Homeಕರ್ನಾಟಕಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

ಕುಂದಾಪುರ ಕಾಲೇಜಿನಲ್ಲೂ ‘ಕೇಸರಿ ಶಾಲು ವಿವಾದ’; ಹಿಜಾಬ್‌ ಧರಿಸಿ ಬರದಂತೆ ಪ್ರಿನ್ಸಿಪಾಲ್‌ ಹೇಳಿದ್ದಾರೆಂದು ಪೋಷಕರ ಆರೋಪ

- Advertisement -
- Advertisement -

ಉಡುಪಿ ಸರ್ಕಾರಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಿರುವ ವಿವಾದ ಜೀವಂತ ಇರುವಾಗಲೇ, ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜಿನಲ್ಲೂ ಅದೇ ರೀತಿಯ ವಿವಾದ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ವಿವಾದ ಮಾಡಿದ್ದಾರೆ. ಈ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿನ ಆವರಣದಲ್ಲಿ ಓಡಾಡುತ್ತಿರುವ ವಿಡಿಯೊ ವೈರಲ್ ಆಗಿದೆ.

ಕಾಲೇಜಿನ ಆಡಳಿತ ಮಂಡಳಿಯು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಬರದಂತೆ ಕೇಳಿಕೊಂಡಿದ್ದು, ಆದರೆ ವಿದ್ಯಾರ್ಥಿನಿಯರು ಇದನ್ನು ನಿರಾಕರಿಸಿದ್ದರು. ಇದರ ನಂತರ ಹಲವಾರು ಹಿಂದೂ ಹುಡುಗರು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಹಿಜಾಬ್ ವಿವಾದ: ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಕಡ್ಡಾಯಗೊಳಿಸಿಲ್ಲ ಎಂದ ಶಿಕ್ಷಣ ಇಲಾಖೆ

ವಿವಾದದ ಬಗ್ಗೆ ಆಡಳಿತ ಮಂಡಳಿ ಹಾಗೂ ಸ್ಥಳೀಯ ಶಾಸಕರು ವಿದ್ಯಾರ್ಥಿಗಳ ಪೋಷಕರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮಾತನಾಡಿದ ಪೋಷಕರು, “ಶಾಲೆಯಲ್ಲಿ ನಡೆಯುವ ಎಲ್ಲಾ ಹಿಂದೂ ಹಬ್ಬಗಳ ಸಂದರ್ಭದಲ್ಲಿ ನಾವು ನಮ್ಮ ಮಕ್ಕಳನ್ನು ಕಳುಹಿಸಿದ್ದೇವೆ. ಯಾವುದನ್ನೂ ವಿವಾದ ಮಾಡಿಲ್ಲ. ಹಿಜಾಬ್ ನಮ್ಮ ಸಂಪ್ರದಾಯವಾಗಿದ್ದು, ಅದರ ಬಗ್ಗೆ ನೀವೇಕೆ ವಿವಾದ ಮಾಡುತ್ತೀರ” ಎಂದು ಕೇಳಿದ್ದಾರೆ.

“ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬರಬಾರದು ಎಂದು ಪ್ರಿನ್ಸಿಪಾಲ್ ಹೇಳಿದ್ದಾರೆ. ಇದು ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಿದಂತೆ ಆಗುತ್ತದೆ” ಎಂದು ಮತ್ತೊಬ್ಬ ಪೋಷಕರು ಸಭೆಯಲ್ಲಿ ಹೇಳಿದ್ದಾರೆ.

ಘಟನೆ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸ್ಥಳೀಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, “ಶಾಲೆಯಲ್ಲಿ ನಡೆದ ಸಭೆಯಲ್ಲಿ ಡ್ರೆಸ್‌‌ ಕೋಡ್ ಬಗ್ಗೆ ಒಳ್ಳೆಯ ರೀತಿಯಲ್ಲಿ ಹೇಳಿದ್ದೇನೆ. ಇದರ ಫಲಿತಾಂಶ ಏನು ಎಂದು ಹೇಳಲು ಸಾಧ್ಯವಿಲ್ಲ. ನಾನು ಎರಡು ಗಂಟೆ ಮಾನವೀಯತೆಯಲ್ಲಿ ಮಾತನಾಡಿದ್ದೇನೆ. ಸರ್ಕಾರದ ಆದೇಶ ತಿಳಿಸಿದ್ದೇನೆ. ನಮಗೆ ಮಕ್ಕಳೆಲ್ಲವೂ ಒಂದೇ, ಯಾರಿಗೂ ಅನ್ಯಾಯ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಕಾಲೇಜಿಗೆ ಕರೆ ಮಾಡಿದ್ದರೂ, ಪ್ರಿನ್ಸಿಪಾಲ್‌ ಸಂಪರ್ಕಕ್ಕೆ ಲಭ್ಯವಾಗಿಲ್ಲ.

ಇದನ್ನೂ ಓದಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...