Homeಕರ್ನಾಟಕಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

ಉಕ್ರೇನ್‌ ವಿರುದ್ಧ ಯುದ್ಧ ವಿರೋಧಿಸಿ ರಷ್ಯಾ ಪ್ರಜೆಗಳ ಪ್ರತಿಭಟನೆ; 700 ಜನರ ಬಂಧನ

- Advertisement -
- Advertisement -

ಮಾಸ್ಕೋ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಮೇಲೆ ಆಕ್ರಮಣ ಮಾಡಲು ಸೈನ್ಯವನ್ನು ಕಳುಹಿಸಿದ ನಂತರ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳು ಬಿರುಸುಪಡೆದಿದೆ. ರಷ್ಯಾದ ಪೊಲೀಸರು ಹಲವು ನಗರಗಳಲ್ಲಿ 700ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ ಎಂದು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ.

ಮಧ್ಯ ಮಾಸ್ಕೋದ ಪುಷ್ಕಿನ್ ಚೌಕದ ಬಳಿ ಸುಮಾರು 2,000 ಜನರು ಜಮಾಯಿಸಿದ್ದರು. ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ 1,000 ಜನರು ಸೇರಿದ್ದರು ಎಂದು ಸ್ಥಳದಲ್ಲಿದ್ದ ಎಎಫ್‌ಪಿ ವರದಿಗಾರರು ತಿಳಿಸಿದ್ದಾರೆ.

ರಷ್ಯಾ ಜನತೆಯ ವಿರೋಧದ ನಡುವೆ ಉಕ್ರೇನ್‌ ಮೇಲೆ ಆಕ್ರಮಣ ನಡೆಯುತ್ತಿದೆ. ಹೆಚ್ಚಿನ ಪ್ರತಿಭಟನಾ ನಿರತ ನಾಯಕರನ್ನು ಹತ್ಯೆ ಮಾಡಲಾಗಿದೆ, ಜೈಲಿನಲ್ಲಿಡಲಾಗಿದೆ ಅಥವಾ ದೇಶದಿಂದ ಹೊರದೂಡಲಾಗಿದೆ ಎಂದು ವರದಿಗಳಾಗಿವೆ.

ಪುಟಿನ್ ವಿರುದ್ಧ ರಷ್ಯಾದಲ್ಲಿ ಬಹುದೊಡ್ಡ ಪ್ರತಿಭಟನೆಗಳನ್ನು ಸಂಘಟಿಸುತ್ತಿದ್ದ ವಿರೋಧ ಪಕ್ಷದ ನಾಯಕ ಅಲೆಕ್ಸಿ ನವಲ್ನಿ ಅವರನ್ನು ಕಳೆದ ಎರಡೂವರೆ ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

ಗುರುವಾರ ಮುಂಜಾನೆ ಪುಟಿನ್ ಉಕ್ರೇನ್ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ನಂತರ ರಷ್ಯಾದ ಹಲವಾರು ಕಾರ್ಯಕರ್ತರು ಜನರು ಬೀದಿಗಿಳಿಯುವಂತೆ ಸಾಮಾಜಿಕ ಮಾಧ್ಯಮಗಳ ಮೂಲಕ ಕರೆ ನೀಡಿದ್ದಾರೆ.

ಮಾಸ್ಕೋದಲ್ಲಿ, ಪ್ರತಿಭಟನಾಕಾರರು ಪುಷ್ಕಿನ್ ಚೌಕದಲ್ಲಿ ಸೇರಿ “ಯುದ್ಧ ಬೇಡ!” ಎಂದು ಘೋಷಣೆ ಕೂಗಿದ್ದಾರೆ.

“ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನ ಸಂಬಂಧಿಕರು ಮತ್ತು ಪ್ರೀತಿಪಾತ್ರರು ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ” ಎಂದು 23 ವರ್ಷದ ಅನಸ್ತಾಸಿಯಾ ನೆಸ್ಟುಲ್ಯ ಮಾಸ್ಕೋದಲ್ಲಿ ಹೇಳಿದರು.

“ನಾನು ಅವರಿಗೆ ಫೋನ್ ಮೂಲಕ ಏನು ಹೇಳಬಹುದು? ನೀವು ಅಲ್ಲಿಯೇ ಇರಿ ಎನ್ನಬಹುದೆ?” ಎಂದು ಅವರು ಕೇಳಿದರು. “ಅನೇಕರು ಪ್ರತಿಭಟಿಸಲು ಹೆದರುತ್ತಾರೆ” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸೇಂಟ್ ಪೀಟರ್ಸ್ಬರ್ಗ್‌‌ನಲ್ಲಿ ಸೇರಿದ್ದ ಅನೇಕರು ಇದೇ ರೀತಿಯ ಹೇಳಿಕೆಗಳನ್ನು ನೀಡಿ ಪುಟಿನ್‌ ವಿರುದ್ಧ ಸಿಡಿದೆದ್ದಿದ್ದಾರೆ.

