Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...