Homeಮುಖಪುಟಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ಲವ್ ಜಿಹಾದ್ ಪದ ಬಳಕೆ: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ರಾಜೀನಾಮೆಗೆ ಒತ್ತಾಯ

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ

- Advertisement -
- Advertisement -

ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ(ಅ.20) ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ, ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಏರಿಕೆಯಾತ್ತಿವೆ ಎಂದು ಆರೋಪಿಸಿದ್ದರು.

ರಾಜ್ಯಪಾಲರೊಂದಿಗೆ ಲವ್ ಜಿಹಾದ್ ಪ್ರಕರಣಗಳ ಏರಿಕೆಯ ಬಗ್ಗೆ ಚರ್ಚಿಸಿದ ನಂತರ ರೇಖಾ ಶರ್ಮಾ ಟ್ವಿಟ್ಟರ್‌ನಲ್ಲಿ ಭಾರಿ ಟೀಕೆ ಮತ್ತು ಟ್ರೋಲ್‌ಗೆ ಒಳಗಾಗಿದ್ದಾರೆ. ರೇಖಾ ಶರ್ಮಾ ಅವರ ಹಳೆಯ ಟ್ವಿಟ್‌ಗಳನ್ನು ಮತ್ತೆ ಪೋಸ್ಟ್ ಮಾಡುತ್ತಾ ಹಲವು ಮಂದಿ ಆಕ್ರೋಶ ಹೊರಹಾಕಿದ್ದಾರೆ.

NCW ಟ್ವೀಟ್ ಮಾಡಿ, “ನಮ್ಮ ಅಧ್ಯಕ್ಷೆ ರೇಖಾ ಶರ್ಮಾ ಅವರು ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ರಾಜ್ಯದ ಮಹಿಳಾ ಸುರಕ್ಷತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು. ಕಾರ್ಯ ನಿರ್ವಹಿಸದೇ ಇರುವ ಒನ್ ಸ್ಟಾಪ್ ಕೇಂದ್ರಗಳು, ಕೊರೊನಾ ಆರೈಕೆ ಕೇಂದ್ರಗಳಲ್ಲಿ ಮಹಿಳಾ ರೋಗಿಗಳ ಮೇಲಿನ ದೌರ್ಜನ್ಯ ಮತ್ತು ಅತ್ಯಾಚಾರದ ಬಗ್ಗೆ ಚರ್ಚೆಸಿದ್ದಾರೆ. ಜೊತೆಗೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬಗ್ಗೆ ಮಾತನಾಡಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಇದರ ಆರ್ಕೈವ್ ಆವೃತ್ತಿ ಇಲ್ಲಿದೆ.

NCW ಮುಖ್ಯಸ್ಥೆಯ ಭೇಟಿ ಮತ್ತು ‘ಲವ್ ಜಿಹಾದ್’ ಪದದ ಉಲ್ಲೇಖ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಲವ್ ಜಿಹಾದ್ ಹಿಂದೂ ಮಹಿಳೆಯರನ್ನು ಇಸ್ಲಾಂಗೆ ಪರಿವರ್ತಿಸುವ ಉದ್ದೇಶದಿಂದ ಮುಸ್ಲಿಂ ಪುರುಷರು ಹಿಂದೂ ಮಹಿಳೆಯರನ್ನು ಮದುವೆಯಾಗುವಂತೆ ನಡೆಸುವ ಪಿತೂರಿ ಎಂದು ಬಲಪಂಥೀಯ ಗುಂಪುಗಳು ವಾದಿಸುತ್ತಿವೆ.

ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹೇಳಿದೆ.

ಇತ್ತಿಚಿಗಷ್ಟೇ ತನಿಷ್ಕ್ ಆಭರಣ ಜಾಹೀರಾತನ್ನು ಲವ್ ಜಿಹಾದ್‌ಗೆ ಹೋಲಿಸಿ ಅನೇಕ ಮಂದಿ ಕೆಟ್ಟ ಕಾಮೆಂಟ್‌ಗಳ ಮೂಲಕ ಟ್ರೋಲ್ ಮಾಡಿದ್ದರು. ಈಗ ಜಾಹೀರಾತನ್ನು ಹಿಂಪಡೆಯಲಾಗಿದೆ. ಇದರ ಬಗ್ಗೆಯೂ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗಾಗಿ ‘ಲವ್ ಜಿಹಾದ್’ ಪದವು ಈಗ ಮತ್ತೊಮ್ಮೆ ಚರ್ಚೆಯ ಕೇಂದ್ರವಾಗಿದೆ.

