Homeಮುಖಪುಟಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ...

ಜನದ್ರೋಹಿ ಬಿಜೆಪಿ ಸರಕಾರವನ್ನು ಸೋಲಿಸಿ, ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು: ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಆಗ್ರಹ

- Advertisement -
- Advertisement -

ಪ್ರಜಾಪ್ರಭುತ್ವ ಹಾಗೂ ಗಣತಂತ್ರದ ಕೊಲೆ ಮಾಡಲು ಹವಣಿಸುತ್ತಿರುವ ಜನದ್ರೋಹಿ ಸರಕಾರವನ್ನು ಸೋಲಿಸಿ, ಜನಪರವಾದ ಪ್ರಗತಿಪರ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು, ಬಸವಣ್ಣನವರು ಹಾಗೂ ಸರ್ವಸಮತೆಯ ಬಂಧುತ್ವದ ಸ್ವಾಭಿಮಾನಿ ದೇಶವನ್ನು ಕಟ್ಟುವ ಅಭಿಲಾಷೆ ಹೊಂದಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ದೇಶವನ್ನು ನಿರ್ಮಿಸಲು ಜನದ್ರೋಹಿ ಬಿಜೆಪಿಯನ್ನು ಸೋಲಿಸಲು ಎಲ್ಲರೂ ಒಂದಾಗಬೇಕು ಎಂದು ಸಂವಿಧಾನ ಪರ ಸಂಘಟನೆಗಳ ಒಕ್ಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

2014ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ, ಭಾರೀ ಕಾರ್ಪೊರೇಟ್ ಮತ್ತು ಹಣಬೆಂಬಲ
ಹಾಗೂ ಗುಲಾಮಿ ಸ್ವಭಾವದ ಮಾಧ್ಯಮಗಳ ಸಹಾಯದ ಮೂಲಕ ಮನಮೋಹನ್‌ ಸಿಂಗ್ ನೇತೃತ್ವದ ಮೇಲೆ ಸುಳ್ಳು ಆರೋಪ, ಅಪಪ್ರಚಾರ ಮಾಡಿ, ಸುಳ್ಳು ಆಶ್ವಾಸನೆ ನೀಡಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಮೋದಿ ಸರ್ಕಾರ, ಇಡೀ ಭಾರತ ದೇಶವನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸಿದೆ. ಹಿಂದೆ ಅವರ ಕೈಗೆ ಅಧಿಕಾರ ಕೊಟ್ಟಿದ್ದ ಜನ ಈಗ ಪಶ್ಚಾತಾಪ ಪಡುವಂತಾಗಿದೆ. ಮೋದಿಯ ಕ್ರೂರ, ಭ್ರಷ್ಟ, ಫ್ಯಾಶಿಸ್ಟ್‌ ಸರಕಾರ ಸೋಲಬೇಕೆಂದು ದೇಶದ ಜನರು ಬಯಸುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ದೇಶದ ಸಮಸ್ತ ರೈತರು, ದಲಿತ, ದಮನಿತರು, ಮಧ್ಯಮ ವರ್ಗದವರು, ರಾಷ್ಟ್ರದ ಸಣ್ಣ ಉದ್ದಿಮೆದಾರರು ಮತ್ತು ವ್ಯಾಪಾರಿಗಳು, ಮಹಿಳೆಯರು, ವಿದ್ಯಾರ್ಥಿಗಳು, ಕೃಷಿಕರು, ಜನಸಾಮಾನ್ಯರು ಮೋದಿ ಸೋಲಬೇಕೆಂದು ಬಯಸುತ್ತಿದ್ದಾರೆ.

ಬಿಜೆಪಿ ಒಂದು ಸ್ವತಂತ್ರವಾದ ರಾಜಕೀಯ ಪಕ್ಷವಲ್ಲ. ಅದು ನಿಜವಾಗಿ ಫ್ಯಾಶಿಸ್ಟ್ ಧೋರಣೆಯ
ಆರ್.ಎಸ್.ಎಸ್.ನ ರಾಜಕೀಯ ಶಾಖೆಯಾಗಿದೆ. ಹಾಗಾಗಿ ಅದು, ಸಂಘೀ ಗ್ಯಾಂಗಿನ ವೈದಿಕಶಾಹಿ
ನಿರ್ದೇಶನದಲ್ಲಿಯೇ ನಡೆಯುವ ಕೊಳಕು ಚಿಂತನೆಯ ಕೋಮುವಾದಿ ಪಕ್ಷವಾಗಿದೆ. ಜನರಲ್ಲಿ ಪರಸ್ಪರ
ದ್ವೇಷಭಾವನೆ ಹುಟ್ಟಿಸುವ ವಿಚ್ಛಿದ್ರಕಾರಿ ಒಡಕಿನ ಕುತಂತ್ರವೇ ಅದರ ಜೀವಾಳವಾಗಿದೆ. ನೋಟ್‍ ಬ್ಯಾನ್‌ ಮೂಲಕ ದೇಶದ ಕೋಟ್ಯಾಂತರ ಜನರ ಬದುಕನ್ನು ಬಿಜೆಪಿ ಮೂರಾಬಟ್ಟೆ ಮಾಡಿದ್ದು, ಜಿಎಸ್‌ಟಿ ಮೂಲಕ
ಸಮಸ್ತ ಬಡಜನರನ್ನು ದರೋಡೆ ಮಾಡಿದೆ. ದೇಶದ ಅನ್ನದಾತರಾದ ರೈತರನ್ನು ಕಂಗಾಲಾಗಿಸಿ, ಭಿಕಾರಿಗಳನ್ನಾಗಿ ಮಾಡಿ, ಬಂಡವಾಳಶಾಹಿಗಳ ಸುಲಿಗೆ ತೆಕ್ಕೆಗೆ ನೂಕುವ ಉದ್ದೇಶದಿಂದ ರೈತ ವಿರೋಧಿ ಕಾನೂನು ಜಾರಿಗೆ ತಂದಿದೆ.

