Homeಮುಖಪುಟರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!

ರಾಹುಲ್ ಭೇಟಿಯಾದ ಸಚಿನ್ ಪೈಲಟ್: ರಾಜಸ್ಥಾನದಲ್ಲಿ ಗರಿಗೆದರಿದ ರಾಜಕೀಯ!

ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಗ ಗಾಂಧಿ ಸಚಿನ್ ಪೈಲಟ್‌ರನ್ನು ಭೇಟಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರರಾದ ಅಹ್ಮದ್ ಪಟೇಲ್ ಮತ್ತು ಕೆ.ಸಿ ವೇಣುಗೋಪಾಲ್ ಖಚಿತಪಡಿಸಿದ್ದಾರೆ.

- Advertisement -
- Advertisement -

ಕಳೆದೊಂದು ತಿಂಗಳಿನಿಂದ ರಾಜಕೀಯ ಅಸ್ಥಿರತೆ ಉಂಟಾಗಿದ್ದ ರಾಜಸ್ಥಾನದಲ್ಲಿ ವಿಧಾನಸಭೆ ಅಧಿವೇಶನಕ್ಕೆ ಕೇವಲ 4 ದಿನಗಳು ಬಾಕಿ ಉಳಿದಿರುವಂತೆ ಮತ್ತು ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್‌ನಿಂದ ಬಂಡಾಯವೆದ್ದು ಸರ್ಕಾರವನ್ನು ಪತನದ ಅಂಚಿಗೆ ತಳ್ಳಿದ್ದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯನ್ನು ಭೇಟಿಯಾಗಿರುವುದು ಸಂಚಲನ ಮೂಡಿಸಿದೆ.

ರಾಹುಲ್ ಗಾಂಧಿಯನ್ನು ಭೇಟಿಯಾಗಬೇಕೆಂದು ಆಗ್ರಹಿಸಿದ್ದ ಸಚಿನ್ ಪೈಲಟ್ ಇಬ್ಬರು ಹಿರಿಯ ಕಾಂಗ್ರೆಸ್ ಮುಖಂಡರ ಬಳಿ ಬೇಡಿಕೆಯಿಟ್ಟಿದ್ದರು. ಇಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಗ ಗಾಂಧಿ ಸಚಿನ್ ಪೈಲಟ್‌ರನ್ನು ಭೇಟಿಯಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರರಾದ ಅಹ್ಮದ್ ಪಟೇಲ್ ಮತ್ತು ಕೆ.ಸಿ ವೇಣುಗೋಪಾಲ್ ಖಚಿತಪಡಿಸಿದ್ದಾರೆ.

ಸಭೆಯಲ್ಲಿ ಏನು ಚರ್ಚೆಯಾಗಿದೆ ಎಂಬುದು ತಿಳಿದುಬಂದಿಲ್ಲ, ಆದರೆ ಕಾಂಗ್ರೆಸ್ ಪಾಲಿಗೆ ಸಕರಾತ್ಮಕ ಅಂಶಗಳು ಹೊರಬೀಳಲಿವೆ ಎಂದು ಹಿರಿಯ ಮುಖಂಡರು ತಿಳಿಸಿದ್ದಾರೆ.

ಇದೇ 14 ರಿಂದ ರಾಜಸ್ಥಾನ ವಿಧಾನಸಭಾ ಅಧಿವೇಶನ ನಡೆಯಲಿದ್ದು, ಕಾಂಗ್ರೆಸ್ ತಾನು ಬಹುಮತಕ್ಕೆ ಅಗತ್ಯವಿರುವಷ್ಟು ಸಂಖ್ಯೆಗಳನ್ನು ಹೊಂದಿದೆ ಎಂದು ಹೇಳಿಕೊಂಡಿದೆ. ಇನ್ನು ಬಿಜೆಪಿ ತನ್ನ ಶಾಸಕರನ್ನು ಗುಜರಾತ್‌ನ ರೆಸಾರ್ಟ್‌ಗೆ ಕಳಿಸಿದೆ. ಒಟ್ಟಾರೆಯಾಗಿ ಸಚಿನ್ ಪೈಲಟ್ ರಾಹುಲ್ ಗಾಂಧಿ ಜೊತೆ ಮಾತನಾಡಿರುವುದು ಕಾಂಗ್ರೆಸ್‌ಗೆ ಮತ್ತಷ್ಟು ಸಮಾಧಾನ ತಂದಿದೆ ಎಂದು ಹೇಳಲಾಗುತ್ತಿದೆ.

ಆದರೆ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಹಲವು ಶಾಸಕರು ಪಕ್ಷಕ್ಕೆ ದ್ರೋಹವೆಸಗಿದ ಬಂಡಾಯವೆದ್ದವರನ್ನು ಮರಳಿ ಪಕ್ಷಕ್ಕೆ ಕರೆತರಬಾರದು ಎಂದು ಆಗ್ರಹಿಸಿದ್ದಾರೆ. ಅದೇ ಸಮಯದಲ್ಲಿ ಗೆಹ್ಲೋಟ್‌ ಮೇಲೆ ಕ್ರಮ ಆಗದ ಹೊರತು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಪೈಲಟ್ ಬಣ ಹೇಳಿಕೊಂಡಿದೆ.


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...