Homeಅಂತರಾಷ್ಟ್ರೀಯರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

ರಷ್ಯಾದ ವಿವಿಯಲ್ಲಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: 8 ಮಂದಿ ಸಾವು

- Advertisement -
- Advertisement -

ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯ ಕಟ್ಟಡವೊಂದರಲ್ಲಿ ವಿದ್ಯಾರ್ಥಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಬಲಿಯಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

“ಸೋಮವಾರ ಬೆಳಗ್ಗೆ ರಷ್ಯಾದ ಪೆರ್ಮ್ ನಗರದ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ” ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಗಾಬರಿಗೊಂಡ ವಿದ್ಯಾರ್ಥಿಗಳು ಶೂಟರ್‌ನಿಂದ ತಪ್ಪಿಸಿಕೊಳ್ಳಲು ವಿಶ್ವವಿದ್ಯಾಲಯದ ಕಟ್ಟಡಗಳಿಂದ ಜಿಗಿಯುತ್ತಿರುವ ವಿಡಿಯೊಗಳು ವೈರಲ್ ಆಗಿವೆ. ವಿವಿಯ ಕ್ಯಾಂಪಸ್‌ ಒಳಗೆ ಬಂದೂಕು ಹಿಡಿದು ಪ್ರವೇಶಿಸುತ್ತಿರುವ ಆರೋಪಿಯ ವಿಡಿಯೊಗಳು ಕೂಡ ವೈರಲ್ ಆಗಿವೆ.

ಇದನ್ನೂ ಓದಿ: ಅನ್ಯಧರ್ಮೀಯ ಯುವತಿಯನ್ನು ಡ್ರಾಪ್ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನ

ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಸುಮಾರು 12,000 ವಿದ್ಯಾರ್ಥಿಗಳು ವ್ಯಾಸಂಗ ನಡೆಸುತ್ತಾರೆ. ತನಿಖಾಧಿಕಾರಿಗಳ ಪ್ರಕಾರ ಫೈರಿಂಗ್ ವೇಳೆ ಆರು ಮಂದಿ ಗಾಯಗೊಂಡಿದ್ದಾರೆ. ಎಂಟು ಜನ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ ಸದ್ಯ ದಾಳಿಕೋರರನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯುವ ವೇಳೆ ಆತ ಗಾಯಗೊಂಡಿದ್ದಾರೆ. ಆತನಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

“ರಷ್ಯಾದ ಪೆರ್ಮ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ನಡೆದ ಭೀಕರ ದಾಳಿಯಿಂದ ಆಘಾತವಾಗಿದೆ” ಎಂದು ರಷ್ಯಾದ ಭಾರತೀಯ ರಾಯಭಾರ ಕಚೇರಿ ಹೇಳಿದೆ. ದಾಳಿಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿರುವ ರಾಯಭಾರ ಕಚೇರಿ, ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿಸಿದೆ.


ಇದನ್ನೂ ಓದಿ: ಅಸ್ಸಾಂ: ಟ್ರಕ್‌ ಮೇಲೆ ಶಂಕಿತ ಉಗ್ರರಿಂದ ಗುಂಡಿನ ದಾಳಿ; ಐವರು ಮೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...