“ಅಧಿಕಾರಿಗಳಿಗೆ ಹುಚ್ಚು ಹಿಡಿದಿದೆ ಎಂಬ ಭಾವನೆ ನನ್ನಲ್ಲಿದೆ” ಎಂದು 27 ವರ್ಷದ ಸ್ವೆಟ್ಲಾನಾ ವೋಲ್ಕೊವಾ ತಿಳಿಸಿದ್ದಾರೆ. ರಷ್ಯಾದಲ್ಲಿ ಪ್ರತಿಭಟನೆ ಮಾಡಲು ಕೆಲವೇ ಜನರು ಸಿದ್ಧರಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

‘ಅಪಪ್ರಚಾರದಿಂದ ಜನರನ್ನು ಮೂರ್ಖರನ್ನಾಗಿಸಲಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಮೂವರು ಪೊಲೀಸ್ ಅಧಿಕಾರಿಗಳು ಅವರನ್ನು ಎಳೆದೊಯ್ಯುತ್ತಿದ್ದಂತೆ, ಯುವಕನೊಬ್ಬ- “ನೀವು ಯಾರೊಂದಿಗೆ ಹೋರಾಡುತ್ತಿದ್ದೀರಿ? ಪುಟಿನ್ ಅವರನ್ನು ಬಂಧಿಸಿ” ಎಂದು ಘೋಷಣೆ ಕೂಗಿದನು.

ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನಾ ಕಾನೂನುಗಳನ್ನು ರಷ್ಯಾ ಕಠಿಣಗೊಳಿಸಿದೆ. ಸಾಮಾನ್ಯವಾಗಿ ಸಾಮೂಹಿಕ ಬಂಧನಗಳನ್ನು ಮಾಡುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲಾಗುತ್ತಿದೆ.

ಜೈಲಿನಲ್ಲಿರುವ ವಿರೋಧ ಪಕ್ಷದ ನಾಯಕ ನವಲ್ನಿ ಅವರು ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿದ್ದಾರೆ. “ನಾನು ಈ ಯುದ್ಧದ ವಿರುದ್ಧ ಇದ್ದೇನೆ” ಎಂದು ನವಲ್ನಿ ಅವರು ಸ್ವತಂತ್ರ ಟೆಲಿವಿಷನ್ ಚಾನೆಲ್ ಡೋಜ್ ಪ್ರಕಟಿಸಿದ ವೀಡಿಯೊದಲ್ಲಿ ತಿಳಿಸಿದ್ದಾರೆ.

“ದೇಶದೊಳಗಿನ ಸಮಸ್ಯೆಗಳನ್ನು ಮುಚ್ಚಿಹಾಕಲು, ರಷ್ಯಾ ಸರ್ಕಾರ ಎಸಗಿರುವ ತಪ್ಪುಗಳನ್ನು ಜನರಿಗೆ ತಿಳಿಯದಂತೆ ಮುಚ್ಚಿ ಹಾಕಲು ರಷ್ಯಾ ಮತ್ತು ಉಕ್ರೇನ್ ನಡುವಿನ ಈ ಯುದ್ಧ ನಡೆಯುತ್ತಿದೆ” ಎಂದು 45 ವರ್ಷದ ವ್ಯಕ್ತಿಯೊಬ್ಬರು ಹೇಳಿದ್ದಾರೆ.

ಯುದ್ಧ-ವಿರೋಧಿ ನಿಲುವು ಹೊಂದಿರುವವರು ಪ್ರತಿಭಟನೆಗಳನ್ನು  ನಡೆಸದಂತೆ ರಷ್ಯಾ ಅಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

ಪ್ರಮುಖ ಅಪರಾಧಗಳನ್ನು ತನಿಖೆ ಮಾಡುವ ಸರ್ಕಾರಿ ಸಂಸ್ಥೆಯಾದ ತನಿಖಾ ಸಮಿತಿಯು ಎಚ್ಚರಿಕೆ ನೀಡಿದ್ದು, ರಷ್ಯನ್ನರು ವಿದೇಶಿ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ ಅನಧಿಕೃತ ಪ್ರತಿಭಟನೆಗಳಿಗೆ ಸೇರಿದರೆ ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದಿದೆ.


ಇದನ್ನೂ ಓದಿರಿ: ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಸೂಕ್ತ ಕ್ರಮ: ಬಸವರಾಜ ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...