Homeಮುಖಪುಟಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

ಶಬರಿಮಲೆ ಭ್ರಷ್ಟಾಚಾರ ಪ್ರಕರಣ: ಸ್ವಯಂ ದೂರು ದಾಖಲಿಸಿದ ಕೇರಳ ಹೈಕೋರ್ಟ್

- Advertisement -
- Advertisement -

ಕೇರಳದ ತಿರುವಾಂಕೂರು ದೇವಸ್ಥಾನ ಮಂಡಳಿ ನಕಲಿ ರಶೀದಿ ಸಲ್ಲಿಸುವ ಮೂಲಕ ದೊಡ್ಡ ಪ್ರಮಾಣದ ಭ್ರಷ್ಟಾಚಾರವಾಗಿರುವುದರಿಂದ ದೇವಸ್ಥಾನದ ವಿಚಕ್ಷಣಾ ದಳ ರದ್ದುಪಡಿಸಿರುವ ಕುರಿತು ಮಾಧ್ಯಮ ವರದಿಯನ್ನು ಆಧರಿಸಿ ಮಂಗಳವಾರ ಕೇರಳ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ದೇವಸ್ಥಾನ ಮಂಡಳಿ ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಹಿರಿಯ ಅಧಿಕಾರಿಗಳು ದೇವಸ್ಥಾನದ ವಿಚಕ್ಷಣಾ ದಳವನ್ನು ರದ್ದುಪಡಿಸಿದ್ದಾರೆ. ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಲೆಯಾಳಂನ ದೈನಿಕ ಮಾತೃಭೂಮಿ ಮಾಡಿದ ವರದಿಯನ್ನು ನ್ಯಾಯಮೂರ್ತಿಗಳಾದ ಅನಿಲ್ ಕೆ ನರೇಂದ್ರನ್ ಮತ್ತು ಪಿಜಿ ಅಜಿತ್‌ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗಂಭೀರವಾಗಿ ಪರಿಗಣಿಸಿದೆ.

ಶಬರಿಮಲೆಯ ಅತಿಥಿ ಗೃಹಕ್ಕೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ನಕಲಿ ರಶೀದಿಗಳು ಮತ್ತು ಶೌಚಗೃಹ ನಿರ್ಮಿಸುವ ವಿಚಾರದಲ್ಲಿ ಎಸಗಿರುವ ಅಕ್ರಮಗಳು ಬೆಳಕಿಗೆ ಬಂದರೆ ಸಮಸ್ಯೆಯಾಗುತ್ತದೆ, ಬಂಧನಕ್ಕೆ ಒಳಗಾಗಬೇಕಾಗುತ್ತದೆ ಎಂದು ವಿಚಕ್ಷಣಾ ದಳ ರದ್ದುಪಡಿಸಲಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ.

ದೇವಸ್ಥಾನದ ವಿಚಕ್ಷಣಾ ದಳದಿಂದ ಇಬ್ಬರು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ತೆಗೆದುಹಾಕಲಾಯಿತು. ಶೀಘ್ರದಲ್ಲೇ ನಿವೃತ್ತರಾಗಲಿರುವ ಪೊಲೀಸ್ ವರಿಷ್ಠಾಧಿಕಾರಿಯನ್ನಷ್ಟೇ ಉಳಿಸಿಕೊಂಡು ಉಳಿದವರನ್ನು ಪೊಲೀಸ್ ಇಲಾಖೆಗೆ ಕಳುಹಿಸಲಾಗಿದೆ. ಅತಿಥಿಗೃಹದಲ್ಲಿ ನೆಲೆಸಿದ್ದ ಗಣ್ಯರು ಮತ್ತು ಉನ್ನತಮಟ್ಟದ ಅಧಿಕಾರಿಗಳಿಗೆ ಪೂರೈಸಲಾದ ಆಹಾರಕ್ಕೆ ಸಂಬಂಧಿಸಿದಂತೆ ಅಪಾರ ಖರ್ಚು ಮಾಡಿರುವ ರಶೀದಿಗಳು ವಿಚಕ್ಷಣಾ ದಳಕ್ಕೆ ಸಿಕ್ಕ ಬಗ್ಗೆ ವರದಿಯಲ್ಲಿ ನೀಡಿದ ಮಾಹಿತಿಯನ್ನು ಪೀಠ ಗಣನೆಗೆ ತೆಗೆದುಕೊಂಡಿದೆ.

