ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
“ಸೋಮವಾರ ಬೆಳಗ್ಗೆ ರಷ್ಯಾದ ಪೆರ್ಮ್ ನಗರದ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ” ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಗಾಬರಿಗೊಂಡ ವಿದ್ಯಾರ್ಥಿಗಳು ಶೂಟರ್‌ನಿಂದ ತಪ್ಪಿಸಿಕೊಳ್ಳಲು ವಿಶ್ವವಿದ್ಯಾಲಯದ ಕಟ್ಟಡಗಳಿಂದ ಜಿಗಿಯುತ್ತಿರುವ ವಿಡಿಯೊಗಳು ವೈರಲ್ ಆಗಿವೆ. ವಿವಿಯ ಕ್ಯಾಂಪಸ್ ಒಳಗೆ ಬಂದೂಕು ಹಿಡಿದು ಪ್ರವೇಶಿಸುತ್ತಿರುವ ಆರೋಪಿಯ ವಿಡಿಯೊಗಳು ಕೂಡ ವೈರಲ್ ಆಗಿವೆ.
ಇದನ್ನೂ ಓದಿ: ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ
reports of another school shooting in Russia; this time at Perm State University. Russian agencies say there are casualties. pic.twitter.com/jkeyGDLO05
— Mike Eckel (@Mike_Eckel) September 20, 2021
ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸುಮಾರು 12,000 ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಾರೆ. ತನಿಖಾಧಿಕಾರಿಗಳ ಪ್ರಕಾರ ಫೈರಿಂಗ್ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ. ಎಂಟು ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ ಸದ್ಯ ದಾಳಿಕೋರರನ್ನು ವಶಕ್ಕೆ ಪಡೆಯಲಾಗಿದೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಆತ ಗಾಯಗೊಂಡಿದ್ದಾರೆ. ಆತನಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
Напавший на университет в Перми был ранен при задержании, с ним работают врачи. pic.twitter.com/pDZ9YIpqcT
— Рустем Адагамов (@adagamov) September 20, 2021
“ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ನಡೆದ ಭೀಕರ ದಾಳಿಯಿಂದ ಆಘಾತವಾಗಿದೆ” ಎಂದು ರಷ್ಯಾದ ಭಾರತೀಯ ರಾಯಭಾರ ಕಚೇರಿ ಹೇಳಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ರಾಯಭಾರ ಕಚೇರಿ, ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದೆ.
ಇದನ್ನೂ ಓದಿ: ಅಸ್ಸಾಂ: ಟ್ರಕ್ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ


