Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

ರಷ್ಯಾ-ಉಕ್ರೇನ್‌ ಬಿಕ್ಕಟ್ಟು: ಕ್ಷಿಪಣಿ ದಾಳಿ; ಕರ್ನಾಟಕ ಮೂಲದ ವಿದ್ಯಾರ್ಥಿ ಬಲಿ

- Advertisement -
- Advertisement -

ಇಂದು ಬೆಳಗ್ಗೆ ಉಕ್ರೇನ್‌ನ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ತಿಳಿಸಿದೆ. ಸಚಿವಾಲಯವು ವಿದ್ಯಾರ್ಥಿಯ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದ್ದು, ವಿದ್ಯಾರ್ಥಿಯ ಹೆಸರನ್ನು ಅಧೀಕೃತವಾಗಿ ಇನ್ನೂ ಬಿಡುಗಡೆ ಮಾಡಿಲ್ಲ.

“ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ ಎಂದು ನಾವು ತೀವ್ರ ದುಃಖದಿಂದ ದೃಢೀಕರಿಸುತ್ತೇವೆ. ಸಚಿವಾಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

“ರಷ್ಯಾ ಮತ್ತು ಉಕ್ರೇನ್‌ನ ರಾಯಭಾರಿಗಳನ್ನು ಕರೆಸಿಕೊಂಡಿರುವ ವಿದೇಶಾಂಗ ಕಾರ್ಯದರ್ಶಿ ಖಾರ್ಕಿವ್‌ನಲ್ಲಿರುವ ಭಾರತೀಯ ಪ್ರಜೆಗಳಿಗೆ ಮತ್ತು ಇತರ ಸಂಘರ್ಷ ವಲಯಗಳಲ್ಲಿರುವ ನಗರಗಳಿಗೆ ತುರ್ತು ಸುರಕ್ಷಿತ ಮಾರ್ಗಕ್ಕಾಗಿ ನಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. ಇದೇ ರೀತಿಯ ಕ್ರಮವನ್ನು ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ನಮ್ಮ ರಾಯಭಾರಿಗಳು ಸಹ ಕೈಗೊಳ್ಳುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಖಾರ್ಕಿವ್ ವೈದ್ಯಕೀಯ ವಿಶ್ವವಿದ್ಯಾಲಯದ 4 ನೇ ವರ್ಷದ ಭಾರತೀಯ ವಿದ್ಯಾರ್ಥಿ ನವೀನ್ ಶೇಖರರಪ್ಪ ಜ್ಞಾನಗೌಡರ ಎಂದು ಮೃತಪಟ್ಟ ವಿದ್ಯಾರ್ಥಿಯನ್ನು ಗುರುತಿಸಲಾಗಿದೆ ಎಂದು ಪತ್ರಕರ್ತಬ್ಬರು ಟ್ವೀಟ್ ಮಾಡಿದ್ದರೆ. ಇವರು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಪ್ರಜಾವಾಣಿ ಬರೆದಿದ್ದು, ಇನ್ನೂ ದೃಢೀಕರಿಸಿಲ್ಲ ಎಂದು ತನ್ನ ವರದಿಯಲ್ಲಿ ಹೇಳಿದೆ.

“ಖಾರ್ಕಿವ್ ಗವರ್ನರ್ ಹೌಸ್/ಸಿಟಿ ಹಾಲ್‌ಗೆ ಆಹಾರ ತೆಗೆದುಕೊಳ್ಳಲು ಹೋದಾಗ ರಷ್ಯಾದ ಕ್ಷಿಪಣಿ ದಾಳಿಯಲ್ಲಿ ಕರ್ನಾಟಕದ ಒಬ್ಬ ಭಾರತೀಯ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಭಾರತೀಯ ವಿದ್ಯಾರ್ಥಿ ಸಂಯೋಜಕಿ ಡಾ.ಪೂಜಾ ಖಾರ್ಕಿವ್‌ನಿಂದ ನನಗೆ ಮಾಹಿತಿ ನೀಡಿದ್ದಾರೆ. 3000-4000 ಭಾರತೀಯರು ಇನ್ನೂ ಖಾರ್ಕಿವ್‌ನಲ್ಲಿ ಸಿಲುಕಿಕೊಂಡಿದ್ದಾರೆ” ಎಂದು ಆದಿಥ್ಯ ರಾಜ್ ಕೌಲ್‌ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಮಂಗಳವಾರ ಒತ್ತಾಯಿಸಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್ ಮೇಲೆ ಯುದ್ಧ ಸಾರಿದ ರಷ್ಯಾ; ವಿವಿಧ ರಾಷ್ಟ್ರಗಳ ಮುಖಂಡರು ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...