ವಿಜಿಲೆನ್ಸ್ ವಿಭಾಗದ ವರದಿಯ ಪ್ರಕಾರ, ತಿರುವಾಂಕೂರು ದೇವಸ್ವಂ ಮಂಡಳಿಯು ಈ ವಿಷಯವನ್ನು ರಾಜ್ಯ ವಿಜಿಲೆನ್ಸ್‌ಗೆ ರವಾನಿಸಿತು. ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ವಿರೋಧಿ ಬ್ಯೂರೋದಿಂದ ಅಪರಾಧವನ್ನು ಐಪಿಸಿ ಸೆಕ್ಷನ್ 420, 468 ಮತ್ತು 471 ಮತ್ತು ಸೆಕ್ಷನ್ 13(2) ಅಡಿ ದಾಖಲಿಸಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 13(1) (ಎ) ನಡಿ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ವಿಜಿಲೆನ್ಸ್ ವಿಭಾಗವು ಹಲವು ಅವ್ಯವಹಾರಗಳ ನಿದರ್ಶನಗಳನ್ನು ಪತ್ತೆಹಚ್ಚಿದೆ ಎಂದು ನ್ಯಾಯಾಲಯ ಗಮನಿಸಿದೆ.

ಪ್ರಸ್ತುತ, ಮಂಡಳಿಯ ವಿಚಕ್ಷಣ ದಳದ ಮುಖ್ಯ ವಿಚಕ್ಷಣ ದಳ ಅಧಿಕಾರಿ ಮತ್ತು ಸಬ್ ಇನ್ಸ್‌ಪೆಕ್ಟರ್ ಕೇಡರ್‌ನಲ್ಲಿ ಒಬ್ಬ ಅಧಿಕಾರಿಯನ್ನು ಒಳಗೊಂಡಿದೆ ಎಂದು ತಿರುವಾಂಕೂರು ದೇವಸ್ವಂ ಮಂಡಳಿಯ ಸ್ಥಾಯಿ ವಕೀಲರು ಸೂಚಿಸಿದ್ದಾರೆ. ಶಬರಿಮಲೆಯ ವಿಶೇಷ ಆಯುಕ್ತರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಸೂಚನೆಗಳನ್ನು ಪಡೆಯುವಂತೆ ನ್ಯಾಯಾಲಯ ಸೂಚಿಸಿದೆ.

ದೇವಸ್ಥಾನ ವಿಚಕ್ಷಣಾ ತನಿಖೆಯಿಂದ ಹಿರಿಯ ಅಧಿಕಾರಿಗಳಿಗೆ ಎದುರಾಗಬಹುದಾದ ಸಂಕಷ್ಟದಿಂದ ಅಳುಕುಗೊಂಡು ರಾಜ್ಯ ವಿಚಕ್ಷಣಾ ದಳಕ್ಕೆ ಪ್ರಕರಣವನ್ನು ವಹಿಸಲಾಗಿದೆ ಎಂಬುದನ್ನು ಪೀಠವು ಗಂಭೀರವಾಗಿ ಪರಿಗಣಿಸಿದೆ. ಫೆಬ್ರವರಿ 3ಕ್ಕೆ ವಿಚಾರಣೆ ಮುಂದೂಡಲಾಗಿದೆ.


ಇದನ್ನೂ ಓದಿರಿ: ಅಕ್ರಮ ಆಸ್ತಿ ಗಳಿಕೆ ಆರೋಪ: ಕಾನೂನು ಸಮರಕ್ಕೆ ಮುಂದಾದ ರವಿ ಚನ್ನಣ್ಣನವರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...