ರಾಜಕೀಯ ಮುಖಂಡರು ಮತ್ತು ಅವರ ಕುಟುಂಬಗಳ ವಿರುದ್ಧ ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ, ಮಹಿಳೆಯರ ವಿರುದ್ಧವೇ ಸೆಕ್ಸಿಸ್ಟ್ ಮತ್ತು ದ್ವೇಷಪೂರಿತ, ನಿಂದನಾತ್ಮಕ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

ಮಹಿಳಾ ಆಯೋಗದ ಅಧ್ಯಕ್ಷರ ಹಳೆಯ ಟ್ವೀಟ್‌ಗಳು ನಾಚಿಕೆ ತರಿಸುವಂತಹದು. ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಹಲವು ಟ್ವಿಟ್ಟರ್‌ ಬಳಕೆದಾರರು ಆಗ್ರಹಿಸಿದ್ದಾರೆ.

ಮತ್ತೊಬ್ಬ ಟ್ವಿಟ್ಟರ್‌ ಬಳಕೆದಾರರು, “ಈಕೆ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿದ್ದಾದರೂ ಹೇಗೆ?” ಎಂದು ಪ್ರಶ್ನಿಸಿ, ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಖಾ ಶರ್ಮಾ ತಮ್ಮ ಹಳೆಯ ಟ್ವೀಟ್‌ಗಳಲ್ಲಿ ಮಾಜಿ ಪ್ರಧಾನಿ ನೆಹರೂ, ಕಾಂಗ್ರೆಸ್ ಮುಖ್ಯಸ್ಥೆ ಪ್ರಿಯಾಂಕಾ ಗಾಂಧಿ, ಆಪ್ ಮುಖಂಡರು ಸೇರಿದಂತೆ ಹಲವರ ಬಗ್ಗೆ ತುಂಬಾ ಕೀಳು ಮಟ್ಟದ ಕಾಮೆಂಟ್‌ಗಳನ್ನು ಹಾಕಿದ್ದರು.

 

“ಇದು ಅತಿರೇಕದ ಸಂಗತಿ. ಮಹಿಳೆಯರು ಮತ್ತು ಅಲ್ಪಸಂಖ್ಯಾತರ ವಿರುದ್ಧದ ಅಪರಾಧಗಳ ಬಗ್ಗೆ ರಾಜ್ಯವು ಉದಾಸೀನತೆಯ ಜೊತೆಗೆ ಉಗ್ರವಾದ ಮತ್ತು ಅಸಹಿಷ್ಣುತೆ ಬೆಳೆಯುತ್ತಿದೆ. ಒಂದು ಧರ್ಮವನ್ನು ಗುರಿಯಾಗಿಸಲು ‘ಲವ್ ಜಿಹಾದ್’ ಎಂಬ ಪದವನ್ನು ಬಳಸುವುದು ನಿಜವಾಗಿಯೂ ಸಾಂವಿಧಾನಿಕವೇ?” ಎಂದು ಟ್ವಿಟ್ಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

ಮತ್ತೊಬ್ಬ ಬಳಕೆದಾರರು, “ಎನ್‌ಸಿಡಬ್ಲ್ಯೂ ಮತ್ತು ಅದರ ಅಧ್ಯಕ್ಷರು ‘ಲವ್ ಜಿಹಾದ್’ ಎಂದರೇನು ಎಂಬುದನ್ನು ಸ್ಪಷ್ಟಪಡಿಸುತ್ತಾರೆಯೇ? ಕೆಲವು ಉಗ್ರಗಾಮಿ ಗುಂಪುಗಳು ಈ ಪದವನ್ನು ಬಳಸುತ್ತಿರುವ ಅದೇ ಅರ್ಥದಲ್ಲಿ ನೀವು ಬಳಸುತ್ತಿದ್ದೀರಾ? ಎಂದು ಕೇಳಿದ್ದಾರೆ.

ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿರುವ ರೇಖಾ ಶರ್ಮಾ, “ನನ್ನ ಖಾತೆಯಲ್ಲಿ ಅನುಮಾನಾಸ್ಪದ ಚಟುವಟಿಕೆಗಳು ನಡೆಯುತ್ತಿರುವುದರಿಂದ ನಾನು ಟ್ವಿಟ್ಟರ್‌ಗೆ ದೂರು ನೀಡಿದ್ದೇನೆ ಮತ್ತು ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಟ್ರೋಲ್‌ಗಳಿಗೆ ಉತ್ತರಿಸಲು ಇಷ್ಟಪಡುವುದಿಲ್ಲ” ಎಂದಿದ್ದಾರೆ.

ಸದ್ಯ ಮಹಿಳಾ ಆಯೋಗದ ಮುಖ್ಯಸ್ಥೆ ತನ್ನ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಿದ್ದರೂ ಸಹ ಅವರ ಹಳೆಯ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.


ಇದನ್ನೂ ಓದಿ: ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...