Homeಮುಖಪುಟ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್

- Advertisement -
- Advertisement -

ಇಂದು ಗುಂಪು ಹತ್ಯೆ, ಆಹಾರದ ಹಕ್ಕಿನ ಮೇಲೆ ದಾಳಿ, ಮತಾಂಧತೆ, ದೇಶದ್ರೋಹ ಕಾನೂನಿನ ದುರ್ಬಳಕೆಯಾಗುತ್ತಿದೆ. ಹಾಗಾಗಿ ನಾನು ‘ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ’ ಪಡೆಯುವುದಿಲ್ಲವೆಂದು ಹಿರಿಯ ರಂಗಕರ್ಮಿ ಎಸ್. ರಘುನಂದನ್ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಅವರು ಇದು ಪ್ರತಿಭಟನೆಯಲ್ಲ ದೇಶದ ಇಂದಿನ ಪರಿಸ್ಥಿತಿಗೆ ನಾವು ಅನುಭವಿಸುತ್ತಿರುವ ವ್ಯಥೆಯಾಗಿದೆ ಎಂದು ಹೇಳಿರುವ ಅವರ ಪತ್ರ ಇಲ್ಲಿದೆ.

ನಾನು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸ್ವೀಕರಿಸುವುದಿಲ್ಲ, ಏಕೆಂದರೆ?

“ಸಂಗೀತ ನಾಟಕ ಅಕಾಡೆಮಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು ತಾನು ಶುರುವಾದಂದಿನಿಂದಲೂ ತನ್ನ ಸ್ವಾಯತ್ತತೆಯನ್ನು ಬಹಳಮಟ್ಟಿಗೆ ಕಾಪಾಡಿಕೊಂಡು ಬಂದಿದೆ. ಅಂಥ ಅಕಾಡೆಮಿಯು 2018ರ ಇಸವಿಯ ತನ್ನ ಪ್ರಶಸ್ತಿಯನ್ನು, ಬೇರೆ ಹಲವರಿಗೆ ನೀಡುವುದರೊಂದಿಗೆ, ನನಗೂ ನೀಡಿದ್ದಕ್ಕಾಗಿ ಅಕಾಡೆಮಿಗೆ ಕೃತಜ್ಞನಾಗಿದ್ದೇನೆ.

ಆದರೆ, ಈವತ್ತು ದೇಶದ ಹಲವು ಕಡೆ, ಮತ ಧರ್ಮದ ಹೆಸರಿನಲ್ಲಿ, ಪೊರೆಯುವ ದೇವರ ಹೆಸರಿನಲ್ಲಿ, ತಿನ್ನುವ ಆಹಾರದ ಹೆಸರಿನಲ್ಲಿ ಗುಂಪುಹಲ್ಲೆಗಳು, ಕಗ್ಗೊಲೆಗಳು ನಡೆಯುತ್ತಿವೆ. ಅಧಿಕಾರದಲ್ಲಿರುವವರು ಇಂಥ ಭೀಕರ ಹಿಂಸಾಚಾರ ಮತ್ತು ಕಗ್ಗೊಲೆಗಳಿಗೆ ಕಾರಣವಾದ ದ್ವೇಷವನ್ನು ಅಂತರಜಾಲ ತಂತ್ರಜ್ಞಾನದ ಎಲ್ಲ ಪಟ್ಟುಗಳನ್ನು ಬಳಸಿ ಜನರ ಮನಸ್ಸಿನಲ್ಲಿ ತುಂಬುತ್ತಿದ್ದಾರೆ. ಶಿಕ್ಷಣದ ಅತ್ಯುನ್ನತ ಸಂಸ್ಥೆಗಳಿಂದ ಮೊದಲುಗೊಂಡು ಕೆಳಮಟ್ಟದ ಶಾಲಾ ಕಾಲೇಜುಗಳವರೆಗೆ, ಎಲ್ಲೆಡೆಯೂ, ಮತಾಂಧತೆಯಿಂದ ಕೂಡಿದ ಪಾಠಗಳನ್ನು, ವಿಚಾರಗಳನ್ನು ವಿದ್ಯಾರ್ಥಿಗಳ ತಲೆಗಳಲ್ಲಿ ತುಂಬುವ ಪ್ರಯತ್ನಗಳು ನಡೆಯುತ್ತಿದೆ. ಭಾರತೀಯತೆಯ, ವಸುಧೈವ ಕುಟುಂಬಮ್ ಅನ್ನುವುದರ ಅರ್ಥವನ್ನೇ ತಿರುಚಲಾಗುತ್ತಿದೆ. ಆದರೆ, ಸಂಕರವೇ ಶಿವವಲ್ಲವೇ?  ‘ಅಯ್ಯೋ, ನನ್ನ ದೇಶವೇ’ ಎಂದು ನನ್ನಂಥ ಕೋಟ್ಯಂತರ ಜನರು ಹಲುಬುವಂತಾಗಿದೆ.

