Homeಚಳವಳಿರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

ರೈತರ ಪ್ರತಿರೋಧದ ಹಿನ್ನೆಲೆ: ಸುಪ್ರೀಂ ಸಮಿತಿಯಿಂದ ಸ್ವಯಂ ಹೊರನಡೆದ ಭೂಪಿಂದರ್‌ ಮನ್

2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಭೂಪಿಂದರ್‍ ಸಿಂಗ್ ಮನ್ ಮನವಿ ಪತ್ರ ನೀಡಿದ್ದರು.

- Advertisement -
- Advertisement -

ಕೃಷಿ ಕಾಯ್ದೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸುಪ್ರೀಂ ಕೋರ್ಟ್‌ ನೇಮಿಸಿದ್ದ ಸಮಿತಿಯ ನಾಲ್ವರು ಸದಸ್ಯರಲ್ಲೊಬ್ಬರಾದ ಭೂಪಿಂದರ್ ಸಿಂಗ್ ಮನ್ ಸಮಿತಿಯಿಂದ ಸ್ವಯಂ ಹೊರಗುಳಿಯುವುದಾಗಿ ಘೋಷಿಸಿದ್ದಾರೆ.

ಮಾಜಿ ಸಂಸದ ಮತ್ತು ಅಖಿಲ ಭಾರತ ಕಿಸಾನ್ ಸಮನ್ವಯ ಸಮಿತಿಯ ಅಧ್ಯಕ್ಷರರಾಗಿದ್ದ ಅವರು ಸುಪ್ರೀಂ ಕೋರ್ಟ್ ನೇಮಿಸಿದ ಕೃಷಿ ಕಾನೂನು ಸಮಿತಿಯ ನಾಲ್ವರು ಸದಸ್ಯರಲ್ಲಿ ಒಬ್ಬರಾಗಿದ್ದರು. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, “ನಾನೊಬ್ಬ ರೈತ ಮತ್ತು ರೈತ ಮುಖಂಡನಾಗಿ ರೈತರಲ್ಲಿರುವ ಭಾವನೆಗಳು ಮತ್ತು ಆತಂಕದ ದೃಷ್ಟಿಯಿಂದ ನಾನು ಸಮಿತಿಯಿಂದ ಹೊರಗುಳಿಯುತ್ತಿದ್ದೇನೆ ಮತ್ತು ರೈತರ ಹಿತಾಸಕ್ತಿಗಳಿಗೆ ಧಕ್ಕೆಯುಂಟುಮಾಡುವುದಿಲ್ಲ” ಎಂದು ತಿಳಿಸಿದ್ದಾರೆ.

ಸಮಿತಿಗೆ ನಾಮನಿರ್ದೇಶನ ಮಾಡಿದ್ದಕ್ಕಾಗಿ ಸುಪ್ರೀಂ ಕೋರ್ಟ್‌ಗೆ ಧನ್ಯವಾದ ತಿಳಿಸಿರುವ ಅವರು, ಪಂಜಾಬ್ ಮತ್ತು ದೇಶದ ರೈತರ ಹಿತಾಸಕ್ತಿಗಳಲ್ಲಿ ರಾಜಿ ಮಾಡಿಕೊಳ್ಳಲು ಬಯಸುವುದಿಲ್ಲ. ಹಾಗಾಗಿ ನಾನು ಯಾವಾಗಲೂ ರೈತರು ಮತ್ತು ಪಂಜಾಬ್ ಪರ ನಿಲ್ಲುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

2020ರ ಡಿಸೆಂಬರ್‍ 14 ರಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿ, ವಿರೋಧಗಳಿಗೆ ತಲೆಬಾಗಬೇಡಿ, ಕಾನೂನುಗಳನ್ನು ಜಾರಿಗೆ ತನ್ನಿ‌ ಎಂದು ಭೂಪಿಂದರ್‍ ಸಿಂಗ್ ಮನ್ ಮನವಿ ಪತ್ರ ನೀಡಿದ್ದರು. ಆ ಮೂಲಕ ಅವರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಬೆಂಬಲಿಸಿದ್ದರು. ಹಾಗಾಗಿ ಸಮಿತಿಯಲ್ಲಿ ಇವರನ್ನು ನೇಮಿಸಿದ್ದಕ್ಕೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಸಮಿತಿಯಲ್ಲಿ ಭೂಪಿಂದರ್ ಸಿಂಗ್ ಮಾನ್ ಜೊತೆಗೆ ಡಾ. ಪ್ರಮೋದ್ ಕುಮಾರ್ ಜೋಷಿ, ಅಶೋಕ್‌ ಗುಲಾಟಿ, ಮತ್ತು ಅನಿಲ್ ಘನ್ವತ್ ಇದ್ದು ಇವರೆಲ್ಲರೂ ಈಗಾಗಲೇ ಒಂದಲ್ಲ ಒಂದು ರೀತಿಯಲ್ಲಿ ಕಾಯ್ದೆಯ ಪರವಾಗಿರುವವರು ಎಂದು ಆರೋಪಿಸಲಾಗಿದೆ. ಇದಕ್ಕೆ ಆಧಾರವೆಂಬುವಂತೆ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡಿರುವ ಇವರ ಹೇಳಿಕೆಗಳು, ಲೇಖನಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಸುಪ್ರೀಂ ನೇಮಿಸಿದ ಸಮಿತಿಯಲ್ಲಿನ ಸದಸ್ಯರೆಲ್ಲರೂ ಕೃಷಿ ಕಾಯ್ದೆ ಸಮರ್ಥಕರು!: ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...