Homeಮುಖಪುಟಉಕ್ರೇನ್‌ನ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ಪತನ

ಉಕ್ರೇನ್‌ನ 65 ಯುದ್ಧ ಕೈದಿಗಳಿದ್ದ ರಷ್ಯಾದ ವಿಮಾನ ಪತನ

- Advertisement -
- Advertisement -

ಉಕ್ರೇನ್‌ನ 65 ಮಂದಿ ಯುದ್ಧ ಕೈದಿಗಳನ್ನು ಸಾಗಿಸುತ್ತಿದ್ದ ರಷ್ಯಾದ ಎಲ್‌-76 ಮಿಲಿಟರಿ ವಿಮಾನವು ರಷ್ಯಾದ ಬೆಲ್ಗೊರೊಡ್‌ ಪ್ರಾಂತ್ಯದಲ್ಲಿ ಉಕ್ರೇನ್‌ ಗಡಿ ಸಮೀಪ ಪತನಗೊಂಡಿದೆ.

ವಸತಿ ಪ್ರದೇಶದ ಸಮೀಪ ವಿಮಾನ ಪತನಗೊಂಡು ಹೊತ್ತಿ ಉರಿದ ವಿಡಿಯೊವೊಂದು ಲಭ್ಯವಾಗಿದೆ. ಅದರಲ್ಲಿ ವಿಮಾನದ ಬಲಭಾಗದ ರೆಕ್ಕೆ ಮೊದಲು ನೆಲಕ್ಕೆ ಬಡಿದು ನಂತರ ಅದು ಹೊತ್ತಿ ಉರಿದಿರುವುದನ್ನು ಕಾಣಬಹುದು.

ರಷ್ಯಾದ ಕಾಲಮಾನ ಬೆಳಿಗ್ಗೆ 11 ಗಂಟೆಗೆ ಸಾಮಾನ್ಯ ಹಾರಾಟದ ವೇಳೆ ವಿಮಾನ ಪತನಗೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಹೇಳಿದೆ. ವಿಮಾನದಲ್ಲಿ 65 ಉಕ್ರೇನ್‌ ಸೇನಾ ಸಿಬ್ಬಂದಿ, 6 ಮಂದಿ ವಿಮಾನ ಸಿಬ್ಬಂದಿ ಮೂವರು ಸಹಾಯಕರಿದ್ದರು ಎಂದು ಸಚಿವಾಲಯ ತಿಳಿಸಿದೆ.

ಘಟನೆಯ ಬಗ್ಗೆ ಮಾಹಿತಿ ದೊರೆತಿದೆ. ಆದರೆ, ವಿಮಾನದಲ್ಲಿದ್ದವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಬೆಲ್ಗೊರೊಡ್ ಪ್ರಾದೇಶಿಕ ಗವರ್ನರ್ ವ್ಯಾಚೆಸ್ಲಾವ್ ಗ್ಲಾಡ್ಕೋವ್ ಅವರು ತಿಳಿಸಿದ್ದಾರೆ. ಮಾಧ್ಯಮ ವರದಿಗಳು ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿರುವ ಸಾಧ್ಯತೆಯಿದೆ ಎಂದಿದೆ.

ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...