ಭಾರತ ಮತ್ತು ವಿಶಾಲ ಜಗತ್ತುಗಳ ಭವಿಷ್ಯವನ್ನು ರೂಪಿಸಬೇಕಾಗಿರುವ ಕನ್ಹಯ್ಯಾಕುಮಾರ್ ಅಂಥ ಯುವಕರು ಹಲವರ ಮೇಲೆ, ಅವರು ವಿಶ್ವವಿದ್ಯಾಲಯಗಳಲ್ಲಿ ಓದುತ್ತಿದ್ದಾಗಲೇ, ದೇಶದ್ರೋಹದ ಆರೋಪವನ್ನು  ಹೊರಿಸಲಾಗಿದ್ದು, ಅವರು ನ್ಯಾಯಾಲಯಗಳಲ್ಲಿ ಆ ಪ್ರಕರಣವನ್ನು ಇನ್ನೂ ಎದುರಿಸುತ್ತಲೇ ಇದ್ದಾರೆ. ದೇಶದ ಅತ್ಯಂತ ಶೋಷಿತರು ಮತ್ತು ದಲಿತ ಜನರ ಪರವಾಗಿ ಕೋರ್ಟು-ಕಚೇರಿಗಳಲ್ಲಿ ವಾದಿಸುತ್ತ, ಅವರ ಅಪಾರ ಕಷ್ಟಗಳನ್ನು ಕುರಿತು ಲೇಖನ ಮತ್ತು ಪುಸ್ತಕಗಳನ್ನು ಬರೆಯುತ್ತ, ಅವರ ಹೋರಾಟವು ಅಹಿಂಸಾ ಮಾರ್ಗದಲ್ಲಿ ನಡೆಯುವಂತೆ ಸಲಹೆ-ಸಹಕಾರ ನೀಡುತ್ತ, ಭಾರತದ ಸಂವಿಧಾನದ ಎಲ್ಲ ವಿಧಿವಿಧಾನಗಳನ್ನು ಪಾಲಿಸುತ್ತ, ಆ ನಮ್ಮ ಸಂವಿಧಾನದ ಜೀವಾಳವನ್ನು ಎತ್ತಿಹಿಡಿಯುತ್ತ, ನಿಸ್ಪೃಹೆಯಿಂದ, ತಮ್ಮತಮ್ಮದೇ ರೀತಿಯಲ್ಲಿ ಹೋರಾಡುತ್ತ ಬಂದಿರುವ ಹಲವರ ವಿರುದ್ಧ ಯುಎಪಿಎ ಕಾಯಿದೆಯಡಿ ವಿಚಾರಣೆ ನಡೆಯುತ್ತಿದ್ದು, ಅವರಲ್ಲಿ ಹೆಚ್ಚಿನವರು  ಜಾಮೀನು ಕೂಡ ಸಿಕ್ಕದೆ ಸೆರೆಮನೆಯಲ್ಲಿದ್ದಾರೆ. ದೇಶದ ಅತ್ಯಂತ ದಮನಿತರ ದನಿಯಾಗಿರುವವರು ಈ ಧೀಮಂತರು, ಧೀಮಂತೆಯರು. ಇಂಥವರನ್ನು ನಿರ್ವೀರ್ಯಗೊಳಿಸಿ, ಇವರ ಬಾಯಿಮುಚ್ಚಿಸಿದರೆ ಆ ದಮನಿತರ ದನಿಯನ್ನು ಅಷ್ಟರಮಟ್ಟಿಗೆ ಅಡಗಿಸಬಹುದು ಎಂದು ಪ್ರಭುತ್ವವು ನಿರ್ಧರಿಸಿದಂತಿದೆ. ಇದೆಲ್ಲ ಹೊಸದಲ್ಲ; ಈಹಿಂದೆ ಅಧಿಕಾರದಲ್ಲಿದ್ದವರು ಕೂಡ ಹೀಗೆಯೇ ಪ್ರಭುತ್ವದ ಶಕ್ತಿಯ ದುರ್ವಿನಿಯೋಗ ಮಾಡಿದ್ದಾರೆ.

