Homeಮುಖಪುಟರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

ರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

- Advertisement -
- Advertisement -

ರಷ್ಯಾದ ಸೇನಾ ಬೆದರಿಕೆ ಹೆಚ್ಚಿರುವ ಕಾರಣ ಉಕ್ರೇನ್‌ನಲ್ಲಿ ಉಳಿದಿರುವ ಎಲ್ಲ ಅಮೆರಿಕನ್ ನಾಗರಿಕರು ತಕ್ಷಣವೇ ದೇಶವನ್ನು ತೊರೆಯಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌‌ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ಮಾಸ್ಕೋ ಆಕ್ರಮಣ ಮಾಡಿದರೆ ಅಮೆರಿಕನ್ನರನ್ನು ರಕ್ಷಿಸಲು ಪಡೆಗಳನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪರಿಸ್ಥಿತಿ ಸ್ಥಿಮಿತ ಕಳೆದುಕೊಳ್ಳಬಹುದು ಎಂದು ಬೈಡನ್‌ ಎಚ್ಚರಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಡಿಯಲ್ಲಿ 1,00,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದ್ದರೂ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಯಾವುದೇ ಯೋಜನೆಯನ್ನು ರಷ್ಯಾ ಪದೇ ಪದೇ ನಿರಾಕರಿಸಿದೆ.

PC: BBC

ಮುಂದಿನ ವಾರದಲ್ಲಿ ರಷ್ಯಾ ನೌಕಾ ಸಮರಾಭ್ಯಾಸಕ್ಕೆ ತಯಾರಿ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಸಮುದ್ರಕ್ಕೆ ತನ್ನ ಪ್ರವೇಶವನ್ನು ನಿರ್ಬಂಧಿಸುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

ಅಜೋವ್ ಸಮುದ್ರಕ್ಕೆ ಪ್ರವೇಶಿಸುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ರಷ್ಯಾದ ಸೇನೆಗಳು ಕಪ್ಪು ಸಮುದ್ರದ ಸಂಪರ್ಕವನ್ನು ಕತ್ತರಿಸಿ ಹಾಕಿವೆ ಎಂದು ಉಕ್ರೇನಿನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ.

ನೆರೆಯ ಬೆಲಾರಸ್‌ನೊಂದಿಗೆ ಬೃಹತ್ ಮಿಲಿಟರಿ ಕಸರತ್ತುಗಳನ್ನು ರಷ್ಯಾ ಪ್ರಾರಂಭಿಸಿದೆ. ಬೆಲಾರಸ್ ರಷ್ಯಾದ ನಿಕಟ ಮಿತ್ರರಾಷ್ಟ್ರವಾಗಿದೆ. ಉಕ್ರೇನ್‌ನೊಂದಿಗೆ ಸುದೀರ್ಘವಾದ ಗಡಿಯನ್ನು ಹೊಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾನ್ಸ್, “ಶೀತಲ ಸಮರದ ನಂತರ ಬೆಲಾರಸ್‌ಗೆ ರಷ್ಯಾದ ಅತಿದೊಡ್ಡ ನಿಯೋಜನೆ ಇದೆಂದು ನಂಬಲಾಗಿದೆ. ಇದು ಹಿಂಸೆಯ ಮುನ್ಸೂಚನೆ” ಎಂದಿದೆ. ಈ ಬೆಳವಣಿಗೆಯನ್ನು ಉಕ್ರೇನ್, “ಮಾನಸಿಕ ಒತ್ತಡ” ಎಂದು ಪರಿಗಣಿಸಿದೆ.

ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಕಪ್ಪು ಸಮುದ್ರ ಮತ್ತು ಅಜೋವ್ ಸಮುದ್ರದಲ್ಲಿ ಮುಂದಿನ ವಾರ ರಷ್ಯಾದ ನೌಕಾ ಸಮರಾಭ್ಯಾಸ ನಡೆಯಲಿದೆ. ಕ್ಷಿಪಣಿ ಮತ್ತು ಗುಂಡಿನ ದಾಳಿಯ ಕಸರತ್ತುಗಳನ್ನು ಉಲ್ಲೇಖಿಸಿರುವ ರಷ್ಯಾ ಕರಾವಳಿ ಭಾಗದಲ್ಲಿ ಎಚ್ಚರಿಕೆಗಳನ್ನು ನೀಡಿದೆ.

ಉಕ್ರೇನ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಈ ಬೆಳವಣಿಗೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದು, “ಮಿಲಿಟರಿ ಕಸರತ್ತಿನ ನೆಪದಲ್ಲಿ ಉಕ್ರೇನ್‌ನ ಕಡಲ ಸಾರ್ವಭೌಮತ್ವವನ್ನು ರಷ್ಯಾ ನಿರ್ಬಂಧಿಸಲಿದೆ. ಕಪ್ಪು ಸಮುದ್ರ, ಅಜೋವ್ ಸಮುದ್ರದಲ್ಲಿ ನೌಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲಿದೆ. ಉಕ್ರೇನ್‌ನ ಆರ್ಥಿಕತೆಗೆ ಅಗತ್ಯವಾದ ಸಮುದ್ರ ಮಾರ್ಗಕ್ಕೆ ಅಡ್ಡಿಪಡಿಸಲಿದೆ” ಎಂದು ಟ್ವೀಟ್ ಮಾಡಿದೆ.


ಇದನ್ನೂ ಓದಿರಿ: ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...