Homeಮುಖಪುಟಸಾಹಿತ್ಯ ಸಮ್ಮೇಳನ ಮಾಂಸಹಾರ ವಿವಾದ| 'ಆಹಾರ ಕ್ರಾಂತಿ' ಅಭಿಯಾನ ಆರಂಭ; ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೈಕ್...

ಸಾಹಿತ್ಯ ಸಮ್ಮೇಳನ ಮಾಂಸಹಾರ ವಿವಾದ| ‘ಆಹಾರ ಕ್ರಾಂತಿ’ ಅಭಿಯಾನ ಆರಂಭ; ಕರ್ನಾಟಕ ರಕ್ಷಣಾ ವೇದಿಕೆಯಿಂದ ಬೈಕ್ ರ‍್ಯಾಲಿ

- Advertisement -
- Advertisement -

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನೂ ನಿಷೇಧ ಮಾಡಲಾಗಿದೆ ಎಂಬ ಕರ್ನಾಟಕ ಸಾಹಿತ್ಯ ಪರಿಷತ್ತಿನ ಆದೇಶದ ವಿರುದ್ಧ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. 86 ವರ್ಷಗಳಿಂದ ಸಮ್ಮೇಳನಗಳಲ್ಲಿ ಬಹುಜನರ ಮಾಂಸಾಹಾರವನ್ನು ಅಘೋಷಿತವಾಗಿ ನಿಷೇಧ ಮಾಡಿರುವುದರ ವಿರುದ್ಧ ಮಂಡ್ಯದ ಜನತೆ ‘ಆಹಾರ ಕ್ರಾಂತಿಗೆ ಆಹ್ವಾನ’ ಎಂಬ ಅಭಿಯಾನ ಆರಂಭಿಸಿದ್ದಾರೆ.

ಮಾಂಸಹಾರ ನಿಷೇಧದ ವಿರುದ್ಧ ಆರಂಭಗೊಂಡಿರುವ ಅಭಿಯಾನಕ್ಕೆ ನಾಡಿನ ಪ್ರಗತಿಪರರು, ಬುದ್ಧಿಜೀವಿಗಳು ಮತ್ತು ಸಾಹಿತಿಗಳು ಬೆಂಬಲ ಸೂಚಿದ್ದಾರೆ. ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕು ಎಂದು ಜಿಲ್ಲಾಡಳಿತ ಮತ್ತು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ.

ಸಮ್ಮೇಳನ‌ಕ್ಕೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ಮಾಂಸಾಹಾರ ನಿಷೇಧದ ವಿಚಾರ ಇನ್ನಷ್ಡು ಗಂಭೀರ ಸ್ವರೂಪ ಪಡೆದುಕೊಂಡಿದೆ.

ರಕ್ಷಣಾ ವೇದಿಕೆಯಿಂದ ಬೈಕ್‌ ರ್‍ಯಾಲಿ

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿಗೆ ಬೈಕ್‌ ರ್‍ಯಾಲಿ ಮಾಡಿದ್ದೇವೆ. 86 ವರ್ಷಗಳಿಂದ ಇದುವರೆಗೂ ನಡೆದಿರುವ ಸಮ್ಮೇಳನಗಳಲ್ಲಿ ಸಸ್ಯಾಹಾರವನ್ನು ಮಾತ್ರ ಕೊಟ್ಟು ನಾಡಿನ ಬಹುಸಂಖ್ಯಾತರ ಮಾಂಸಾಹಾರಕ್ಕೆ ಅಘೋಷಿತ ನಿಷೇಧ ಹೇರಲಾಗಿದೆ” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಮಂಡ್ಯ ಜಿಲ್ಲಾಧ್ಯಕ್ಷರಾದ ಎಚ್‌.ಡಿ. ಜಯರಾಮು ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ (ಡಿ.24) ಅವರು ಮಂಡ್ಯ ನಗರದ ವಿ.ವಿ.ರಸ್ತೆಯಿಂದ ಜಿಲ್ಲಾಧಿಕಾರಗಳ ಕಚೇರಿವರೆಗೆ ಆಯೋಜಿಸಲಾಗಿದ್ದ ಬೈಕ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಈ ಬಾರಿ ನಮ್ಮ ಮಂಡ್ಯದಲ್ಲಿ ನಡೆಯುತ್ತಿರುವ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆಗೆ ಮಾಂಸಾಹಾರವನ್ನೂ ಕೊಡಲೇಬೇಕು. ಇಲ್ಲವಾದರೆ ನಮ್ಮ ಸಂಘಟನೆ ಸಮ್ಮೇಳನ ನಡೆಯುವ ಜಾಗದಲ್ಲಿ ಉಗ್ರ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಸಿದರು.

ಸಂವಿಧಾನದ ಆರ್ಟಿಕಲ್ 51A(ಎಚ್‌) ವೈಜ್ಞಾನಿಕ ಮನೋಭಾವ, ಮಾನವತಾವಾದ ಮತ್ತು ಅಸಮಾನತೆಯ ಸುಧಾರಣೆಗಾಗಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡು ಬಗೆಯ ಆಹಾರವನ್ನು ಸೇವಿಸಲು ಅವಕಾಶ ನೀಡಬೇಕು ಎಂದು ಹೇಳಲಾಗಿದೆ. ಜನರ ತೆರಿಗೆ ಹಣದಲ್ಲಿ ನಡೆಯುವ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಸಂವಿಧಾನ ವಿರೋಧಿ ನಡೆಯಾಗುತ್ತದೆ. ಶುದ್ಧ ಸಸ್ಯಾಹಾರಿ ಸಮ್ಮೇಳನ ನಡೆಸುವುದು ಬಹು ಸಂಖ್ಯಾತರಿಗೆ ಮಾಡುವ ಅಪಮಾನ ಆಗಿದೆ ಎಂದರು.

ಪ್ರಗತಿಪರ ಸಂಘಟನೆಗಳ ಜತೆ ಮಾತುಕತೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕೆಂದು ಬೇಡಿಕೆ ಇಟ್ಟಿರುವ ಪ್ರಗತಿಪರ ಸಂಘಟನೆಗಳ ಜತೆ ಸೋಮವಾರ(ಡಿ.16) ಮಾತುಕತೆ ನಡೆಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಸಮ್ಮೇಳನದ ವೇದಿಕೆ ಸಿದ್ದತೆ ಪರಿಶೀಲನೆ ನಂತರ ಶನಿವಾರ ಮಾತನಾಡಿದ ಅವರು, ಮಾಂಸಾಹಾರ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರು ಭೇಟಿಗೆ ಮನವಿ ಮಾಡಿದ್ದು, ಸೋಮವಾರ ಅವರ ಜತೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ಸಮ್ಮೇಳನದಲ್ಲಿ ಸುಮಾರು ಒಂದರಿಂದ ಒಂದೂವರೆ ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಭಾಗವಹಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ; ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ: ಮಂಡ್ಯ ಡಿಸಿ ಕಚೇರಿ ಎದುರು ಬಾಡೂಟ ಸೇವಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...