ನಿಜವಾದ ದೇಶಪ್ರೇಮಿಗಳು, ಲೋಕೋಪಕಾರಿಗಳು, ಧರ್ಮ ಮಾರ್ಗಿಗಳು ಆಗಿರುವ, ಮತ್ತು ಸಕಲ ಚರಾಚರಕ್ಕೆ ಲೇಸನ್ನೇ ಬಯಸುತ್ತ, ಲೇಸನ್ನೇ ಉಂಟುಮಾಡಲು ಬದುಕುತ್ತಿರುವ ಇಂಥವರಿಗೆ ನನ್ನ ದೇಶದಲ್ಲಿ ಹೀಗೆ ಅನ್ಯಾಯವಾಗುತ್ತಿರುವಾಗ, ರಂಗಭೂಮಿಯ ಕಲಾವಿದನಾಗಿ, ಕವಿ-ನಾಟಕಕಾರನಾಗಿ, ಈ ದೇಶ ಮತ್ತು ಲೋಕದ ಪ್ರಜೆಯಾಗಿ ನಾನು ಈ ಪ್ರಶಸ್ತಿಯನ್ನು ಸ್ವೀಕರಿಸಲಾರೆ. ಇದನ್ನು ಸ್ವೀಕರಿಸಲು ನನ್ನ ಆತ್ಮಸಾಕ್ಷಿ, ಅಂತರ್ಯಾಮಿ ಒಪ್ಪದು.

ಇದು ಪ್ರತಿಭಟನೆಯಲ್ಲ; ವ್ಯಥೆ; ಪ್ರಶಸ್ತಿಯನ್ನು ಸ್ವೀಕರಿಸಲು ಬಿಡದಿರುವ ಅಸಹಾಯಕತೆ. ಅಕಾಡೆಮಿಯ ಬಗ್ಗೆ ನನಗೆ ಗೌರವವಿದೆ; ಮತ್ತು, ಈಗ ಮತ್ತು ಈಹಿಂದೆ ಇಂಥ ಪ್ರಶಸ್ತಿ ಪಡೆದ ನನ್ನೆಲ್ಲ ಸಹೋದ್ಯೋಗಿಗಳ ಬಗ್ಗೆ ಗೌರವವಿದೆ. ಅಕಾಡೆಮಿಯ ಸದಸ್ಯರಿಗೆ,  ಮತ್ತೊಮ್ಮೆ, ಕೃತಜ್ಞತೆಗಳು. ಅವರ ಕ್ಷಮೆ ಬೇಡುತ್ತಿದ್ದೇನೆ.”

ಶಿವಕಾರುಣ್ಯವಿರಲಿ.

ಎಸ್. ರಘುನಂದನ

17 ಜುಲೈ 2019

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...