ಹತ್ತು ದಿನಗಳ ಒಳಗೆ ಎರಡು ಭಾರಿ ಕಾಂಗ್ರೆಸ್ ವರಿಷ್ಠರನ್ನು ರಾಜಸ್ತಾನದ ಯುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಭೇಟಿಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
ಪಂಜಾಬ್‌ನಲ್ಲಿ ಅಮರಿಂದರ್ ಸಿಂಗ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ, ದಲಿತ ವ್ಯಕ್ತಿ ಚರಣಜಿತ್‌ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಗಿತ್ತು. ಪಂಜಾಬ್‌ನಲ್ಲಿ 2022ರಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ ಮಹತ್ವ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ರಾಜಸ್ತಾನದ ನಾಯಕತ್ವ ಬದಲಾವಣೆಗೂ ಯತ್ನಿಸುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ.
ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯೂ ಆಗಿರುವ ಸಚಿನ್, ಈ ಹಿಂದೆಯೂ ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಕಾಂಗ್ರೆಸ್ ಜರುಗಿಸಿದ ಕ್ರಮಗಳಿಂದ ನಂತರ ತಣ್ಣಗಾಗಿದ್ದರು. ಪಂಜಾಬ್‌ನಲ್ಲಿ ನಾಯಕತ್ವ ಬದಲಾವಣೆಯ ಬೆನ್ನಲ್ಲೇ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿಯವರನ್ನು ಸಚಿನ್ ಭೇಟಿಯಾಗಿದ್ದಾರೆ. ಹತ್ತು ದಿನಗಳ ಒಳಗೆ ಎರಡು ಭಾರಿ ಭೇಟಿಯಾಗಿರುವುದು ರಾಜಕೀಯ ಚರ್ಚೆಗೆ ಅವಕಾಶ ನೀಡಿದೆ.
ಇದನ್ನೂ ಓದಿ: ಪಂಜಾಬ್‌ನಲ್ಲಿ ದಲಿತ ಮುಖ್ಯಮಂತ್ರಿ: ಕಾಂಗ್ರೆಸ್ ಉರುಳಿಸಿದ ರಾಜಕೀಯ ದಾಳ!


