Homeಮುಖಪುಟಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು...! - ರಾಹುಲ್ ಗಾಂಧಿ

ಸದ್ದಾಂ ಹುಸೇನ್, ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು…! – ರಾಹುಲ್ ಗಾಂಧಿ

ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದ್ದು, ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ

- Advertisement -
- Advertisement -

“ಸದ್ದಾಂ ಹುಸೇನ್ ಮತ್ತು ಗಡಾಫಿ ಕೂಡಾ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ಹೇಳಿರುವ ರಾಹುಲ್ ಗಾಂಧಿ, ಮತ್ತೊಮ್ಮೆ ಭಾರತದ ಪ್ರಜಾಪ್ರಭುತ್ವ ಅವನತಿಯತ್ತ ಸಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಬ್ರೌನ್ ವಿಶ್ವವಿದ್ಯಾಲಯದ ಅಶುತೋಷ್ ವರ್ಷನಿ ಅವರೊಂದಿಗಿನ ಆನ್‌ಲೈನ್ ಸಂವಾದದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, “ಇರಾಕ್‌ನ ಸರ್ವಾಧಿಕಾರಿ ಸದ್ದಾಂ ಹುಸೇನ್ ಹಾಗೂ ಲಿಬಿಯಾದ ಮುಅಮ್ಮರ್ ಗಡಾಫಿ ಸಹ ಚುನಾವಣೆಯಲ್ಲಿ ಗೆಲ್ಲುತ್ತಿದ್ದರು” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂಬ ಅಧ್ಯಯನದ ವರದಿಗಳ ಆಧಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, “ಸದ್ದಾಂ ಹುಸೇನ್ ಮತ್ತು ಗಡಾಫಿ ಸಹ ಚುನಾವಣೆ ನಡೆಸುತ್ತಿದ್ದರು. ಜೊತೆಗೆ ಅದರಲ್ಲಿ ಗೆಲುವನ್ನೂ ಸಾಧಿಸುತ್ತಿದ್ದರು. ಅಲ್ಲಿ ಮತದಾನ ನಡೆಯುತ್ತಿರುವುದು ಮುಖ್ಯವಲ್ಲ. ಆದರೆ ಆ ಮತವನ್ನು ರಕ್ಷಿಸಲು ಯಾವುದೇ ಸಾಂವಿಧಾನಿಕ ಚೌಕಟ್ಟು ಇರಲಿಲ್ಲ ಎಂಬುದು ಮುಖ್ಯ” ಎಂದು ಹೇಳಿದರು.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

“ಚುನಾವಣೆ ಎಂಬುದು ಜನರು ಮತ ಯಂತ್ರಗಳಲ್ಲಿ ಬಟನ್ ಒತ್ತುವುದು ಮಾತ್ರವಲ್ಲ. ಚುನಾವಣೆ ಎಂಬುದು ನಿರೂಪಣೆಯ ಕುರಿತದ್ದಾಗಿದ್ದು, ದೇಶದ ಸಾಂವಿಧಾನಿಕ ಚೌಕಟ್ಟು ಸರಿಯಾಗಿ ಕಾರ್ಯನಿರ್ವಹಿಸುತ್ತಿದೆಯೇ? ಚುನಾವಣೆ ನ್ಯಾಯಯುತವಾಗಿ ನಡೆಯುತ್ತಿದೆಯೇ? ಸಂಸತ್ತಿನಲ್ಲಿ ಚರ್ಚೆ ನಡೆಯುತ್ತಿದೆಯೇ? ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದಾಗಿದೆ. ಮತದಾನದಲ್ಲಿ ಈ ಎಲ್ಲ ವಿಷಯಗಳು ಮುಖ್ಯವೆನಿಸುತ್ತದೆ” ಎಂದು ಹೇಳಿದರು.

ಭಾರತದ ಪ್ರಜಾಪ್ರಭುತ್ವ ಈಗ ಚುನಾಯಿತ ನಿರಂಕುಶಾಧಿಪತ್ಯದ ಸ್ಥಿತಿಗೆ ಇಳಿದಿದೆ ಎಂದು ಸ್ವೀಡನ್‌ನ ಗೊಟೆನ್‌ಬರ್ಗ್ ವಿಶ್ವವಿದ್ಯಾಲಯದ ವಿ-ಡೆಮ್ ಸ್ವತಂತ್ರ ಸಂಶೋಧನಾ ಸಂಸ್ಥೆಯ ಪ್ರಜಾಪ್ರಭುತ್ವ ವರದಿ 2021ರಲ್ಲಿ ಉಲ್ಲೇಖಿಸಿದೆ.

ಅಮೆರಿಕದ ಫ್ರೀಡಮ್ ಹೌಸ್ ಭಾರತವನ್ನು ‘ಮುಕ್ತ ದೇಶ’ದಿಂದ ‘ಭಾಗಶಃ ಮುಕ್ತ ದೇಶ’ ಎನ್ನುವ ದರ್ಜೆಗೆ ಇಳಿಸಿ, ಭಾರತದಲ್ಲಿ ಪ್ರಜಾಪ್ರಭುತ್ವ ಅವನತಿಯಾಗುತ್ತಿದೆ ಎಂದು ವರದಿ ಬಿಡುಗಡೆಗೊಳಿಸಿತ್ತು.

ಈ ವರದಿಗಳನ್ನು ಆಧರಿಸಿ, ರಾಹುಲ್ ಗಾಂಧಿ ಭಾರತ ಇನ್ನುಮುಂದೆ ಪ್ರಜಾಪ್ರಭುತ್ವ ರಾಷ್ಟ್ರವಲ್ಲ ಎಂದು ಹೇಳಿದ್ದರು.


ಇದನ್ನೂ ಓದಿ: ಭಾರತ ಈಗ ಪ್ರಜಾಪ್ರಭುತ್ವ ರಾಷ್ಟ್ರವಲ್ಲ: ಸ್ವೀಡನ್ ವರದಿ ಉಲ್ಲೇಖಿಸಿದ ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...