Homeಕರ್ನಾಟಕಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಮತ್ತು ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ನಿಜಲಿಂಗಪ್ಪನವರು  ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಪಕ್ಷ ರಚಿಸಿದ್ದರು. ಅವರು ಭ್ರಷ್ಟಾಚಾರವನ್ನು ವಿರೋಧಿಸುತ್ತಿದ್ದರು ಎಂದು ತಿಳಿಸಿದರು. 

ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕ

ಈ ವೇಳೆ ಕರ್ನಾಟಕದ ಏಕೀಕರಣಕ್ಕೂ  ಎಸ್. ನಿಜಲಿಂಗಪ್ಪ ದುಡಿದಿದ್ದಾರೆ ಅಂಥಹ ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ ಎಂದರು. 

ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಗ್ಯಾರಂಟಿಗಳ ಬಗ್ಗೆ ಸಿ.ಎಲ್.ಪಿ ಯಲ್ಲಿ ಚರ್ಚೆಯೇ ಆಗಲಿಲ್ಲ ಎಂದರು.

ಇನ್ನು ಧರ್ಮಸ್ಥಳ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್.ಐ.ಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಚಾರ್ಚ್ ಶೀಟ್ ಅನ್ನು ನಾನಿನ್ನೂ ನೋಡಿಲ್ಲ ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...