ಒಂದೆಡೆ ಭೇಟಿ ಬಚಾವೋ, ಭೇಟಿ ಪಡಾವೋ ಎಂದು ಘೋಷಿಸುತ್ತಲೇ ಮಣಿಪುರದಲ್ಲಿ ಮಹಿಳೆಯರನ್ನು
ಅಮಾನಿಸಿದಾಗ, ದೇಶಕ್ಕೆ ಕೀರ್ತಿ ತಂದ ಒಲಿಂಪಿಕ್ಸ್ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ
ನಡೆದಾಗ, ಬಿಲ್ಕೀಸ್ ಬಾನು ಪ್ರಕರಣದ ಅಪರಾಧಿಗಳನ್ನು ಶಿಕ್ಷೆಯ ಅರ್ಧಾವಧಿಯಲ್ಲಿಯೇ ಬಿಡುಗಡೆ
ಮಾಡಿದ್ದಾಗ ಬಿಜೆಪಿ ಬಾಯಿ ಮುಚ್ಚಿಕೊಂಡಿದೆ. ಬಿಜೆಪಿ ಭ್ರಷ್ಟಾಚಾರವನ್ನು ಕೊನೆಗೊಳಿಸುತ್ತದೆ ಎಂದು ಹೇಳುತ್ತಾ ಬಂದಿತ್ತು, ಇದೀಗ ಭ್ರಷ್ಟರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡಿದೆ. ಯುವಕರಿಗೆ 2 ಕೋಟಿ ಉದ್ಯೋಗ ಕೊಡುತ್ತೇವೆಂದು ಸುಳ್ಳು ಹೇಳಿ ಅಧಿಕಾರಕ್ಕೆ ಬಂದು ಪಕೋಡ ಮಾರಿ ಎಂದು ಅವಮಾನಿಸಿದ್ದಾರೆ, ಉದ್ಯೋಗವನ್ನು ಬಿಜೆಪಿ ನಾಶಪಡಿಸಿದೆ. ಬೆಲಯೇರಿಕೆಯಿಂದ ದೇಶದ ಜನರ ಬದುಕನ್ನ ಬರ್ಬರವನ್ನಾಗಿಸಿದೆ. ಕೋಮುವಾದವನ್ನು ಬಿತ್ತುತ್ತ ಅಲ್ಪಸಂಖ್ಯಾತರು, ದಲಿತರ ಬದುಕನ್ನು ನರಕವನ್ನಾಗಿಸಿದೆ.

ವಿದ್ಯಾರ್ಥಿಗಳ ಸ್ಕಾಲರ್‌ ಶಿಪ್‌ ನಿಲ್ಲಿಸಿ ಶಿಕ್ಷಣಕ್ಕೆ ಅಡ್ಡಿಪಡಿಸಿದೆ. ಇಡಿ, ಸಿಬಿಐ ಸೇರಿದಂತೆ ಸರಕಾರಿ ಸಂಸ್ಥೆಗಳನ್ನು ಬಳಸಿಕೊಂಡು ರಾಜಕೀಯ ವಿರೋಧಿಗಳನ್ನು ಜೈಲಿಗೆ ತಳ್ಳಿದೆ. ಚುನಾವಣಾ ಬಾಂಡ್‌ ಇಡೀ ದೇಶವನ್ನು ಕೊಳ್ಳೆ ಹೊಡೆದ ಕೋಟ್ಯಾಂತರ ಹಣವನ್ನು ಕಳ್ಳ ಮಾರ್ಗದ ಮೂಲಕ  ಸಂಗ್ರಹಿಸಿದೆ. ಕಾರ್ಪೋರೇಟರ್ಗಳ ಸಾಲವನ್ನು ಬಿಜೆಪಿ ಸರಕಾರ ಮನ್ನಾ ಮಾಡಿದ್ದು, ಬಡ, ರೈತರ ವಿದ್ಯಾರ್ಥಿಗಳಿಂದ ಬಲವಂತವಾಗಿ ಸಾಲ ವಸೂಲಾತಿಯನ್ನು ಮಾಡುತ್ತಿದೆ, ಆದ್ದರಿಂದ ಎಲ್ಲರೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತ ಚಲಾಯಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನು ಓದಿ: ಅದಾನಿ ಮಾಲಿಕತ್ವದ ಬಂದರಿನ ವಿರುದ್ಧ ಪ್ರತಿಭಟಿಸಿದ ಚರ್ಚ್‌ನ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ ಮೋದಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...