Homeಮುಖಪುಟತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

‘ಪೆರಿಯಾರ್ ದ್ರಾವಿಡರ್‌‌ ಕಳಗಂ ಚಳವಳಿಯ ನಾಯಕರಷ್ಟೇ ಅಲ್ಲ. ಅವರು ತಮಿಳರಿಗೇ ನಾಯಕರು. ಇಂಥ ವ್ಯಕ್ತಿಯ ಪ್ರತಿಮೆಯನ್ನು ವಿರೂಪಗೊಳಿಸಿರುವವರನ್ನು ಗಡಿಪಾರು ಮಾಡಬೇಕು‘ - ಸ್ಟಾಲಿನ್

- Advertisement -
- Advertisement -

ಸಮಾಜ ಸುಧಾರಣಾವಾದಿ ನಾಯಕ ಇ.ವಿ.ರಾಮಸ್ವಾಮಿ ಪೆರಿಯಾರ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಕೇಸರಿ ಬಣ್ಣ ಬಳಿದಿದ್ದು, ತಮಿಳುನಾಡಿನ ರಾಜಕೀಯ ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ತಮಿಳುನಾಡಿನ ಇನಾಮ್‌ಕೊಲತ್ತೂರ್‌ನ ಸಮತುವಾಪುರಂ ಕಾಲೋನಿಯಲ್ಲಿರುವ ಪೆರಿಯಾರ್‌ ಪ್ರತಿಮೆಗೆ ಕೇಸರಿ ಬಣ್ಣ ಬಳಿಯಲಾಗಿದೆ. ಪ್ರತಿಮೆಯ ಬಳಿ ಚಪ್ಪಲಿ ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಪ್ರತಿಮೆಯನ್ನು ವಿರೂಪಗೊಳಿಸಿರುವ ಇಂಥ ವಿಧ್ವಂಸಕ ಕೃತ್ಯದ ವಿರುದ್ಧ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Explainer: ಕೃಷಿ ಮಸೂದೆಗಳಿಂದ ರೈತರಿಗೆ ಲಾಭವಾಗಲಿದೆಯೇ?

ಘಟನೆಯಿಂದ ತೀವ್ರ ಆಕ್ರೋಶಗೊಂಡ ಸ್ಥಳೀಯರು ದಿಢೀರನೆ ಪ್ರತಿಭಟನೆ ನಡೆಸಿದರು. ಇದರಿಂದ ದಿಂಡಿಗಲ್‌ ಹೆದ್ದಾರಿಯಲ್ಲಿ ಕೆಲ ಕಾಲ ಸಂಚಾರ ಅಸ್ತವ್ಯಸ್ಥವಾಯಿತು. ವಿಧ್ವಂಸಕ ಕೃತ್ಯವನ್ನು ವಿರೋಧಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

ಪ್ರಕರಣದ ಬಗ್ಗೆ ಡಿಎಂಕೆ ಪಕ್ಷದ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಸೇರಿದಂತೆ, ವಿವಿಧ ಪಕ್ಷಗಳ ರಾಜಕೀಯ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಪೆರಿಯಾರ್ ದ್ರಾವಿಡರ್‌‌ ಕಳಗಂ ಚಳವಳಿಯ ನಾಯಕರಷ್ಟೇ ಅಲ್ಲ. ಅವರು ತಮಿಳರಿಗೇ ನಾಯಕರು. ಇಂಥ ವ್ಯಕ್ತಿಯ ಪ್ರತಿಮೆಯನ್ನು ವಿರೂಪಗೊಳಿಸಿರುವವರನ್ನು ಗಡಿಪಾರು ಮಾಡಬೇಕು‘ ಎಂದು ಸ್ಟಾಲಿನ್ ಹೇಳಿದ್ದಾರೆ.  ಪೆರಿಯಾರ್ ಅವರನ್ನು ಅವಮಾನಿಸುತ್ತಿದ್ದೇವೆಂದು ಭಾವಿಸಿ ಇಂತಹ ಕೆಲಸಗಳನ್ನು ಮಾಡುವವರು ತಮ್ಮನ್ನು ತಾವೇ ಅವಮಾನಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ದ್ರಾವಿಡ ನಾಡಿನ ಹಿಂದಿ ಹೇರಿಕೆ ವಿರೋಧಿ ಚಳುವಳಿಯ ಇತಿಹಾಸ ಮತ್ತು ಪ್ರಸ್ತುತ ರಾಜಕಾರಣವೆಂಬ ನಾಟಕದ ಸುತ್ತ!

ತಮಿಳುನಾಡು ಉಪಮುಖ್ಯಮಂತ್ರಿ ಓ.ಪನ್ನಿಸೆಲ್ವಂ ಪ್ರತಿಮೆ ವಿರೂಪಗೊಳಸಿದವರ ವಿರುದ್ಧ ತಮಿಳುನಾಡು ಸರ್ಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪ್ರಕರಣ ಕುರಿತು ಅನೇಕ ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಿಎಂಕೆ ನಾಯಕ ಎಸ್ ರಾಮದಾಸ್, ಎಂಡಿಎಂಕೆ ಸಂಸ್ಥಾಪಕ ಮತ್ತು ರಾಜ್ಯಸಭಾ ಸಂಸದ ವೈಕೊ, ಎಎಂಎಂಕೆ ನಾಯಕ ಮತ್ತು ಸ್ವತಂತ್ರ ಶಾಸಕ ಟಿ ಟಿ ವಿ ದಿನಕರನ್ ಮತ್ತು ವಿಸಿಕೆ ನಾಯಕ ಥೋಲ್ ತಿರುಮಾವಾಲವನ್, ಸಂಸದರು ಸಹ ಪೆರಿಯಾರ್ ಅವರ ಪ್ರತಿಮೆಗನ್ನು ಗುರಿಯಾಗಿಸಿಕೊಂಡ ಇತ್ತೀಚಿಗೆ ನಡೆದ ಘಟನೆಗಳನ್ನು ಟೀಕಿಸಿದರು ಮತ್ತು ಪ್ರತಿಮೆ ವಿರೂಪಗೊಳಿಸಿದ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಈ ಹಿಂದ ಕೂಡ ಇದೇ ರೀತಿ ಕೊಯಮತ್ತೂರ್‌‌ ಸುಂದರಪುರಂ ಬಳಿಯ ಪೆರಿಯಾರ್ ಪ್ರತಿಮೆಯೊಂದಕ್ಕೆ ಕೇಸರಿ ಬಣ್ಣ ಬಳಿಯಲಾಗಿತ್ತು. ಇದು ರಾಜ್ಯದಲ್ಲಿ ಎರಡನೇ ಪ್ರಕರಣವಾಗಿದೆ.


ಇದನ್ನೂ ಓದಿ: ತಮಿಳುನಾಡು: ಪೆರಿಯಾರ್‌ ಪ್ರತಿಮೆಗೆ ಕೇಸರಿ ಬಣ್ಣ ಎರಚಿ ಅವಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...