ಬಿಜೆಪಿ ಸಹ ಸಂಘಟನೆಯಾದ ಬಜರಂಗದಳದ ಕಾರ್ಯಕರ್ತರು ದಲಿತರ ಮೇಲೆ ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಲಿತರು ದನ ಕಡಿದಿದ್ದಾರೆ ಎಂದು ಆರೋಪಿಸಿ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾಗಿ ವರದಿಯಾಗಿದ್ದು, ನಾಲ್ವರು ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಘಟನೆಯು ತಾಲೂಕಿನ ಮಳಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಆರೋಪಿಗಳನ್ನು ಶಿವು, ರವಿ, ಶ್ರೀಜಿತ್ ಗೌಡ ಹಾಗೂ ರವಿ ಮಳಲಿ ಎಂದು ಗುರುತಿಸಲಾಗಿದ್ದು, ಇವರ ವಿರುದ್ದ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ದನ ಕಡಿದ ವಿಚಾರ ತಿಳಿದ ಬಜರಂಗದಳದ ದುಷ್ಕರ್ಮಿಗಳು ಸ್ಥಳಕ್ಕೆ ತೆರಳಿ ದಲಿತರ ಮೇಲೆ ಹಲ್ಲೆ ಮಾಡಿ, ಬೆದರಿಕೆ ಹಾಕಿದ್ದು, ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದ ಪೋಲಿಸರು ಇಬ್ಬರನ್ನು ವಶಪಡಿಸಿಕೊಂಡಿದ್ದಾರೆ.
ಮಳಲಿ ಗ್ರಾಮದ ದಲಿತ ಸಮುದಾಯದ ಲೋಕೇಶ್( 35 ) ಮತ್ತು ಚಂದ್ರು (40) ಎಂಬವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದಾಗಿ ಲೊಕೇಶ್ ಅವರ ತಲೆಗೆ ತೀವ್ರವಾಗಿ ಗಾಯವಾಗಿದೆ ಎಂದು ವರದಿ ಹೇಳಿದೆ.
ಇದನ್ನೂ ಓದಿ: ಮಧ್ಯಪ್ರದೇಶ: ಸವರ್ಣೀಯ ಮಹಿಳೆಯನ್ನು ದಿಟ್ಟಿಸಿದ ಆರೋಪದ ಮೇಲೆ ಗುಂಡು ಹಾರಿಸಿ ದಲಿತ ಯುವಕನ ಕುಟುಂಬದ ಮೂವರ ಹತ್ಯೆ
ಈ ನಡುವೆ ದನ ಕಡಿದ ಅರೋಪದ ಮೇಲೆ ಲೋಕೇಶ್ ಮತ್ತು ಚಂದ್ರು ಅವರ ವಿರುದ್ಧವೂ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವಾರ್ತಾಭಾರತಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.


