Homeಕರ್ನಾಟಕರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಒಳಒಪ್ಪಂದವೇ ಕಾರಣ ಎಂದ ಸದಾನಂದಗೌಡ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ನಮ್ಮ ಪಕ್ಷದ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು. ಇನ್ನು ಕೆಲವು ಕಡೆ ನಮ್ಮ ಪಕ್ಷದಲ್ಲಿ ಒಳಒಪ್ಪಂದಗಳು ನಡೆದಿವೆ ಎಂದು ಬಿಜೆಪಿ ಸಂಸದ ಡಿ ವಿ ಸದಾನಂದಗೌಡ ಹೇಳಿದ್ದಾರೆ.

ಬಿಜೆಪಿಯು ವಿಧಾನಸಭಾ ಚುನಾವಣೆಯಲ್ಲಿ ಬಹಳ ಹೀನಾಯವಾಗಿ ಸೋತ ಬಳಿಕ, ಪಕ್ಷದ ನಾಯಕರು ಜಿಲ್ಲಾ ಕೇಂದ್ರಗಳಲ್ಲಿ ಸೋಲಿನ ಪರಾಮರ್ಶೆ ನಡೆಸುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ಹೊಂದಾಣಿಕೆ ರಾಜಕಾರಣವೇ ಸೋಲಿಗೆ ಕಾರಣ ಎಂದು ಹೇಳಿಕೊಂಡಿದ್ದಾರೆ. ಇದೀಗ ಸದಾನಂದಗೌಡ ಕೂಡ ಅದೇ ಮಾತನ್ನು ಮುಂದುವರೆಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಹಾಸನ ಮತ್ತು ಚಿಕ್ಕಮಗಳೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿರುವುದು ಎಲ್ಲರಿಗೂ ತಿಳಿದಿದೆ ಎಂದು ಹೇಳಿದರು.

”ಹೊಂದಾಣಿಕೆ ರಾಜಕಾರಣಕ್ಕೆ ಹಾಸನದಲ್ಲಿ ನಮ್ಮ ಅಭ್ಯರ್ಥಿ ಸೋಲಬೇಕಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಮತಗಳನ್ನು ನೋಡಿದರೆ ಹೊಂದಾಣಿಕೆ ರಾಜಕಾರಣ ಅರ್ಥವಾಗುತ್ತದೆ” ಎಂದರು.

”ಸಿಟಿ ರವಿ ಚಿಕ್ಕಮಗಳೂರು ಕ್ಷೇತ್ರದಲ್ಲೂ ಈ ಹೊಂದಾಣಿಕೆ ರಾಜಕಾರಣ ನೋಡಬಹುದು. ಇಲ್ಲಿ ಜೆಡಿಎಸ್‌ ಅಧಿಕೃತವಾಗಿ ಘೋಷಣೆ ಮಾಡಿದೆ. ಇದಲ್ಲದೇ ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್ ಬೆಂಬಲಿಸಿದ್ದಾರೆ. ಇದು ಒಳ ಒಪ್ಪಂದದ ರಾಜಕಾರಣಕ್ಕೆ ಉಂಟಾದ ಸೋಲು ನಮ್ಮದು” ಎಂದು ಹೇಳಿದ್ದಾರೆ.

”ನಮ್ಮ ಪಕ್ಷದಲ್ಲಿ ಒಳಒಪ್ಪಂದ ಆಗಿಯೇ ಇಲ್ಲ ಎಂದು ಹೇಳುವುದಿಲ್ಲ. ಕೆಲವರು ವೈಯಕ್ತಿಕ ದ್ವೇಷಕ್ಕಾಗಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಅಂತವರ ಬಗ್ಗೆ ಈಗಾಗಲೇ ಪಕ್ಷ ಒಂದು ನಿರ್ಧಾರಕ್ಕೆ ಬಂದಿದೆ. ಈಗ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಸಭೆಗಳು ನಡೆಯುತ್ತಿವೆ. ಈ ಸಭೆಯಲ್ಲಿ ಸೋಲಿನ ಪರಾಮರ್ಶೆ ನಡೆಯುತ್ತಿದೆ. ಒಳ ಒಪ್ಪಂದ ಮಾಡಿಕೊಂಡವರ ಬಗ್ಗೆ ಪಕ್ಷ ಖಂಡಿತ ನಿರ್ಧಾರ ತೆಗೆದುಕೊಳ್ಳುತ್ತದೆ. ಸಂಘಟನೆಯಲ್ಲಿ ತಪ್ಪು ಮಾಡಿದವರನ್ನು ತಿದ್ದುವ ಕೆಲಸವನ್ನು ಮಾಡುತ್ತೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಬಾಗಲಕೋಟೆ: ಬೊಮ್ಮಾಯಿ ಭಾಗಿಯಾಗಿದ್ದ ಬಿಜೆಪಿ ಸಭೆಯಲ್ಲಿ ಗಲಾಟೆ

ಒಳ ಒಪ್ಪಂದದಿಂದ ಜಿಲ್ಲೆಯಲ್ಲಿ ಬಿಜೆಪಿಗೆ ಸೋಲು: ಮುಖಂಡರ ಆರೋಪ

ಸೋಮವಾರ ಬಾಗಲಕೋಟೆಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಸೋಲಿಗೆ ಎರಡು ಬಣಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡು ದೊಡ್ಡ ಗಲಾಟೆಯೇ ನಡೆಯಿತು.

ಜಿಲ್ಲಾ ಮುಖಂಡರ ಸಭೆಯಲ್ಲಿ ಗದ್ದಲ-ಗಲಾಟೆ ನಡೆದು ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ಮುರುಗೇಶ್ ನಿರಾಣಿ ಅವರ ಎದುರೇ ಈ ಘಟನೆ ನಡೆದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆಗಾಗಿ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರೈಸಿದ ಸಂಭ್ರಮಾಚರಣೆಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಭಾಗವಹಿಸಿದ್ದರು.

ಪ್ರಮುಖರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಿಜೆಪಿ ಅಭ್ಯರ್ಥಿ ಸೋಲಿಗೆ ಎರಡು ಗುಂಪುಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡವು. ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಬಿಜೆಪಿ ನಾಮನಿರ್ದೇಶಿತ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪೂಜಾರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಪೂಜಾರ ಪಾಳಯದ ಕೆಲವು ಬೆಂಬಲಿಗರನ್ನು ಸಭೆಯಿಂದ ಹೊರಗಿಡುವಂತೆ ಚರಂತಿಮಠ ಬೆಂಬಲಿಗರು ಒತ್ತಾಯಿಸಿದರು. ಚರಂತಿಮಠ ಅವರೇ ಪದೇ ಪದೇ ಮನವಿ ಮಾಡಿದರೂ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿದರು ಮತ್ತು ಎರಡೂ ಬಣಗಳ ಕೆಲವು ಬೆಂಬಲಿಗರನ್ನು ಸ್ಥಳದಿಂದ ಹೊರಹೋಗುವಂತೆ ಕೇಳಲಾಯಿತು. ಸ್ವಲ್ಪ ಸಮಯದ ನಂತರ ಬೊಮ್ಮಾಯಿ ಮತ್ತು ಯತ್ನಾಳ್ ಸ್ಥಳಕ್ಕೆ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...