Homeಮುಖಪುಟರಾಮಮಂದಿರ ಉದ್ಘಾಟನೆ ದಿನ ಮಸೀದಿ ಮೇಲೆ ಕೇಸರಿ ಧ್ವಜ ಹಾರಾಟ: 11 ಮಂದಿ ಬಂಧನ

ರಾಮಮಂದಿರ ಉದ್ಘಾಟನೆ ದಿನ ಮಸೀದಿ ಮೇಲೆ ಕೇಸರಿ ಧ್ವಜ ಹಾರಾಟ: 11 ಮಂದಿ ಬಂಧನ

- Advertisement -
- Advertisement -

ಉತ್ತರಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಮೊಘಲರ ಕಾಲದ ಮಸೀದಿಯೊಂದರ ಮೇಲೆ ಮತ್ತು ಒಳಗೆ ಕೇಸರಿ ಧ್ವಜ ಹಾರಾಟ ನಡೆಸಲಾಗಿದ್ದು, ಘಟನೆಗೆ ಸಂಬಂಧಿಸಿ 11 ಮಂದಿ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಮಮಂದಿರದ ಉದ್ಘಾಟನೆ ವೇಳೆ ಬಲಪಂಥೀಯ ಕಾರ್ಯಕರ್ತರು ನಡೆಸಿದ ಶೋಭಾ ಯಾತ್ರೆಯ ವೇಳೆ ಘಟನೆ ನಡೆದಿದೆ. ಆಗ್ರಾದ ತಾಜ್‌ಗಂಜ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಜನವರಿ 22ರಂದು ಮಧ್ಯಾಹ್ನ ಸುಮಾರು 3:30ಕ್ಕೆ 1,000-1,500 ಜನರು ಲಾಠಿಗಳು ಮತ್ತು ದೊಣ್ಣೆಗಳನ್ನು ಹಿಡಿದುಕೊಂಡು ಮಸೀದಿ ಬಳಿ ಬಂದಿದ್ದರು ಎಂದು ಬಿಲ್ಲೋಚ್‌ಪುರದ ದಿವಾನ್ ಜಿ ಕಿ ಬೇಗಂ ಶಾಹಿ ಮಸೀದಿಯ ಜಹೀರ್ ಉದ್ದೀನ್ ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಹೀರ್ ಉದ್ದೀನ್, ಅವರು ಮಸೀದಿಯಲ್ಲಿ ಸಂಪೂರ್ಣ ಅವ್ಯವಸ್ಥೆಯನ್ನು ಸೃಷ್ಟಿಸಿದರು. ಮಿನಾರ್‌ಗಳು, ಗೋಡೆಗಳು ಮತ್ತು ಮಸೀದಿಯ ಒಳಗೆ ಗೋಡೆಗಳಲ್ಲಿ ಕೇಸರಿ ಧ್ವಜಗಳನ್ನು ಹಾರಿಸಿದ್ದಾರೆ, ಮಸೀದಿಯನ್ನು ಅಪವಿತ್ರಗೊಳಿಸಿದ್ದಾರೆ. ಮಸೀದಿಯೊಳಗಡೆ ಘೋಷಣೆಗಳನ್ನು ಕೂಗಿದರು ಮತ್ತು ಮಸೀದಿಯೊಳಗಿದ್ದವರಿಗೆ ಬೆದರಿಕೆ ಹಾಕಿದರು ಇತರ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಜಹೀರ್‌ ನೀಡಿದ ದೂರಿನ ಮೇರೆಗೆ 1,000-1,500 ಅಪರಿಚಿತ ವ್ಯಕ್ತಿಗಳ ವಿರುದ್ಧ ಸೆಕ್ಷನ್ 147 (ಗಲಭೆ), 148, 452 ಮತ್ತು 505 (2) ಸೇರಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಸನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇದುವರೆಗೆ 11 ಜನರನ್ನು ಬಂಧಿಸಲಾಗಿದೆ ಮತ್ತು ಇತರರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ಜಸ್ವೀರ್ ಸಿಂಗ್ ಹೇಳಿದ್ದಾರೆ. ಬಂಧಿತ ವ್ಯಕ್ತಿಗಳು ಸಂಪರ್ಕಿತ ಸಂಘಟನೆಯ ಬಗ್ಗೆ ಕೂಡ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ಶಾಂತಿ ಕದಡಲು ಕೃತ್ಯ ಎಸಗಲಾಗಿದೆ ಎಂದು ಜಹೀರ್ ಉದ್ದೀನ್ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದು, ಮಸೀದಿಯ ಬಳಿ ಇದ್ದವರು ಸಾಂಭವ್ಯ ಕೋಮು ಗಲಭೆ ತಡೆಯಲು ಸಂಯಮವನ್ನು ಪ್ರದರ್ಶಿಸಿದರು ಮತ್ತು ದುಷ್ಕರ್ಮಿಗಳ ಕೃತ್ಯವನ್ನು ಸಹಿಸಿಕೊಂಡರು ಎಂದು ಹೇಳಿದ್ದಾರೆ.

ಆಗ್ರಾದಲ್ಲಿರುವ ದಿವಾಂಜಿ ಬೇಗಂ ಅವರ ಸಮಾಧಿ ಮತ್ತು ಮಸೀದಿ, ಭಾರತೀಯ ಪುರಾತತ್ವ ಇಲಾಖೆಯಡಿಯಲ್ಲಿ  ಸ್ಮಾರಕಗಳ ಪಟ್ಟಿಯಲ್ಲಿದೆ. ರೌಜಾ ಖ್ವಾಜಾ ಘಿಯಾಸ್-ಉದ್-ದಿನ್ ಖಾಜಿವಾನಿ ಅವರ ಪುತ್ರಿ ದಿವಾಂಜಿ ಬೇಗಂ ಅವರಿಗೆ ಸೇರಿದ ಸಮಾಧಿಯಾಗಿದೆ. ಮಸೀದಿಯ ನಿರ್ಮಾಣದ ವರ್ಷವನ್ನು ಪರ್ಷಿಯನ್ ಶಾಸನದಲ್ಲಿ 1,677 ಎಂದು ಉಲ್ಲೇಖಿಸಲಾಗಿದೆ. ಇದು ಷಾ ಜಹಾನಿ ಶೈಲಿಯ ವಾಸ್ತುಶಿಲ್ಪವನ್ನು ಪ್ರತಿನಿಧಿಸುತ್ತದೆ ಎಂದು ASI ಹೇಳುತ್ತದೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ಭದ್ರತಾ ಸಮಸ್ಯೆ: ಅಮಿತ್‌ ಶಾಗೆ ಪತ್ರ ಬರೆದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...