Homeಮುಖಪುಟಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

ಸೈಫ್ ಅಲಿ ಖಾನ್ ಇರಿತ ಪ್ರಕರಣ: ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚಿದ್ದು ಹೇಗೆ?

- Advertisement -
- Advertisement -

ಮುಂಬೈ: ಮುಂಬೈ ಪೊಲೀಸರು ನಟ ಸೈಫ್ ಅಲಿ ಖಾನ್ ಅವರ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿಯನ್ನು ಸುಮಾರು ಮೂರು ದಿನಗಳ ಕಾಲ ನಡೆದ ಶೋಧದ ನಂತರ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ಮುಂಜಾನೆ ಬಂಧಿಸಿದ್ದಾರೆ.

ಬಂಧಿತ 30 ವರ್ಷದ ಆರೋಪಿ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್, ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ನಂತರ ಮುಂಬೈನಲ್ಲಿ ‘ವಿಜಯ್ ದಾಸ್’ ಎಂಬ ಹೆಸರನ್ನು ಬದಲಿಸಿಕೊಂಡಿದ್ದನು ಎಂದು ಡಿಸಿಪಿ ಜೋನ್-9  ದೀಕ್ಷಿತ್ ಗೆಡಮ್ ಹೇಳಿದ್ದಾರೆ.

ಬಂಧಿತ ಆರೋಪಿ ಬಾಂಗ್ಲಾದೇಶಿಯಾಗಿದ್ದು, 5-6 ತಿಂಗಳ ಹಿಂದೆ ಮುಂಬೈಗೆ ಬಂದಿದ್ದು, ಅವನು ಕೆಲವು ದಿನಗಳ ಕಾಲ ಮುಂಬೈನಲ್ಲಿ ಮತ್ತು ನಂತರ ಮುಂಬೈ ಸುತ್ತಮುತ್ತ ವಾಸಿಸುತ್ತಿದ್ದನು. ಆರೋಪಿಯು ಮನೆಗೆಲಸದ ಏಜೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ಅವರು ತಿಳಿಸಿದ್ದಾರೆ.

ಜನವರಿ 16ರ ಗುರುವಾರ ಬೆಳಗಿನ ಜಾವ ಬಾಂದ್ರಾ ಪ್ರದೇಶದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಅಲಿ ಖಾನ್ ಅವರ 12ನೇ ಮಹಡಿಯ ಅಪಾರ್ಟ್‌ಮೆಂಟ್‌ಗೆ ಆರೋಪಿ ನುಗ್ಗಿದ್ದನು. ದರೋಡೆ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಿದ ಶರೀಫುಲ್, ನಟನೊಂದಿಗಿನ ಜಗಳದಲ್ಲಿ ಸೈಫ್‌ಗೆ ಹಲವು ಬಾರಿ ಇರಿದಿದ್ದ. ನಂತರ ಆತನು ಸ್ಥಳದಿಂದ ಪರಾರಿಯಾಗಿದ್ದನು.

ಆರೋಪಿಯು ವಿಜಯ್ ದಾಸ್, ಬಿಜೋಯ್ ದಾಸ್ ಮತ್ತು ಮೊಹಮ್ಮದ್ ಇಲಿಯಾಸ್ ಸೇರಿದಂತೆ ಹಲವು ಹೆಸರುಗಳನ್ನು ಹೊಂದಿದ್ದನು ಎಂದು ವರದಿಯಾಗಿದೆ.

ಮುಂಬೈ ಪೊಲೀಸರು ಆರೋಪಿಯನ್ನು ಹೇಗೆ ಬಂಧಿಸಿದರು?

ನಗರ ಅಪರಾಧ ವಿಭಾಗ ಮತ್ತು ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಲು 20 ತಂಡಗಳನ್ನು ರಚಿಸಿದ್ದರು. ಈ ಘಟನೆ ಸಂಬಂಧ ಅವರು ಈಗ ಸಂಬಂಧವಿಲ್ಲದ ಹಲವಾರು ಶಂಕಿತರನ್ನು ಬಂಧಿಸಿದ್ದರು.

