Homeಕರ್ನಾಟಕವಿಪಕ್ಷ ನಾಯಕನ ಸ್ಥಾನ, ರಾಜ್ಯಧ್ಯಕ್ಷರ ಆಯ್ಕೆ ವಿಳಂಬವಾಗಿದ್ದು ನೋವಿನ ಸಂಗತಿ: ಸದಾನಂದ ಗೌಡ ಬೇಸರ

ವಿಪಕ್ಷ ನಾಯಕನ ಸ್ಥಾನ, ರಾಜ್ಯಧ್ಯಕ್ಷರ ಆಯ್ಕೆ ವಿಳಂಬವಾಗಿದ್ದು ನೋವಿನ ಸಂಗತಿ: ಸದಾನಂದ ಗೌಡ ಬೇಸರ

- Advertisement -
- Advertisement -

ವಿಧಾನಸಭೆ ವಿಪಕ್ಷ ನಾಯಕನ ಆಯ್ಕೆ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಆಯ್ಕೆಗೆ ಪಕ್ಷದ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವ ಬಗ್ಗೆ ಸಂಸದ ಡಿ.ವಿ ಸದಾನಂದ ಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ”ನಿಜಕ್ಕೂ ಇಷ್ಟು ವಿಳಂಬ ಆಗಿರೋದು ನೋವಿನ ಸಂಗತಿ” ಎಂದಿದ್ದಾರೆ.

ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಖಂಡಿತವಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಆಯ್ಕೆ ವಿಳಂಬ ಆಗಿರೋದು ಹೌದು, ಇದು ನಮಗೆಲ್ಲ ಅತ್ಯಂತ ನೋವು ತಂದಿದೆ. ನಾನು ನಮ್ಮ ವರಿಷ್ಠರ ಬಳಿ ಮನವಿ ಮಾಡುತ್ತೇನೆ. ಈಗಲಾದರೂ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಬೇಗ ಮಾಡಿ, ಈ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ವರಿಷ್ಠರು ಉತ್ತರ ಕೊಡಬೇಕು” ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಜೆಡಿಎಸ್‌ನೊಂದಿಗಿನ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ”ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್ ಪಕ್ಷದ ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಮ್ಮ ಕರ್ನಾಟಕದ ಯಾವುದೇ ಬಿಜೆಪಿ ನಾಯಕರ ಜೊತೆಗೂ ವರಿಷ್ಠರು ಚರ್ಚೆ ಮಾಡಿಲ್ಲ. ನಮ್ಮನ್ನು ಹೊರಗಿಟ್ಟೇ ಅವರು ತೀರ್ಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

”ಎನ್.ಡಿ.ಎ ಮತ್ತಷ್ಟು ಬಲಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ವಿಚಾರದ ಬಗ್ಗೆ ತೀರ್ಮಾನ ಮಾಡುವಾಗ ನಮ್ಮನ ಹೊರಗಿಡುತ್ತಾರೆ. ಇದು ಕರ್ನಾಟಕಕ್ಕೆ ಸೀಮಿತ ಆಗಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಮತ ಕ್ರೂಡೀಕರಣ ಆಗಬೇಕಿದೆ‌. ಹಾಗಾಗಿ ಹೈ ಲೆವೆಲ್‌ನಲ್ಲಿ ಚರ್ಚೆಯಾಗಲಿದೆ. ಅವರು ತೆಗೆದುಕೊಂಡ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಇದೇ ವೇಳೆ ಸದಾನಂದ ಗೌಡ ಸ್ಪಷ್ಟಣೆ ನೀಡಿದ್ದಾರೆ.

ಇದನ್ನೂ ಓದಿ: ಜಾತಿ ಗಣತಿ ಪ್ರಕಟಿಸುವ ಬಿಹಾರ ಸರ್ಕಾರದ ನಿರ್ಧಾರವನ್ನು ತಡೆಯುವುದಿಲ್ಲ: ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...