತ್ತಿದೆ ಎಂದು ವರದಿ ಹೇಳಿದೆ.

ಈ ನಡುವೆ ಇರಾನ್‌ನ ಶಿಕ್ಷಣ ಮತ್ತು ಸಂಶೋಧನೆಗಾಗಿ ವಿದೇಶಾಂಗ ವ್ಯವಹಾರಗಳ ಉಪ ಸಚಿವ ಸಯೀದ್ ಖತಿಬ್ಜಾದೆಹ್ ಪ್ರತಿಕ್ರಿಯಿಸಿ, ತನ್ನ ದೇಶವು ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕದ ದಾಳಿಗಳಿಗೆ ಸೂಕ್ತವೆಂದು ಭಾವಿಸಿದಾಗ ಪ್ರತಿಕ್ರಿಯಿಸುವ ಹಕ್ಕಿದೆ ಎಂದು ಹೇಳಿದ್ದಾರೆ.

ಮಧ್ಯಪ್ರಾಚ್ಯ ಪ್ರದೇಶದಲ್ಲಿನ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ಇರಾನಿನ ದಾಳಿಯ ಸಾಧ್ಯತೆಯನ್ನು ಖತಿಬ್ಜಾದೆಹ್ ತಳ್ಳಿಹಾಕದೆ, “[ಅಮೆರಿಕನ್ನರಿಗೆ] ಹೇಗೆ, ಯಾವಾಗ ಮತ್ತು ಯಾವ ಮಟ್ಟದಲ್ಲಿ ಪ್ರತಿಕ್ರಿಯಿಸಬೇಕು ಎಂಬುದನ್ನು ಇರಾನ್ ನಿರ್ಧರಿಸುತ್ತದೆ” ಎಂದು ಅವರು ಹೇಳಿದ್ದಾರೆ. ಇರಾನ್‌ ಫೋರ್ಡೋವ್‌ನಂತಹ ಪರಮಾಣು ತಾಣಗಳ ಮೇಲೆ ಅಮೆರಿಕ ಬಾಂಬ್ ದಾಳಿ ನಡೆಸಿದ್ದು ಅಂತರರಾಷ್ಟ್ರೀಯ ಕಾನೂನನ್ನು ಉಲ್ಲಂಘಿಸುವ “ಗಂಭೀರ ತಪ್ಪು” ಎಂದು ಸಚಿವರು ಬಣ್ಣಿಸಿದ್ದಾರೆ.

ಜೂನ್ 13 ರಂದು ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದ ನಂತರ 13 ಮಕ್ಕಳು ಸೇರಿದಂತೆ 400 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 3,056 ಜನರು ಗಾಯಗೊಂಡಿದ್ದಾರೆ ಎಂದು ಇರಾನ್ ಆರೋಗ್ಯ ಸಚಿವಾಲಯ ಹೇಳಿದೆ. ಇಸ್ರೇಲ್‌ನಲ್ಲಿ ಇರಾನಿನ ದಾಳಿಯಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇರಾನ್ ಜನರಿಗೆ ಸಹಾಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ಮುಂಬೈ: 60 ವರ್ಷದ ಕ್ಯಾನ್ಸರ್ ರೋಗಿಯನ್ನು ಕಸದ ರಾಶಿಯಲ್ಲಿ ಮಲಗಿಸಿದ ಮೊಮ್ಮಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...