ತನಿಖೆಯ ಸಮಯದಲ್ಲಿ ಆರೋಪಿಯು ದಾದರ್ ರೈಲ್ವೆ ನಿಲ್ದಾಣದ ಹೊರಗೆ ಮೂರು ಬಾರಿ ಕಾಣಿಸಿಕೊಂಡಿದ್ದಾನೆ ಮತ್ತು ಅವನು ವರ್ಲಿ ಕೋಳಿವಾಡಕ್ಕೆ ಹೋಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ನೂರಾರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಯಿತು. ನಂತರ ದಾಳಿಕೋರನು ಆ ಪ್ರದೇಶದ ಕಾರ್ಮಿಕ ಗುತ್ತಿಗೆದಾರನನ್ನು ಭೇಟಿ ಮಾಡಿದ್ದಾನೆ ಎಂದು ಪೊಲೀಸರಿಗೆ ತಿಳಿದುಬಂದಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಕಾರ್ಮಿಕ ಗುತ್ತಿಗೆದಾರರನನ್ನು ಪೊಲೀಸರು ಸಂಪರ್ಕಿಸಿದಾಗ 30 ವರ್ಷದ ಆರೋಪಿಯ ಬಗ್ಗೆ ಎಲ್ಲಾ ವಿವರಗಳನ್ನು ಪಡೆದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಗುತ್ತಿಗೆದಾರನ ನಿರ್ದೇಶನದ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಥಾಣೆ ಪಶ್ಚಿಮದ ಹಿರಾನಂದಾನಿ ಎಸ್ಟೇಟ್‌ನಲ್ಲಿರುವ ಟಿಸಿಎಸ್ ಕಾಲ್ ಸೆಂಟರ್‌ನ ಹಿಂದಿರುವ ಮೆಟ್ರೋ ನಿರ್ಮಾಣ ಸ್ಥಳದ ಬಳಿಯ ಅರಣ್ಯ ಪ್ರದೇಶದಲ್ಲಿರುವ ಕಾರ್ಮಿಕ ಶಿಬಿರದಲ್ಲಿ ಪತ್ತೆಹಚ್ಚಿದರು.

ಈ ಹಿಂದೆ ಆರೋಪಿಯು ಥಾಣೆ ಮೂಲದ ಹೋಟೆಲ್‌ನಲ್ಲಿಯೂ ಕೆಲಸ ಮಾಡುತ್ತಿದ್ದನು ಮತ್ತು ಇಲ್ಲಿಯವರೆಗೆ ಅವನ ಹೆಸರಿನಲ್ಲಿ ಯಾವುದೇ ಕ್ರಿಮಿನಲ್ ದಾಖಲೆಗಳು ಕಂಡುಬಂದಿಲ್ಲವೆನ್ನಲಾಗಿದೆ.

ಆರೋಪಿಯು ಸೈಫ್ ಅಲಿ ಖಾನ್ ಅವರ ಅಪಾರ್ಟ್ಮೆಂಟ್‌ ಗೆ ಪ್ರವೇಶಿಸಿದಾಗ ಅವನನ್ನು ನಟನ ಉದ್ಯೋಗಿ ಎಲಿಯಮ್ಮ ಫಿಲಿಪ್ಸ್ ಅಲಿಯಾಸ್ ಲಿಮಾ ಮೊದಲು ನೋಡಿದವರಾಗಿದ್ದಾರೆ. ಅವಳು ಅವನನ್ನು ತಡೆಯಲು ಪ್ರಯತ್ನಿಸಿದಳು. ಆದರೆ ಅವನೊಂದಿಗಿನ ಜಗಳದಲ್ಲಿ ಅವಳ ಕೈಗೆ ಗಾಯಗಳಾಗಿದ್ದವು. ಈ ಸಂದರ್ಭ ಸೈಫ್ ಅಲಿ ಖಾನ್ ಅವರಿಗೆ ಆಕೆಯ ಕಿರುಚಾಟ ಕೇಳಿಬಂತು. ನಂತರ ಅವರು ಮಧ್ಯಪ್ರವೇಶಿಸಿ ದಾಳಿಕೋರನೊಂದಿಗೆ ಹೋರಾಡಿದರು, ಈ ಪ್ರಕ್ರಿಯೆಯಲ್ಲಿ ಅವರು ತೀವ್ರವಾಗಿ ಗಾಯಗೊಂಡರು.

ನಟನಿಗೆ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಅನೇಕ ಶಸ್ತ್ರಚಿಕಿತ್ಸೆಗಳು ನಡೆದವು ಮತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಶುಕ್ರವಾರ ಅವರನ್ನು ತೀವ್ರ ನಿಗಾ ಘಟಕದಿಂದ (ಐಸಿಯು) ವಿಶೇಷ ಕೋಣೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಸೋಮವಾರದೊಳಗೆ ಸೈಫ್ ಅಲಿ ಖಾನ್ ಅವರನ್ನು ಡಿಸ್ಚಾರ್ಜ್ ಮಾಡಬಹುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ವರ್ಷಗಳ ಕೆಳಗೆ ವೈದ್ಯನ ವಿರುದ್ಧ ದೂರು ನೀಡಿದ ದಲಿತ ನರ್ಸ್: ಈಗ ವೈದ್ಯನ ಪ್ರತಿದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...