Homeಚಳವಳಿಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಜ.29 ರಂದು ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ: ತೀಸ್ತಾ ಸೆಟಲ್ವಾಡ್ ಭಾಗಿ

ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

- Advertisement -
- Advertisement -

ಮಂಡ್ಯ ಜಿಲ್ಲಾ ಸಮಾನ ಮನಸ್ಕರ ವೇದಿಕೆ ವತಿಯಿಂದ ಗಣರಾಜ್ಯೋತ್ಸವ ಮತ್ತು ಗಾಂಧಿ ನೆನಪಿನಲ್ಲಿ ಜ.29ರಂದು ಶ್ರೀರಂಗಪಟ್ಟದಲ್ಲಿ ಸಾಮರಸ್ಯ ಸಹಬಾಳ್ವೆ ಸಂಗಮ ಸಮಾವೇಶ ನಡೆಯಲಿದ್ದು, ಖ್ಯಾತ ಮಾನವ ಹಕ್ಕು ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಭಾಗವಹಿಸಲಿದ್ದಾರೆ. ಅಲ್ಲದೆ ಸಹಬಾಳ್ವೆ ಕರ್ನಾಟಕ ಸಂಘಟನೆಯ ವತಿಯಿಂದ ರಾಜ್ಯದ ಹಲವೆಡೆ ಮನೆ-ಮನಕ್ಕೂ ಸಹಬಾಳ್ವೆ ಸಂದೇಶ ಮತ್ತು ಸ್ನೇಹ ಕೂಟಗಳನ್ನು ಹಮ್ಮಿಕೊಳ್ಳಲಾಗಿದೆ.

ರಾಜ್ಯದಲ್ಲಿ ಮತ್ತು ದೇಶದಲ್ಲಿ ದ್ವೇಷ ಬಿತ್ತಲಾಗುತ್ತಿದೆ. ರಾಜಕೀಯ ಲಾಭಕ್ಕಾಗಿ ಮಹನೀಯರ ಚಾರಿತ್ರ್ಯವಧೆ ಮಾಡಲಾಗುತ್ತಿದೆ. ಸುಳ್ಳುಗಳನ್ನು ಬಿತ್ತಿ ಸಮುದಾಯಗಳನ್ನು ಎತ್ತಿ ಕಟ್ಟಲಾಗುತ್ತಿದೆ. ಇಂತಹ ದುಷ್ಕೃತ್ಯಗಳಿಗೆ ಜಿಲ್ಲೆಯನ್ನು ಬಲಿಕೊಡುತ್ತಿರುವುದು ದುರಂತ. ಇಂತಹ ವಿಷಮ ಸ್ಥಿತಿಯಲ್ಲಿ ಜಿಲ್ಲೆಯ ನೈಜ ಇತಿಹಾಸವನ್ನು, ಕೋಮು ಸೌಹಾರ್ದತೆಯನ್ನು ಜನರಿಗೆ ತಿಳಿಸಲು ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮತಾಂಧರು ಇತ್ತೀಚಿಗೆ ಶ್ರೀರಂಗಪಟ್ಟಣದಲ್ಲಿ ಸಾಮರಸ್ಯ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ಟಿಪ್ಪುವನ್ನು ಕೊಂದವರು ಉರಿಗೌಡ, ನಂಜೇಗೌಡ ಎಂಬ ಸುಳ್ಳನ್ನು ಪಸರಿಸಲಾಗುತ್ತಿದೆ. ಅಸಲಿಗೆ ಅಂತಹ ವ್ಯಕ್ತಿಗಳು ಬದುಕಿದ್ದ ಯಾವುದೇ ದಾಖಲೆಗಳಿಲ್ಲ. (ಮರುದು ಪಾಂಡ್ಯರು (ಪೆರಿಯ ಮರುದು ಮತ್ತು ಚಿನ್ನ ಮರುದು) 18ನೇ ಶತಮಾನದ ಅಂತ್ಯದಲ್ಲಿ ತಮಿಳುನಾಡಿನ ಶಿವಗಂಗೈ ಪ್ರಾಂತ್ಯದಲ್ಲಿ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಹೋರಾಡಿದ್ದರು. ಇವರನ್ನು ಸೆರೆಹಿಡಿದು ಗಲ್ಲಿಗೇರಿಸಲಾಯಿತು ಎಂದು ಇತಿಹಾಸದ ಪುಟಗಳು ಹೇಳುತ್ತವೆ. ಅವರ ಫೋಟೊಗಳನ್ನು ಬಳಿಸಿ ಅವರಿಗೆ ಉರಿಗೌಡ, ನಂಜೇಗೌಡ ಎಂಬ ಹೆಸರು ಕೊಟ್ಟು ಸುಳ್ಳು ಸೃಷ್ಟಿಸಲಾಗುತ್ತಿದೆ.) ಈ ಕುರಿತು ಜನರಿಗೆ ಸತ್ಯದರ್ಶನ ಮಾಡುವುದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಶ್ರೀರಂಗಪಟ್ಟದ ಶ್ರೀರಂಗನಾಥ ದೇವಸ್ಥಾನದ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾಮಾಜಿಕ ಕಾರ್ಯಕರ್ತ ಶಶಿಕಾಂತ್ ಸೆಂಥಿಲ್, ಗಾಂಧಿವಾದಿ ಡಾ.ಸುಜಯ್ ಕುಮಾರ್, ವಿಶ್ರಾಂತ ಕುಲಪತಿ ಸಬಿಹಾ ಭೂಮಿಗೌಡ, ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಕರ್ನಾಟಕ ರಾಜ್ಯ ರೈತಸಂಘದ ಮುಖಂಡ ಬಡಗಲಪುರ ನಾಗೇಂದ್ರ, ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಕೆ.ಎಲ್.ಅಶೋಕ್, ಶಾಂತಿ ಪ್ರಕಾಶನದ ಮುಖ್ಯಸ್ಥರಾದ ಮಹಮದ್‌ ಕುಂಞ, ಸಮಾನ ಮನಸ್ಕರ ವೇದಿಕೆಯ ಪ್ರೊ.ಹುಲ್ಕೆರೆ ಮಹದೇವು ಹಾಗೂ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದುರವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ: ಗೌರಿ ದಿನ: ‘ಹೊಸ ಭಾರತ’ದಲ್ಲಿ ಪತ್ರಿಕೋದ್ಯಮಕ್ಕಿರುವ ಬೆದರಿಕೆಗಳು ಕುರಿತು ಉಪನ್ಯಾಸ, ‘ಗೌರಿ’ ಸಿನಿಮಾ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...